ಧಾರವಾಡ: ಡಾ.ದ.ರಾ ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ಡಾ.ದ.ರಾ.ಬೇಂದ್ರೆಯವರ 126 ನೇ ಜನ್ಮದಿನ ಹಾಗೂ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜನವರಿ 31 ರಂದು ಸಂಜೆ 5-30 ಗಂಟೆಗೆ ಸಾಧನಕೇರಿಯ ಬೇಂದ್ರೆ ಭವನದಲ್ಲಿ ಆಯೋಜಿಸಲಾಗಿದೆ.


COMMERCIAL BREAK
SCROLL TO CONTINUE READING

ಸಂಜೆ 5.30 ಕ್ಕೆ ಕವಿ, ಜನಪದ ವಿದ್ವಾಂಸರಾದ ಡಾ.ಸೋಮಶೇಖರ ಇಮ್ರಾಪೂರ ಇವರಿಗೆ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರಿಂದ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡುವರು.ಡಾ. ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷರು ಡಾ. ಡಿ.ಎಮ್. ಹಿರೇಮಠ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.


ಇದನ್ನೂ ಓದಿ: Basavaraja Bommai : ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ : ಸಿಎಂ ಬೊಮ್ಮಾಯಿ


ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಬೆಳಗಾವಿ ವಿಭಾಗ ಜಂಟಿ ನಿರ್ದೇಶಕ ಬಸವರಾಜ ಹೂಗಾರ, ಹಿರಿಯ ಕಥೆಗಾರರು ಹಾಗೂ ಸಹಪ್ರಾಧ್ಯಾಪಕರು ಡಾ. ಸಂಗಮನಾಥ ಲೋಕಾಪುರ ಭಾಗವಹಿಸುವರು.


ಬೆಳಿಗ್ಗೆ 11 ಗಂಟೆಗೆ ನಡೆಯುವ ಡಾ. ಸೋಮಶೇಖರ ಇಮ್ರಾಪೂರ ಅವರ ಸಾಹಿತ್ಯವಲೋಕನ ಕಾರ್ಯಕ್ರಮದಲ್ಲಿ, ಜನಪದ ಸಾಹಿತ್ಯದ ಕುರಿತು ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಡಾ. ಎಮ್.ಬಿ. ಹೂಗಾರ, ಕಾವ್ಯದ ಕುರಿತು ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಡಾ.ಶ್ರೀಪಾದ ಶೆಟ್ಟಿ, ಡಾ.ಸೋಮಶೇಖರ ಇಮ್ರಾಪೂರ ಅವರು ನಡೆದು ಬಂದ ದಾರಿಯ ಕುರಿತು ಡಾ.ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದ ಮುಖ್ಯಸ್ಥ ಡಾ. ನಿಜಲಿಂಗಪ್ಪ ಮಟ್ಟಿಹಾಳ ಅವರು ಮಾತನಾಡುವರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.