ವರುಣಾ ಕ್ಷೇತ್ರದ ಅಭಿವೃದ್ಧಿ ಕಾರ್ಯ ಸಿದ್ದರಾಮಯ್ಯ ಅವಧಿಯಲ್ಲೇ ಪೂರ್ಣವಾಗಿದೆ: ಡಾ.ಯತೀಂದ್ರ

ವರುಣಾ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಲು ಏನೂ ಉಳಿದಿಲ್ಲ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

Updated: Feb 18, 2019 , 04:07 PM IST
ವರುಣಾ ಕ್ಷೇತ್ರದ ಅಭಿವೃದ್ಧಿ ಕಾರ್ಯ ಸಿದ್ದರಾಮಯ್ಯ ಅವಧಿಯಲ್ಲೇ ಪೂರ್ಣವಾಗಿದೆ: ಡಾ.ಯತೀಂದ್ರ

ಮೈಸೂರು: ವರುಣಾ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಲು ಏನೂ ಉಳಿದಿಲ್ಲ. ಎಲ್ಲಾ ಕಾರ್ಯ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗಲೇ ಪೂರ್ಣವಾಗಿದೆ ಎಂದು ಶಾಸಕ ಡಾ.ಯತಿಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. 

ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಅಧಿಕಾರದಲ್ಲಿದ್ದಾಗ ವರುಣಾ ಕ್ಷೇತ್ರದ ಸಂಪೂರ್ಣ ಅಭಿವೃದ್ಧಿ ಮಾಡಿದ್ದಾರೆ. ನಾವೀಗ ಅಲ್ಲಿಇಲ್ಲಿ ಉಳಿದ ಸಣ್ಣಪುಟ್ಟ ಅಭಿವೃದ್ಧಿ ಕಾರ್ಯಗಳನ್ನು ಹುಡುಕಿಕೊಂಡು ಮಾಡುತ್ತಿದ್ದೇವೆ ಎಂದು ಹೇಳಿದರು.

ಈ ಕ್ಷೇತ್ರದಲ್ಲಿ ನಿರುದ್ಯೋಗ ಸಮಸ್ಯೆ ಕಾಡುತ್ತಿದೆ. ಹಾಗಾಗಿ ಇದೇ ಫೆಬ್ರವರಿ 23ರಂದು ಉದ್ಯೋಗ ಮೇಲೆ ಆಯೋಜಿಸಲಾಗಿದೆ. ಈಗಾಗಲೇ ಹಲವು ಕಂಪನಿಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಸ್ಥಳೀಯ ಜನತೆಗೆ ಉದ್ಯೋಗ ಕೊಡಿಸಲು ಪ್ರಯತ್ನಿಸುತ್ತಿರುವುದಾಗಿ ಡಾ.ಯತೀಂದ್ರ ಹೇಳಿದರು.