ಸಂಪುಟ ವಿಸ್ತರಣೆ ವಿಳಂಬ ಪ್ರಜಾಪ್ರಭುತ್ವದ ಹತ್ಯೆಯನ್ನು ಸೂಚಿಸುತ್ತದೆ- ಬಿ.ಸಿ.ಪಾಟೀಲ್
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವುದಕ್ಕೆ ಹಿರೇಕೆರೂರು ಕಾಂಗ್ರೆಸ್ ಶಾಸಕ ಬಿ.ಸಿ.ಪಾಟೀಲ್ ಅಸಮಾಧಾನ ಹೊರಹಾಕಿದ್ದಾರೆ.
ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವುದಕ್ಕೆ ಹಿರೇಕೆರೂರು ಕಾಂಗ್ರೆಸ್ ಶಾಸಕ ಬಿ.ಸಿ.ಪಾಟೀಲ್ ಅಸಮಾಧಾನ ಹೊರಹಾಕಿದ್ದಾರೆ.
ಇನ್ನು ಬಾಕಿ ಉಳಿಸಿರುವ ಸಚಿವ ಖಾತೆ ಮತ್ತು ನಿಗಮ ಮಂಡಳಿಗಳ ಹಂಚಿಕೆಯನ್ನು ಮೈತ್ರಿ ಸರ್ಕಾರವು ಮುಂದೂಡುತ್ತಲೇ ಇದೆ.ಈಗ ಸಚಿವ ಸ್ಥಾನ ಆಕಾಂಕ್ಷಿಯಾಗಿರುವ ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಈಗ ತಮ್ಮ ಅಸಮಾಧಾನವನ್ನು ಟ್ವೀಟ್ ಮೂಲಕ ಹೊರಹಾಕಿದ್ದಾರೆ.
ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆಯನ್ನು ಮುಂದೂಡುತ್ತಿರುವ ಕ್ರಮ ಶಾಸಕರನ್ನು ಅವಮಾನ ಮಾಡಿದ ಹಾಗೆ ಪ್ರಜಾಪ್ರಭುತ್ವವನ್ನು ಹತ್ಯೆಗೈದ ಹಾಗೆ,ಪಕ್ಷದ ಹೆಸರಿನಲ್ಲಿ ಈಗ ಸರ್ವಾಧಿಕಾರಿ ಧೋರಣೆಯನ್ನು ಎತ್ತಿ ಹಿಡಿಯಲಾಗುತ್ತಿದೆ ಎಂದು ಬಿ.ಸಿ.ಪಾಟೀಲ್ ಕಾಂಗ್ರೆಸ್ ಪಕ್ಷದ ವಿರುದ್ದ ಟೀಕಾ ಪ್ರಹಾರ ನಡೆಸಿದ್ದಾರೆ.