Vidhana Parishath ಸಚಿವಾಲಯದ ನೌಕರರಿಗೆ ವಸ್ತ್ರ ಸಂಹಿತೆ ಜಾರಿ

ವಿಧಾನ ಪರಿಷತ್ ಸಚಿವಾಲಯದ ಅಧೀನ ಕಾರ್ಯದರ್ಶಿ ಎಸ್. ಜಯಂತಿ ಅವರು ನೂತನ ಸಿಬ್ಬಂದಿಗೆ ವಸ್ತ್ರ ಸಂಹಿತೆಗೆ ಸಂಬಂಧಿಸಿದ ಸುತ್ತೋಲೆ ಹೊರಡಿಸಿದ್ದಾರೆ. ಸಚಿವಾಲಯದಲ್ಲಿ ಕೆಲಸ ಮಾಡವ ಅಧಿಕಾರಿ ಮತ್ತು ನೌಕರರಲ್ಲಿ ಕರ್ತವ್ಯ ಪ್ರಜ್ಞೆ ಹಾಗೂ ಶಿಸ್ತು ಮೂಡಿಸುವ ನಿಟ್ಟಿನಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

Written by - Zee Kannada News Desk | Last Updated : Feb 27, 2021, 03:04 PM IST
  • ಮಾರ್ಚ್ 1ರಿಂದ ಬಯೋಮೆಟ್ರಿಕ್ ಆಧಾರಿತ ಹಾಜರಾತಿ ಕಡ್ಡಾಯ
  • ಮಾರ್ಚ್ 15ರಿಂದ ಸಮವಸ್ತ್ರಗಳನ್ನು ಧರಿಸಿ ಕರ್ತವ್ಯಕ್ಕೆ ಹಾಜರಾಗಬೇಕು
  • ವಿಧಾನಸೌಧದ ಕಾರಿಡಾರುಗಳಲ್ಲಿ ಗುಂಪಾಗಿ ಸೇರುವಂತಿಲ್ಲ, ಮೊಬೈಲ್‍ನಲ್ಲಿ ಮಾತನಾಡುತ್ತಾ ನಿಲ್ಲುವಂತಿಲ್ಲ
Vidhana Parishath ಸಚಿವಾಲಯದ ನೌಕರರಿಗೆ ವಸ್ತ್ರ ಸಂಹಿತೆ ಜಾರಿ title=
Dress Code For Vidhana Parishath Employees (File Image)

ಬೆಂಗಳೂರು: ರಾಜ್ಯ ಸರ್ಕಾರವು ವಿಧಾನ ಪರಿಷತ್ ಸಚಿವಾಲಯದ (Vidana Parishath Secretariat) ಸಿಬ್ಬಂದಿಗೆ ವಸ್ತ್ರ ಸಂಹಿತೆ (Dress Code) ಕಡ್ಡಾಯಗೊಳಿಸಿ ಆದೇಶಿಸಿದೆ.

ರಾಜ್ಯ ಸರ್ಕಾರದ ಈ ಆದೇಶವು ವಿಧಾನ ಪರಿಷತ್ ಸಚಿವಾಲಯದಲ್ಲಿ ಕೆಲಸ ಮಾಡುವ ಡಿ-ದರ್ಜೆ ನೌಕರರಿಗೆ ಅನ್ವಯ ಆಗಲಿದೆ. ನೂತನ‌ ಆದೇಶದ ಪ್ರಕಾರ ಡಿ-ದರ್ಜೆಯ ಪುರುಷ ನೌಕರರಿಗೆ ಬಿಳಿ ಬಣ್ಣದ ವಸ್ತ್ರ ಎಂತಲೂ ಡಿ-ದರ್ಜೆಯ ಮಹಿಳಾ ನೌಕರರಿಗೆ ಮೆರೂನ್ ಬಣ್ಣದ ವಸ್ತ್ರ ಎಂತಲೂ ಹೇಳಲಾಗಿದೆ.

ಇನ್ನು ಮುಂದೆ ಡಿ ದರ್ಜೆಯ ನೌಕರರು (Employees) ಅವರವರಿಗೆ ಸೂಚಿಸಿರುವ ಸಮವಸ್ತ್ರಗಳನ್ನು ಧರಿಸಿ ಕರ್ತವ್ಯಕ್ಕೆ ಹಾಜರಾಗುವುದು ಕಡ್ಡಾಯ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಸಚಿವಾಲಯದ ಕಾರು ಚಾಲಕರೂ ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕೆಂದು ಆದೇಶದಲ್ಲಿ ಸೂಚಿಸಲಾಗಿದೆ. 

ಇದನ್ನೂ ಓದಿ - ವಿದ್ಯಾರ್ಥಿನಿಯರ ತುಂಡು ಬಟ್ಟೆಗೆ ಬ್ರೇಕ್; ಈ ಮೆಡಿಕಲ್ ಕಾಲೇಜಿನಲ್ಲಿ ಸ್ಕರ್ಟ್, ಜೀನ್ಸ್ ಧರಿಸುವಂತಿಲ್ಲ!

ವಿಧಾನ ಪರಿಷತ್ ಸಚಿವಾಲಯದ ಅಧೀನ ಕಾರ್ಯದರ್ಶಿ ಎಸ್. ಜಯಂತಿ ಅವರು ನೂತನ ಸಿಬ್ಬಂದಿಗೆ ವಸ್ತ್ರ ಸಂಹಿತೆಗೆ  (Dress Code) ಸಂಬಂಧಿಸಿದ ಸುತ್ತೋಲೆ ಹೊರಡಿಸಿದ್ದಾರೆ. ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಕೆಲಸ ಮಾಡವ ಅಧಿಕಾರಿ ಮತ್ತು ನೌಕರರಲ್ಲಿ ಕರ್ತವ್ಯ ಪ್ರಜ್ಞೆ ಹಾಗೂ ಶಿಸ್ತು ಮೂಡಿಸುವ ನಿಟ್ಟಿನಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಲಾಗಿದ್ದು ಇದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಸೂಚಿಸಲಾಗಿದೆ. ಈ ಅದೇಶ ಉಲ್ಲಂಘನೆ ಮಾಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಕೂಡ ತಳಿಸಲಾಗಿದೆ.

ಆದೇಶದಲ್ಲಿ ದಿನಾಂಕವನ್ನೂ ತಿಳಿಸಲಾಗಿದ್ದು ಮಾರ್ಚ್ 1ರಿಂದ ಬಯೋಮೆಟ್ರಿಕ್ ಆಧಾರಿತ ಹಾಜರಾತಿಯನ್ನು ಕಡ್ಡಾಯವಾಗಿ ಮಾಡಲಾಗಿದೆ‌. ಆ ನಂತರ ಮಾರ್ಚ್ 15ರಿಂದ ನೌಕರರು ಹೊಸ ವಸ್ತ್ರ ಸಂಹಿತೆಗೆ ಅನುಗುಣವಾಗಿ ಸಮವಸ್ತ್ರಗಳನ್ನು ಧರಿಸಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಹೇಳಲಾಗಿದೆ.

ಇದನ್ನೂ ಓದಿ - Government Staff: ಕೇಂದ್ರ ನೌಕರರಿಗೆ 'ಗುಡ್‌ ನ್ಯೂಸ್' ನೀಡಿದ ಸರ್ಕಾರ!

ವಾಹನ ಚಾಲಕರ ಬಗ್ಗೆ ಆದೇಶದಲ್ಲಿ ವಿಶೇಷ ಉಲ್ಲೇಖ ಮಾಡಲಾಗಿದೆ. ವಾಹನ ಚಾಲಕರು ಕಡ್ಡಾಯವಾಗಿ ಸಮವಸ್ತ್ರವನ್ನು ಧರಿಸಿ ಕರ್ತವ್ಯಕ್ಕೆ ಹಾಜರಾಗಬೇಕು. ಅವರು ವಿಧಾನಸೌಧದ ಕಾರಿಡಾರುಗಳಲ್ಲಿ ಗುಂಪಾಗಿ ಸೇರುವುದನ್ನು ಮತ್ತು ಮೊಬೈಲ್‍ನಲ್ಲಿ ಮಾತನಾಡುತ್ತಾ ನಿಲ್ಲುವುದನ್ನು ನಿಷೇಸಲಾಗಿದೆ. ಅಲ್ಲದೆ ಸಚಿವಾಲಯದ ಹಿರಿಯ ಅಧಿಕಾರಿಗಳು ತಮ್ಮ ಅಧೀನದಲ್ಲಿರುವ ನೌಕರರಿಗೆ ಅಧಿಕೃತ ಕೆಲಸಗಳಿಗೆ ಮಾತ್ರ ಕಚೇರಿಯಿಂದ ಹೊರಗಡೆ ಹೋಗಲು ಅನುಮತಿ ನೀಡಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News