ಯಾದಗಿರಿ: ಶಾಲೆಯ ವಿದ್ಯಾರ್ಥಿಗಳಿಗೆ ಕನಿಷ್ಟ ಸೌಲಭ್ಯ ಒದಗಿಸುವಲ್ಲಿಯೂ ಯಾದಗಿರಿ (Yadagiri) ಜಿಲ್ಲಾಡಳಿತ ವಿಫಲವಾಗಿದ್ದು, ನೀರಿಗಾಗಿ ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಮೃತ ನವೀನ್ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ; ಮೃತದೇಹ ತರಿಸಲು ಪ್ರಧಾನಿ ಮೋದಿಗೆ ಪತ್ರ


ಜಿಲ್ಲೆಯ ಹುಣಸಗಿ ತಾಲೂಕಿನ ಕನಗೊಂಡನಹಳ್ಳಿಯ ಹಿರಿಯ ಪ್ರಾಥಮಿಕ ಶಾಲೆಯ ಅವ್ಯವಸ್ಥೆಗೆ ಇದು ಕೈಗನ್ನಡಿಯಂತಿದೆ. ಶಾಲೆಯಲ್ಲಿ ಬಿಸಿಯೂಟ (Midday meal) ಮಾಡಿದ ಬಳಿಕ ಮಕ್ಕಳು, ನೀರಿಗಾಗಿ ಅಲೆದಾಡುವ ಪರಿಸ್ಥಿತಿ ಇಲ್ಲಿದೆ. 


ವಿದ್ಯಾರ್ಥಿಗಳಿಗೆ ಕನಿಷ್ಟ ಸೌಲಭ್ಯ ಒದಗಿಸಲು ಸಹ ಶಿಕ್ಷಣ ಇಲಾಖೆ (Education Department) ವಿಫಲವಾಗಿದೆ. ಶಾಲೆಯಿಂದ ಒಂದು ಕಿಲೋ ಮೀಟರ್ ದೂರದಲ್ಲಿ ಬೋರವೆಲ್ ಇದೆ. ಮಕ್ಕಳು ನೀರು ಬೇಕಾದರೆ ಶಾಲೆಯಿಂದ 1 ಕಿ.ಮೀ ದೂರ ಸಾಗಬೇಕು. ಬಿಸಿಯೂಟ ತಯಾರಿಸಲು ಸಹ ನೀರಿನ ಸಮಸ್ಯೆ ಎದುರಾಗುತ್ತಿದೆ. 


ಇದನ್ನೂ ಓದಿ: ಅಂಜನಾದ್ರಿ ಬೆಟ್ಟಕ್ಕೆ ಅಯೋಧ್ಯದಿಂದ ವಿಮಾನಯಾನ, ರೈಲು ಸೇವೆ: ಸಚಿವೆ ಶಶಿಕಲಾ ಜೊಲ್ಲೆ


ಈ ಬಗ್ಗೆ ಅನೇಕ ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರು, ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಲಾಗಿದೆ. ಇದಕ್ಕೆ ಸಾರ್ವಜನಿಕರು ಸಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.