Bengaluru: ಬೆಂಗಳೂರಿನ 110 ಪ್ರದೇಶಗಳಿಗೆ ಕುಡಿಯುವ ನೀರಿನ ಸಮಸ್ಯೆ..!
Bengaluru News: ಮಹದೇವಪುರ ವಲಯದ ಹಗದೂರು ವಾರ್ಡ್ ಹಾಗೂ ಹೂಡಿ ಉಪ ವಿಭಾಗ ವ್ಯಾಪ್ತಿಯಲ್ಲಿ 110 ಹಳ್ಳಿಗಳ ಪೈಕಿ ಬರುವ ಹಳ್ಳಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದೆ.
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಮಹದೇವಪುರ ವಲಯ ವ್ಯಾಪ್ತಿಯ 110 ಹಳ್ಳಿಗಳಿಗೆ ಸಂಬಂಧಿಸಿದಂತೆ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಶೀಲಿಸಿ ಕೂಡಲೆ ಬೋರ್ ವೆಲ್ ಕೊರೆದು ನೀರಿನ ವ್ಯವಸ್ಥೆ ಕಲ್ಪಿಸಲು ವಲಯ ಜಂಟಿ ಆಯುಕ್ತರಾದ ಡಾ. ದಾಕ್ಷಾಯಿಣಿ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಹದೇವಪುರ ವಲಯದ ಹಗದೂರು ವಾರ್ಡ್ ಹಾಗೂ ಹೂಡಿ ಉಪ ವಿಭಾಗ ವ್ಯಾಪ್ತಿಯಲ್ಲಿ 110 ಹಳ್ಳಿಗಳ ಪೈಕಿ ಬರುವ ಹಳ್ಳಿಗಳಿಗೆ ಭೇಟಿ ನೀಡಿ ಸ್ಥಳಿಯ ನಿವಾಸಿಗಳ ಅಹವಾಲುಗಳನ್ನು ಸ್ವೀಕರಿಸಿ ನೀರಿನ ಸಮಸ್ಯೆಯಿರುವ ಕಡೆ ಕೂಡಲೆ ಬೋರ್ ವೆಲ್ ಕೊರೆದು ನೀರಿನ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇನ್ನು ಸಿಲಿಕಾನ್ ಸಿಟಿ ಮಾತ್ರವಲ್ಲದೇ ರಾಜ್ಯದ ಹಲವೆಡೆ ಈ ಸಮಸ್ಯೆ ಹೆಚ್ಚಾಗಿದೆ.
ಇದನ್ನೂ ಓದಿ: Manipur Violence: ಬುಡಕಟ್ಟು ಮಹಿಳೆಯರ ಬೆತ್ತಲೆ ಮೆರವಣಿಗೆ ನಡೆಸಿ ಅತ್ಯಾಚಾರ; ವಿಡಿಯೋ ವೈರಲ್..!
ಹಗದೂರು ವಾರ್ಡ್ ವಾರ್ಡ್ ವ್ಯಾಪ್ತಿಯಲ್ಲಿ ಬರುವ ರಾಮಗೊಂಡನಹಳ್ಳಿ, ನಲ್ಲೂರಹಳ್ಳಿ, ಪಟ್ಟಂದೂರು ಅಗ್ರಹಾರ, ಗಾಂಧಿಪುರ ಗ್ರಾಮಗಳಿಗೆ ಭೇಟಿ ನೀಡಿ, ರಾಮಗೊಂಡನಹಳ್ಳಿ ಹಾಗೂ ಗಾಂಧಿ ಪುರದಲ್ಲಿ ತಲಾ 2 ಬೋರ್ ವೆಲ್ ಕೊರೆಸಲು ಅಧಿಕಾರಿಗಳಿಗೆ ಸೂಚಿಸಲಾಯಿತು.ಪರಿಶೀಲನೆಯಲ್ಲಿ ಪಾಲಿಕೆಯ ಇಂಜಿನಿಯರ್ ಗಳು, ಜಲಮಂಡಳಿಯ ಇಂಜಿನಿಯರ್ ಗಳು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.