ಮತ ನೀಡಿಲ್ಲ ಎಂದು ಕಾಲೋನಿಗೆ ಕುಡಿಯುವ ನೀರು ಬಂದ್!
ಬಣ್ಣದಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಆರಣಿ ಗ್ರಾಮ ಪಂಚಾಯತಿ ಅಧಿಕಾರಿಗೆ ತೀವ್ರ ತರಾಟೆ ತೆಗೆದುಕೊಂಡರು.
ಮಂಡ್ಯ: ಮತ ನೀಡಿಲ್ಲ ಎಂದು ಕಾಲೋನಿಗೆ ಕುಡಿಯುವ ನೀರು ಬಂದ್ ಮಾಡಿದ ಆರೋಪದ ಹಿನ್ನೆಲೆ ಅಧಿಕಾರಿಯನ್ನ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು. ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆರಣಿ ಗ್ರಾ.ಪಂ.ವ್ಯಾಪ್ತಿಯ ಬಣ್ಣದಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಆರಣಿ ಗ್ರಾಮ ಪಂಚಾಯತಿ ಅಧಿಕಾರಿಗೆ ತೀವ್ರ ತರಾಟೆ ತೆಗೆದುಕೊಂಡರು.
ಕೇವಲ 35 ಮನೆಗಳನ್ನು ಹೊಂದಿರುವ ಈ ಪುಟ್ಟ ಗ್ರಾಮದ ಜನರು ಮತ ನೀಡಿಲ್ಲ ಎಂಬ ಕಾರಣ ಮುಂದಿಟ್ಟುಕೊಂಡು ಕಳೆದ ಆರು ತಿಂಗಳಿಂದ ಕುಡಿಯುವ ನೀರು ಬಂದ್ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಕುಡಿಯುವ ನೀರಿನಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರ ಆರೋಪಿಸಿದ್ದಾರೆ.
ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಆರೋಪಿಗಳಿಗೆ ಕೈದಿ ಸಂಖ್ಯೆ ಹಂಚಿಕೆ
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ರವರನ್ನು ತರಾಟೆಗೆ ತೆಗೆದುಕೊಂಡರು. ಗ್ರಾಮೀಣ ಪ್ರದೇಶದ ಜನರಿಗೆ ಸರ್ಕಾರದ ನಿಯಮದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ. ಈ ಕುಟುಂಬಗಳಿಗೆ ಮೊದಲು ಕುಡಿಯುವ ನೀರನ್ನು ಕಲ್ಪಿಸಿ ಎಂದು ಮನವಿ ಮಾಡಿದರು.
ಹಲವು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರು ಕೂಡ ಯಾವುದೇ ಪ್ರಯೋಜನವಾಗಿಲ್ಲ. ಕ್ಷುಲ್ಲಕ ರಾಜಕಾರಣದ ಉದ್ದೇಶದಿಂದ ಬಡ ಕುಟುಂಬಗಳಿಗೆ ಕುಡಿಯುವ ನೀರು ಒದಗಿಸಿದೆ ಅನ್ಯಾಯ ಮಾಡುತ್ತಿದ್ದಾರೆ. ಬಣ್ಣದಹಳ್ಳಿ ಗ್ರಾಮದಲ್ಲಿ ಹಲವಾರು ಸಮಸ್ಯೆಗಳಿದ್ದು ಪಂಚಾಯತಿ ಅಧಿಕಾರಿಗಳ ನಿರ್ಲಕ್ಷವೇ ಕಾರಣ. ಬಣ್ಣದಹಳ್ಳಿ ಗ್ರಾಮದಲ್ಲಿ ಹತ್ತಾರು ಸಮಸ್ಯೆಗಳು ಕಣ್ಣಿಗೆ ರಾಚುತ್ತವೆ. ಶುದ್ಧ ಕುಡಿಯುವ ನೀರು, ಚರಂಡಿ ಸ್ವಚ್ಛತೆ, ಬೀದಿ ದೀಪ, ರಸ್ತೆ ಯಾವುದೇ ಮೂಲಭೂತ ಸೌಕರ್ಯವನ್ನು ಒದಗಿಸಿಲ್ಲ.
ಚುನಾವಣೆ ಸಮಯದಲ್ಲಿ ರಾಜಕಾರಣ ಮಾತ್ರ ಮಾಡಬೇಕು. ಅಭಿವೃದ್ಧಿಯ ವಿಚಾರದಲ್ಲಿ ತಾರತಮ್ಯ ಮಾಡಬಾರದೆಂದು ರೈತ ಬೋರೇಗೌಡ ಆಕ್ರೋಶ ಹೊರ ಹಾಕಿದರು.
ಇದನ್ನೂ ಓದಿ: ಕರ್ನಾಟಕದ ಈ ಭಾಗಗಳಿಗೆ ರೆಡ್ ಅಲರ್ಟ್... ಗುಡುಗು ಸಿಡಿಲು, ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.