ಕಾಂಗ್ರೆಸ್ ಪಾದಯಾತ್ರೆಗೆ ಚಾಲನೆ : `ಹೌದು ಹುಲಿಯಾ` ಎಂದು ಸಿದ್ದರಾಮಯ್ಯಗೆ ಅಭಿಮಾನಿಗಳ ಸ್ವಾಗತ
Walk for Water: ಮೇಕೆದಾಟು ಸಂಗಮದಲ್ಲಿ ಕಾಂಗ್ರೆಸ್ ಪಾದಯಾತ್ರೆಗೆ ಚಾಲನೆ ನೀಡಲಾಗಿದೆ.
ರಾಮನಗರ: 'ನೀರಿಗಾಗಿ ನಡಿಗೆ' (Walk for Water) ಮೇಕೆದಾಟು ಯೋಜನೆ ಶೀಘ್ರ ಕಾಮಗಾರಿ ಆರಂಭಕ್ಕೆ ಒತ್ತಾಯಿಸಿ ಕರ್ನಾಟಕ ಕಾಂಗ್ರೆಸ್ ಪಾದಯಾತ್ರೆಗೆ ಚಾಲನೆ ನೀಡಲಾಗಿದೆ.
ಸ್ವಾಮೀಜಿ, ಮೌಲ್ವಿ ಮತ್ತು ಪಾದ್ರಿಗಳು ಮೂರೂ ಧರ್ಮಗಳ ಧಾರ್ಮಿಕ ಮುಖಂಡರು ಗಿಡಗಳಿಗೆ ನೀರೆರೆಯುವ ಮೂಲಕ ಹಾಗೂ ನಗಾರಿ ಬಾರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ದೊರೆತಿದೆ.
ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah), ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ನೇತೃತ್ವದಲ್ಲಿ ಪಾದಯಾತ್ರೆ ನಡೆಯಲಿದೆ. ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸಹ ಕಾಂಗ್ರೆಸ್ ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.
ಮೇಕೆದಾಟು (Mekedatu) ಸಂಗಮದಿಂದ ಬಸವನಗುಡಿಯ ನ್ಯಾಷನಲ್ ಕಾಲೇಜಿನವರೆಗೆ ಬಿಂದಿಗೆಯಲ್ಲಿ ನೀರು ಹಿಡಿದು ಮಹಿಳೆಯರು ಸಾಗಲಿದ್ದಾರೆ.
ನಟ ಶಿವರಾಜಕುಮಾರ್ ಹಿಂದೇಟು:
ಪಾದಯಾತ್ರೆಯಲ್ಲಿ ಭಾಗಿಯಾಗಲು ನಟ ಶಿವರಾಜಕುಮಾರ್ (Actor Shivarajkumar) ಹಿಂದೇಟು ಹಾಕಿದ್ದಾರೆ. ಅಭಿಮಾನಿಗಳ ಸಲಹೆಯಂತೆ ಪಾದಯಾತ್ರೆಯಲ್ಲಿ ಬಾಗಿಯಾಗಲ್ಲ ಎಂದು ತಿಳಿಸಿದ್ದಾರೆ.
'ಹೌದು ಹುಲಿಯಾ' ಎಂದು ಸಿದ್ದರಾಮಯ್ಯಗೆ ಸ್ವಾಗತ :
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು 'ಹೌದು ಹುಲಿಯಾ' ಎಂದು ಘೋಷಣೆ ಕೂಗಿ ಅಭಿಮಾನಿಗಳು ಸ್ವಾಗತಿಸಿದರು. ನಾನು ಮತ್ತು ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಜತೆ ಚರ್ಚಿಸಿ ಎರಡು ತಿಂಗಳ ಹಿಂದೆ ಘೋಷಣೆ ಮಾಡಿದ್ದೆವು. ಆದರೆ ಬಿಜೆಪಿ ಈ ಪಾದಯಾತ್ರೆ ಹತ್ತಿಕ್ಕಲು ಬಹಳ ಪ್ರಯತ್ನ ಮಾಡಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಇದಕ್ಕೆ ಎರಡು ಕಾರಣ ಮೇಕೆದಾಟು ಯೋಜನೆ ಅನುಷ್ಠಾನದಲ್ಲಿ ಬಿಜೆಪಿ ವಿಳಂಬ ಮಾಡಿದೆ. ತಮಿಳುನಾಡಿನಲ್ಲಿ ಬಿಜೆಪಿ ತನ್ನ ಪ್ರಭಾವ ಹೆಚ್ಚಿಸಲು ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ environmental clearance ಕೊಟ್ಟಿಲ್ಲ. ನೀರಾವರಿ ಸಚಿವರು ರಾಜ್ಯದ ಜನತೆಗೆ ಸುಳ್ಳು ಮಾಹಿತಿ ನೀಡುತ್ತಿದ್ದಾರೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಸರ್ಕಾರ ಮೇಕೆದಾಟು ಯೋಜನೆ ವಿಷಯದಲ್ಲಿ ಏನು ಮಾಡಿಲ್ಲ ಎಂದು ಜಾಹಿರಾತು ನೀಡುತ್ತಿದ್ದಾರೆ. ಈ ಯೋಜನೆ ಪ್ರಾರಂಭವಾಗಿದ್ದು ನಮ್ಮ ಸರ್ಕಾರದಲ್ಲಿ. ಅಂದಿನ ನೀರಾವರಿ ಸಚಿವ ಎಂ.ಬಿ.ಪಾಟೀಲ್, ಆರ್ಥಿಕ ಇಲಾಖೆ ಗೆ four G exemption ಗೆ ಕೇಳಿದ್ದರು. ನಂತರ ಡಿಪಿಆರ್ ಕೂಡ ₹5000 ಕೋಟಿಗೆ ತಯಾರಾಯಿತು. ನಂತರ Central water commission ಗೆ ವರದಿ ನೀಡಲಾಯಿತು ಎಂದರು.
2019 ಜನವರಿಯಲ್ಲಿ ಡಿ.ಕೆ.ಶಿವಕುಮಾರ್ ನೀರಾವರಿ ಸಚಿವರಾಗಿದ್ದರು. ಆಗ ಡಿ.ಕೆ.ಶಿವಕುಮಾರ್ revised DPR ಮಂಡಿಸುತ್ತಾರೆ. ನಮ್ಮ ಅಧಿಕಾರಾವಧಿಯಲ್ಲಿ ವಿಳಂಬ ಆಗಿಲ್ಲ ಎಂದು ಸ್ಪಷ್ಟನೆ ನೀಡಿದರು.
ಇದನ್ನೂ ಓದಿ: ಕಾಂಗ್ರೆಸ್ಸಿಗರು ಅಂದು ನಿದ್ದೆ ಮಾಡಿ ಇಂದು ಸುಳ್ಳಿನ ಜಾತ್ರೆ ಮಾಡ್ತಿದ್ದಾರೆ: ಬಿಜೆಪಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.