ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ..!
ನಾಳೆ (ಜುಲೈ 7)ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಳೆ ಅಬ್ಬರ ಹೆಚ್ಚಾದ ಹಿನ್ನೆಲೆ ಜಿಲ್ಲಾಧಿಕಾರಿಗಳು ಈ ನಿರ್ಧಾರ ಕೈಗೊಂಡಿದ್ದಾರೆ.
ದಕ್ಷಿಣ ಕನ್ನಡ : ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದೆ. ಹೀಗಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ಜುಲೈ 7ರ ಶುಕ್ರವಾರದಂದು ರಜೆ ಘೋಷಿಸಲಾಗಿದೆ.
ನೀರು ನಿಲ್ಲುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಎಚ್ಚರಿಕೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮತ್ತು ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.
ಇದನ್ನೂ ಓದಿ: ಹೆಚ್ಡಿಕೆ ಬಳಿ ಪೆನ್ಡ್ರೈವ್ ಇಲ್ಲಾ.. ಅದು ಠುಸ್ ಪಟಾಕಿ..! ಮಾಜಿ ಸಿಎಂ ವೀರಪ್ಪ ಮೊಯ್ಲಿ ಟಾಂಗ್
ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯಕೈಗೊಳ್ಳಬೇಕು. ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.