ಸಾಮಾಜಿಕ ಅಂತರದೊಂದಿಗೆ ದಸರಾ, ಮಾಸ್ಕ್ ಹಾಕದಿದ್ದರೆ ದಂಡ; ಸಚಿವ ಎಸ್.ಟಿ.‌ ಸೋಮಶೇಖರ್

ದಸರಾ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ 1 ಸಾವಿರ ಹಾಗೂ ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಉದ್ಘಾಟನಾ ಕಾರ್ಯಕ್ರಮಕ್ಕೆ  2 ಸಾವಿರ ಮಂದಿ ಭಾಗವಹಿಸಲು ಅವಕಾಶ ಮಾಡಿಕೊಡಬೇಕು ಎಂದು ಸರ್ಕಾರಕ್ಕೆ ಕೇಳಿಕೊಂಡಿದ್ದೇವೆ- ಎಸ್.ಟಿ. ಸೋಮಶೇಖರ್

Last Updated : Oct 2, 2020, 03:31 PM IST
  • ಕೋವಿಡ್ 19ರ ಈ ಸಂದರ್ಭದಲ್ಲಿ ಎಲ್ಲರೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಹಾಗೂ ಮಾಸ್ಕ್ ಧರಿಸಲೇಬೇಕು. ಇಲ್ಲದಿದ್ದರೆ ದಂಡ ಹಾಕುವುದು ಅನಿವಾರ್ಯವಾಗಲಿದೆ
  • ದಸರಾ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ 1 ಸಾವಿರ ಹಾಗೂ ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಉದ್ಘಾಟನಾ ಕಾರ್ಯಕ್ರಮಕ್ಕೆ 2 ಸಾವಿರ ಮಂದಿ ಭಾಗವಹಿಸಲು ಅವಕಾಶ
  • ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸಂಬಂಧಪಟ್ಟಂತೆ ಇನ್ನೆರಡು ದಿನದಲ್ಲಿ ಪಟ್ಟಿ ಬಿಡುಗಡೆಯಾಗಲಿದೆ
ಸಾಮಾಜಿಕ ಅಂತರದೊಂದಿಗೆ ದಸರಾ, ಮಾಸ್ಕ್ ಹಾಕದಿದ್ದರೆ ದಂಡ; ಸಚಿವ ಎಸ್.ಟಿ.‌ ಸೋಮಶೇಖರ್ title=

ಮೈಸೂರು: ಉಸ್ತುವಾರಿ ಸಚಿವನಾಗಿ ಮೊದಲ ಬಾರಿಗೆ ಮೈಸೂರು ದಸರಾ (Mysuru Dussehra) ಆಚರಣೆಯಲ್ಲಿ ಭಾಗಿಯಾಗುತ್ತಿರುವುದಕ್ಕೆ ಬಹಳ ಸಂತೋಷವಾಗುತ್ತಿದೆ. ಕೋವಿಡ್ 19 (Covid 19) ರ ಈ ಸಂದರ್ಭದಲ್ಲಿ ಎಲ್ಲರೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಹಾಗೂ ಮಾಸ್ಕ್ (Mask) ಧರಿಸಲೇಬೇಕು. ಇಲ್ಲದಿದ್ದರೆ ದಂಡ ಹಾಕುವುದು ಅನಿವಾರ್ಯವಾಗಲಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ (ST Somashekhar) ತಿಳಿಸಿದರು.

ದಸರಾ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ 1 ಸಾವಿರ ಹಾಗೂ ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಉದ್ಘಾಟನಾ ಕಾರ್ಯಕ್ರಮಕ್ಕೆ  2 ಸಾವಿರ ಮಂದಿ ಭಾಗವಹಿಸಲು ಅವಕಾಶ ಮಾಡಿಕೊಡಬೇಕು ಎಂದು ಸರ್ಕಾರಕ್ಕೆ ಕೇಳಿಕೊಂಡಿದ್ದೇವೆ. ಅಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಜಿಲ್ಲಾಡಳಿತ ಸೇರಿದಂತೆ ಸರ್ಕಾರ ಕೋವಿಡ್ ಸುರಕ್ಷತೆಗೋಸ್ಕರ ಅಗತ್ಯ ಕ್ರಮ ಕೈಗೊಳ್ಳುತ್ತದೆ. ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸಂಬಂಧಪಟ್ಟಂತೆ ಇನ್ನೆರಡು ದಿನದಲ್ಲಿ ಪಟ್ಟಿ ಬಿಡುಗಡೆಯಾಗಲಿದೆ ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದರು. 

ದುಂದು ವೆಚ್ಚದ ದಸರಾ ಇಲ್ಲ; ಸಚಿವ ಎಸ್.ಟಿ. ಸೋಮಶೇಖರ್

ಜಿಲ್ಲಾಧಿಕಾರಿ ಶರತ್ ಅವರ ವರ್ಗಾವಣೆಗೆ ಸಂಬಂಧಪಟ್ಟಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ನನ್ನ ಗಮನಕ್ಕೆ ತಂದುಕೊಂಡೇ ವರ್ಗಾವಣೆ ಮಾಡಲಾಗಿದ್ದು, ಇದರಲ್ಲಿ ಯಾವುದೇ ಗೊಂದಲ ಇಲ್ಲ. ಶರತ್ ಅವರು ಸಿಎಟಿ ಮೊಹೋಗಿರುವ ವಿಚಾರವಾಗಿ ಮನವೊಲಿಸುವ ಪ್ರಯತ್ನವನ್ನು ಮಾಡಲಾಗುವುದು ಎಂದು ತಿಳಿಸಿದರು.

ಅರಮನೆಗೆ ಆಗಮಿಸಿದ ಗಜಪಡೆ
ಅರಮನೆಯ ಪೂರ್ವದಿಕ್ಕಿನ ಜಯಮಾರ್ತಾಂಡ ಮಹಾದ್ವಾರದಲ್ಲಿ ಕಾಡಿನಜಂದ ನಾಡಿಗೆ ಬಂದ ಗಜಪಡೆಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕರಾದ ಎಸ್.ಎ. ರಾಮದಾಸ್, ಜಿ.ಟಿ. ದೇವೇಗೌಡ, ಎಲ್. ನಾಗೇಂದ್ರ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಪಾಲಿಕೆ ಮೇಯರ್ ತಸ್ನಿಂ, ಪಾಲಿಕೆ ಆಯುಕ್ತರಾರ ಗುರುದತ್ತ ಹೆಗಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು. 

ಉತ್ತರ ಪ್ರದೇಶದ ಈ ಗ್ರಾಮದಲ್ಲಿ ರಾವಣ ಹೀರೋ, ರಾಮನಲ್ಲ..!

ಬಳಿಕ ಪೊಲೀಸ್ ಇಲಾಖೆ ವತಿಯಿಂದ ಜಯಮಾರ್ತಾಂಡ ದ್ವಾರದಲ್ಲಿ ಗಜಪಡೆಗಳಿಗೆ ಗಾರ್ಡ್ ಆಫ್ ಆನರ್ ಸಲ್ಲಿಸಲಾಯಿತು. ಅಲ್ಲಿಂದ ಮಧ್ಯಾಹ್ನ 12.45 ರ ಸುಮಾರಿಗೆ ನಾದಸ್ವರ ಹಾಗೂ ಪೂರ್ಣಕುಂಭದ ಮೂಲಕ ಅರಮನೆಯ ಆನೆ ಬಾಗಿಲಿಗೆ ಗಜೆಪಡೆಗಳನ್ನು ಮೆರವಣಿಗೆ ಮೂಲಕ ಕರೆತರಲಾಯಿತು. ಅಲ್ಲಿ ಗಜಪಡೆಗಳಿಗೆ ಸಚಿವರು, ಶಾಸಕರು ಹಾಗೂ ಅಧಿಕಾರಿಗಳು ಪುಷ್ಪನಮನ ಸಲ್ಲಿಸಿದರು. 

ಮಾವುತರು, ಕಾವಾಡಿಗರಿಗೆ ಮೂಲಭೂತ ಸಾಮಗ್ರಿ ವಿತರಣೆ:
ಗಜಪಡೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಮಾವುತರು ಹಾಗೂ ಕಾವಾಡಿಗರಿಗೆ ಆಹ್ವಾನಿತ ಗಣ್ಯವ್ಯಕ್ತಿಗಳಿಂದ ಮೂಲಭೂತ ಸೌಕರ್ಯಗಳ ವಿತರಣೆ ಮಾಡಲಾಯಿತು. 

ಚಾಮುಂಡೇಶ್ವರಿಗೆ ಗೊಂಬೆ ತೊಟ್ಟಿಲ ಪೂಜೆ :
ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ ಉಸ್ತುವಾರಿ ಸಚಿವರಾದ ಸೋಮಶೇಖರ್ ಅವರು, ಬಳಿಕ ಅರಮನೆಯ ಗೊಂಬೆ ತೊಟ್ಟಿಲಿಗೆ ಪೂಜೆ ನೆರವೇರಿಸಿದರು. 

ಶಾಂತವಾಗಿ ಸಹಕರಿಸಿದ ಗಜಪಡೆ:
ಅಂಬಾರಿ ಆನೆ ಅಭಿಮನ್ಯು, ವಿಕ್ರಮ, ಗೋಪಿ, ವಿಜಯ, ಕಾವೇರಿ ಆನೆಗಳು ಯಾವುದೇ ಅಂಜಿಕೆ ಇಲ್ಲದೆ, ಶಿಸ್ತುಬದ್ಧವಾಗಿ ಪೂಜೆ ಹಾಗೂ ಮೆರವಣಿಗೆಗೆ ಸಹಕರಿಸಿದವು.

Trending News