ಬೆಂಗಳೂರು: ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಇವಿಎಂನ್ನು ಬಿಜೆಪಿ ದುರ್ಬಳಕೆ ಮಾಡಿಕೊಂಡಿರುವ ಸಾದ್ಯತೆ ಇದೆ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಆರೋಪಿಸಿದ್ದಾರೆ.


COMMERCIAL BREAK
SCROLL TO CONTINUE READING

ನಗರದಲ್ಲಿ  ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಅವರು "ನಮ್ಮ ನಾಯಕರು ಮತ್ತು ವೈಯಕ್ತಿಕವಾಗಿ ನನಗೆ ಇ.ವಿ.ಎಂಗಳನ್ನು ಬಿಜೆಪಿಯು ದುರ್ಬಳಕೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಅನಿಸುತ್ತಿದೆ.  ಕಾಂಗ್ರೆಸ್ ಪ್ರಬಲವಾಗಿರುವ ಕ್ಷೇತ್ರದಲ್ಲಿಯೂ ಸಹಿತ ಹಲವು ನಾಯಕರು ಸೋಲನ್ನು ಅನುಭವಿಸಿದ್ದಾರೆ. ಆದ್ದರಿಂದ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ" ಎಂದು ಪರಮೇಶ್ವರ ಹೇಳಿದರು.



ಇದೇ ಸಂದರ್ಭದಲ್ಲಿ ಜೆಡಿಎಸ್ ನೊಂದಿಗಿನ ಮೈತ್ರಿಕೂಟದ ಬಗ್ಗೆ ಮಾತನಾಡಿದ ಅವರು ಪಕ್ಷದ ಹೈಕಮಾಂಡ್ ಪ್ರಧಾನಮಂತ್ರಿ ಸರ್ವಾಧಿಕಾರವನ್ನು ನಿರ್ಬಂಧಿಸುವ ಕಾರಣದಿಂದಾಗಿ ಈ ನಿರ್ಧಾರಕ್ಕೆ ಬಂದಿದೆ. ಕಾಂಗ್ರೆಸ್- ಜೆಡಿಎಸ್ ಮೈತ್ರಿಯು ಹೊಸ ಯುಗದ ಆರಂಭಕ್ಕೆ ಕಾರಣವಾಗಿದೆ ಎಂದರು.


ಇನ್ನು ರಮೇಶ್ ಕುಮಾರ್ ಅವರು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಲಿದ್ದಾರೆ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.