ಬೆಂಗಳೂರು : ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಪರಿಚಯಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ  2024ರ ಜುಲೈ 27ರಿಂದ 2024ರ ಜುಲೈ 29ರವರೆಗೆ ಅಂದರೆ ನಾಳೆಯಿಂದ ಮೂರು ದಿನಗಳ ಕಾಲ ಇ-ಸ್ವತ್ತು ತಂತ್ರಾಂಶವು ಕಾರ್ಯನಿರ್ವಹಿಸುವುದಿಲ್ಲ. ಈ ವಿಚಾರವನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. 


COMMERCIAL BREAK
SCROLL TO CONTINUE READING

ಮೂರು ದಿನಗಳವರೆಗೆ  ಇ-ಸ್ವತ್ತು ತಂತ್ರಾಂಶವು ಕಾರ್ಯನಿರ್ವಹಿಸದಾ ಕಾರಣ ಸಾರ್ವಜನಿಕರು ಸಹಕಾರ ನೀಡುವಂತೆ  ಪ್ರಿಯಾಂಕ್ ಖರ್ಗೆಕೋರಿದ್ದಾರೆ. ಸಾರ್ವಜನಿಕರ ಅನಾನುಕೂಲತೆಯನ್ನು ಕಡಿಮೆ ಮಾಡಲು ತಂತ್ರಾಂಶ ಕಾರ್ಯಾರಂಭಿಸಿದ ನಂತರ ಇ-ಸ್ವತ್ತು ತಂತ್ರಾಂಶದ ಕಾರ್ಯಾವಧಿಯನ್ನು 2024ರ  ಆಗಸ್ಟ್ 2ರವರೆಗೆ ಪ್ರತಿ ನಿತ್ಯ ಸಂಜೆ 8 ಗಂಟೆಯವರೆಗೂ ಸೇವೆ ಸಲ್ಲಿಸಲು ಕಾಲಾವಧಿ ವಿಸ್ತರಿಸಲಾಗುವುದು ಎಂದೂ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.


ಇದನ್ನೂ ಓದಿ : ವಿಧಾನಪರಿಷತ್‌ʼನಲ್ಲಿ ವಿಪಕ್ಷಗಳ ಗಲಾಟೆ


ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಅಭಿವೃದ್ದಿಪಡಿಸಲಾಗಿದೆ. ಈ ತಂತ್ರಾಂಶದ ಹೊಸ ಅವತರಣಿಕೆಯನ್ನು ಸಾರ್ವಜನಿಕರ ಸೇವೆಗೆ ಬಿಡುಗಡೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಇ-ಸ್ವತ್ತು ತಂತ್ರಾಂಶದ ಬಳಕೆದಾರರಿಗೆ ಅನುಕೂಲವಾಗುವಂತೆ ಸಮಗ್ರ ಆವೃತ್ತಿಯೊಂದಿಗೆ ಸಜ್ಜುಗೊಳಿಸಲಾಗಿರುವ ಈ ತಂತ್ರಾಂಶದ ಮೂಲಕ ಸಾರ್ವಜನಿಕರ ಆಸ್ತಿಯನ್ನು ಗ್ರಾಮಠಾಣದ ಒಳಗೆ ಆಥವಾ ಹೊರಗೆ ಬರುವ ಬಗ್ಗೆ ಅಳತೆ ಮಾಡಿಸುವ ಪ್ರಕ್ರಿಯೆಯನ್ನು ಗ್ರಾಮ ಪಂಚಾಯತಿಯ ಹಂತದಲ್ಲಿ ದಿಶಾಂಕ್  ಆಪ್ ಮೂಲಕ ನಿರ್ವಹಿಸಲು ಕ್ರಮವಹಿಸಲಾಗುತ್ತಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ : ಒಂದು ಬಸ್ʼನಲ್ಲಿ ಬರೋಬ್ಬರಿ 120 ಮಕ್ಕಳ ಪ್ರಯಾಣ


https://bit.ly/3AClgDd


Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.