Ration Card: ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್..!

ರಾಜ್ಯಾದ್ಯಂತ ಪಡಿತರ ಚೀಟಿದಾರರ ಸೌಲಭ್ಯಕ್ಕಾಗಿ ಸರ್ಕಾರವು ಇ-ಕೆವೈಸಿ(ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್) ಎಂಬ ಯೋಜನೆಯನ್ನು ಜಾರಿಗೊಳಿಸಿದ್ದು

Last Updated : Mar 7, 2021, 01:31 PM IST
  • ಇ-ಕೆವೈಸಿ ಆಧಾರ್ ಬಯೋ ದೃಢೀಕರಣ ಮಾಡಿಸದ ಪಡಿತರ ಚೀಟಿದಾರರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗೆ ಕೂಡಲೇ ಭೇಟಿ ನೀಡಿ ಮಾಡಿಸಿಕೊಳ್ಳಬೇಕು.
  • ರಾಜ್ಯಾದ್ಯಂತ ಪಡಿತರ ಚೀಟಿದಾರರ ಸೌಲಭ್ಯಕ್ಕಾಗಿ ಸರ್ಕಾರವು ಇ-ಕೆವೈಸಿ(ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್) ಎಂಬ ಯೋಜನೆಯನ್ನು ಜಾರಿಗೊಳಿಸಿದ್ದು
  • ಅಂಗಡಿಯಲ್ಲಿ ಇ-ಕೆವೈಸಿ ಆಧಾರ್ ಬಯೋ ದೃಢೀಕರಣ ಕಾರ್ಯವನ್ನು ಪೂರ್ಣಗೊಳಿಸಿರುತ್ತಾರೆ.
Ration Card: ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್..! title=

ದಾವಣಗೆರೆ: ಇ-ಕೆವೈಸಿ ಆಧಾರ್ ಬಯೋ ದೃಢೀಕರಣ ಮಾಡಿಸದ ಪಡಿತರ ಚೀಟಿದಾರರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗೆ ಕೂಡಲೇ ಭೇಟಿ ನೀಡಿ ಇ-ಕೆವೈಸಿ ಆಧಾರ್ ಬಯೋ ದೃಢೀಕರಣ ಮಾಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಪಡಿತರ ಚೀಟಿದಾರರ ಸೌಲಭ್ಯಕ್ಕಾಗಿ ಸರ್ಕಾರವು ಇ-ಕೆವೈಸಿ(Electronic Know Your Customer) ಎಂಬ ಯೋಜನೆಯನ್ನು ಜಾರಿಗೊಳಿಸಿದ್ದು, ಅದರಂತೆ ಈಗಾಗಲೇ ಕೆಲವು ಪಡಿತರ ಚೀಟಿದಾರರರು ತಮ್ಮ ವ್ಯಾಪ್ತಿಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಯಲ್ಲಿ ಇ-ಕೆವೈಸಿ ಆಧಾರ್ ಬಯೋ ದೃಢೀಕರಣ ಕಾರ್ಯವನ್ನು ಪೂರ್ಣಗೊಳಿಸಿರುತ್ತಾರೆ.

HD Kumaraswamy: 'ಕೇಂದ್ರ ಸರ್ಕಾರದ ಈ ನಿರ್ಧಾರ ರಾಜ್ಯಗಳ ಪಾಲಿಗೆ ಮರಣಶಾಸನವಾಗಲಿದೆ'

ಸರ್ಕಾರವು ಪುನಃ ಈ ಯೋಜನೆಗೆ ಚಾಲನೆ ನೀಡಿರುವುದರಿಂದ ಇ-ಕೆವೈಸಿ ಆಧಾರ್ ಬಯೋ ದೃಢೀಕರಣ ಮಾಡಿಸದ ಪಡಿತರ ಚೀಟಿ(Ration Card)ದಾರರು ತಮ್ಮ ವ್ಯಾಪ್ತಿಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗೆ ಕೂಡಲೇ ಭೇಟಿ ನೀಡಿ (ಪ್ರತಿ ಮಾಹೆಯ 1ನೇ ತಾರೀಖಿನಿಂದ 10ನೇ ತಾರೀಖಿನೊಳಗೆ ಮತ್ತು 25ನೇ ತಾರೀಖಿನಿಂದ 30ನೇ ತಾರೀಖೀನೊಳಗಾಗಿ) ತಮ್ಮ ಇ-ಕೆವೈಸಿ ಆಧಾರ್ ಬಯೋದೃಢೀಕರಣ ಕಾರ್ಯವನ್ನು ಮಾಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News