ಯಾವುದೇ ಪ್ರಕರಣಗಳನ್ನು ಲಘುವಾಗಿ ತೆಗೆದುಕೊಂಡಿಲ್ಲ: ಸಚಿವ ಪರಮೇಶ್ವರ್

ಒಕ್ಕಲಿಗ ಸಮುದಾಯದ ಸಭೆ ನಡೆದಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಯಿಸಿದ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಒಕ್ಕಲಿಗ ಸಮುದಾಯ ಸಭೆ ನಡೆದಿರುವುದಷ್ಟೆ ಗೊತ್ತು ಎಂದು ಪರಮೇಶ್ವರ್ ಹೇಳಿದ್ದಾರೆ.  

Written by - Ranjitha R K | Last Updated : Apr 16, 2025, 02:52 PM IST
  • ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ಪ್ರಕರಣವನ್ನು ಸ್ಥಳೀಯ ಪೊಲೀಸರು ಗಮನಿಸುತ್ತಾರೆ.
  • ಮುಲಾಜಿಲ್ಲದೆ ಕಾನೂನಿನ ಚೌಕಟ್ಟಿನಲ್ಲಿ ಕಠಿಣವಾದ ಕ್ರಮ ತೆಗೆದುಕೊಳ್ಳುವಂತೆ ಸೂಚನೆ
  • ಯಾವುದೇ ಪ್ರಕರಣವನ್ನು ಲಘುವಾಗಿ ತೆಗೆದುಕೊಂಡಿಲ್ಲ.
ಯಾವುದೇ ಪ್ರಕರಣಗಳನ್ನು ಲಘುವಾಗಿ ತೆಗೆದುಕೊಂಡಿಲ್ಲ: ಸಚಿವ ಪರಮೇಶ್ವರ್

ಬೆಂಗಳೂರು :ಹುಬ್ಬಳ್ಳಿ ಎನ್‌ಕೌಂಟರ್ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದ್ದು, ತನಿಖೆಯಲ್ಲಿ ಏನು ಬರುತ್ತದೆ ನೋಡೋಣ. ತನಿಖೆಯಲ್ಲಿ ಸತ್ಯಾಂಶ ಹೊರಬರಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದರು.

Add Zee News as a Preferred Source

ಒಕ್ಕಲಿಗ ಸಮುದಾಯದ ಸಭೆ ನಡೆದಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಯಿಸಿದ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಒಕ್ಕಲಿಗ ಸಮುದಾಯ ಸಭೆ ನಡೆದಿರುವುದಷ್ಟೆ ಗೊತ್ತು. ಒಳಗಡೆ ಏನೆಲ್ಲ ಚರ್ಚೆಯಾಗಿದೆ ಎಂಬುದು ನಮಗೆ ಮಾಹಿತಿ ಇಲ್ಲ. ಒಕ್ಕಲಿಗ ಸಮುದಾಯವು ತಮಗೆ ಅನ್ಯಾಯ ಆಗಬಾರದು ಎಂಬುದನ್ನು ಪ್ರಸ್ತಾಪ ಮಾಡಿದ್ದಾರೆ‌. ಇದನ್ನು ಹೊರತುಪಡಿಸಿ ಬೇರೆ ಏನು ಗೊತ್ತಿಲ್ಲ ಎಂದರು.

ಇದನ್ನೂ ಓದಿ : ಶಿವಾಜಿಯಂತೇ... ಭಾರತವನ್ನಾಳಿದ ಮತ್ತೊಬ್ಬ ಅತ್ಯಂತ ಶಕ್ತಿಶಾಲಿ ಹಿಂದೂ ರಾಜ ಯಾರು ಗೊತ್ತಾ? ಬ್ರಿಟಿಷರನ್ನೇ ನಡುಗಿಸಿದ್ದ ಆ ಮಹಾನ್‌ ದೊರೆ ಕರ್ನಾಟಕದವರೇ

ದಾವಣಗೆರೆಯಲ್ಲಿ ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ಪ್ರಕರಣವನ್ನು ಸ್ಥಳೀಯ ಪೊಲೀಸರು ಗಮನಿಸುತ್ತಾರೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ. ಇಂತಹ ಘಟನೆಗಳಾದಾಗ ಯಾವುದೇ ರೀತಿಯ ಮುಲಾಜಿಲ್ಲದೆ ಕಾನೂನಿನ ಚೌಕಟ್ಟಿನಲ್ಲಿ ಕಠಿಣವಾದ ಕ್ರಮ ತೆಗೆದುಕೊಳ್ಳುವಂತೆ ಈಗಾಗಲೇ ಸೂಚಿಸಿದ್ದೇನೆ. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಅತ್ಯಾಚಾರ, ಮಹಿಳೆಯರ ಮೇಲೆ ಹಲ್ಲೆ ಪ್ರಕರಣಗಳಾದಾಗ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಕೆಲವು ವಿಶೇಷ ಸೂಚನೆಗಳನ್ನು ನೀಡಿದ್ದೇನೆ. ಅದರ ಪ್ರಕಾರ ಮಾಡಿಕೊಂಡು ಬರುತ್ತಿದ್ದಾರೆ. ಯಾವುದೇ ಪ್ರಕರಣವನ್ನು ಲಘುವಾಗಿ ತೆಗೆದುಕೊಂಡಿಲ್ಲ. ಎಲ್ಲ ಕೇಸ್‌ಗಳಲ್ಲಿಯೂ ಆರೋಪಿಗಳನ್ನು ಬಂಧಿಸಿ, ಕಾನೂನು ಪ್ರಕಾರ ಕ್ರಮ ತೆಗೆದುಕೊಂಡಿದ್ದೇವೆ. ಒಬ್ಬೊಬ್ಬರ ಟೀಕೆಗೆ ಉತ್ತರಿಸಲು ಆಗುವುದಿಲ್ಲ. ಕೋಪ ಬಂದಾಗ, ನೋವಾದಾಗ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಾರೆ. ಅದಕ್ಕೆಲ್ಲ ಉತ್ತರಿಸಲು ಆಗುತ್ತದೆಯೇ? ದೇಶದಲ್ಲಿ ಕಾನೂನು ಇದೆ. ಅದರ‌ ಪ್ರಕಾರ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ಟಾಟಾ ಟ್ರಸ್ಟ್‌ನವರು ಕೆಲವು ಮಾನದಂಡಗಳನ್ನು ಇಟ್ಟುಕೊಂಡು ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕ ಪೊಲೀಸ್ ವ್ಯವಸ್ಥೆ ಮೊದಲ ಸ್ಥಾನದಲ್ಲಿದೆ. ಕರ್ನಾಟಕ ಪೊಲೀಸ್ ಬಹಳ ಶ್ರಮ ವಹಿಸಿ ಕೆಲಸ ಮಾಡುತ್ತಿದೆ ಎಂಬುದನ್ನು ಮೊದಲಿನಿಂದಲೂ ಅನೇಕ ಸಂದರ್ಭಗಳಲ್ಲಿ ಹೇಳಿದ್ದೇನೆ. ಈ ವರದಿಯಿಂದ ರಾಜ್ಯ ಪೊಲೀಸ್ ಇಲಾಖೆಗೆ ಉತ್ತೇಜನ ನೀಡಿದಂತಾಗಿದೆ ಎಂದರು.

ಇದನ್ನೂ ಓದಿ : Top 10 Series: ಕರ್ನಾಟಕದ ಟಾಪ್ 10 ಶ್ರೀಮಂತ ವ್ಯಕ್ತಿಗಳು..! ಸಂಪೂರ್ಣ ವಿವರ ಇಲ್ಲಿ..!

ಜಾತಿಗಣತಿ ವರದಿ ಸಚಿವ ಸಂಪುಟದ ಕೈಸೇರಿದ ಬಳಿಕ ಒಂದೇ ದಿನದಲ್ಲಿ ಚರ್ಚಿಸಲು ಆಗುವುದಿಲ್ಲ. ವರದಿಯನ್ನು ಓದಲು ಸಮಯ ಬೇಕು ಎಂದು ಮುಖ್ಯಮಂತ್ರಿಯವರಿಗೆ ತಿಳಿಸಿದಾಗ, ವರದಿಯ ಪ್ರತಿ ನೀಡಿ, ಒಂದು ವಾರ ಕಾಲಾವಕಾಶ ನೀಡಿದ್ದಾರೆ. ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸುತ್ತೇವೆ. ಯಾರಿಗೆ ಏನೇನು ಅಭಿಪ್ರಾಯಗಳಿದೆ, ಅದನ್ನು ಕ್ಯಾಬಿನೆಟ್‌ನಲ್ಲಿ ಹೇಳುತ್ತಾರೆ. ಅಂತಿಮವಾಗಿ ಸರ್ಕಾರ ಏನು ತೀರ್ಮಾನ ಮಾಡುತ್ತದೆ ಎಂಬುದನ್ನು ಕಾದು ನೋಡೋಣ ಎಂದು ಹೇಳಿದರು.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News