ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ಮತ್ತು ಹೊಸನಗರ ಭಾಗದಲ್ಲಿ ತಡರಾತ್ರಿ 1.30ರ ಸುಮಾರಿಗೆ ಭೂಕಂಪನದ ಅನುಭವವಾಗಿದೆ. ವರಾಹಿ ಜಲವಿದ್ಯುತ್ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಭೂಕಂಪದ ಅನುಭವವಾಗಿದೆ. 


COMMERCIAL BREAK
SCROLL TO CONTINUE READING

ಭಾರೀ ಶಬ್ಧದೊಂದಿಗೆ ಭೂಮಿ ಕಂಪಿಸಿದ್ದು ಜನರು ಭಯಭೀತರಾಗಿ ಮನೆಯಿಂದ ಹೊರ ಬಂದಿದ್ದರು. ರಿಕ್ಟರ್ ಮಾಪಕದಲ್ಲಿ 2.2ರಷ್ಟು ತೀವ್ರತೆ ದಾಖಲಾಗಿದ್ದು, ಯಾವುದೇ ಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.


ಭೂಕಂಪನದ ಬಗ್ಗೆ ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿರ್ದೇಶಕ ಡಾ.ಜಿ.ಶ್ರೀನಿವಾಸರೆಡ್ಡಿಯವರು ದೃಢಪಡಿಸಿದ್ದು, ಈ ಕುರಿತು ಜಿಲ್ಲೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.