ಚುರಾಚಂದ್ಪುರ್: ಮಣಿಪುರದ ಚೂರಚಂದ್ಪುರದ ಪ್ರಾಂತ್ಯದಲ್ಲಿ ರಿಕ್ಟರ್ ಮಾಪಕದಲ್ಲಿ 3.7 ರಷ್ಟು ಭೂಕಂಪ ಸಂಭವಿಸಿದೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಹವಾಮಾನ ಇಲಾಖೆಯ ಪ್ರಕಾರ, ಬೆಳಿಗ್ಗೆ ಸುಮಾರು 7: 01 ರ ವೇಳೆಗೆ ಭೂಕಂಪ ಸಂಭವಿಸಿದ್ದು.ಈವರೆಗೆ ಯಾವುದೇ ಸಾವುಗಳು ಅಥವಾ ಹಾನಿಗಳು ವರದಿಯಾಗಿಲ್ಲ ಎಂದು ತಿಳಿದುಬಂದಿದೆ.
ಈ ಹಿಂದೆ ಜನವರಿಯಲ್ಲಿ ರಿಕ್ಟರ್ ಮಾಪಕದಲ್ಲಿ 4.2 ರಷ್ಟು ಭೂಕಂಪವು ಮ್ಯಾನ್ಮಾರ್-ಭಾರತ ಗಡಿ ಪ್ರದೇಶದಲ್ಲಿ ಸಂಭವಿಸಿತ್ತು. ಮಣಿಪುರವು ಭೂಕಂಪ ವಲಯದಲ್ಲಿ ಬರುವುದರಿಂದ ಈ ಭಾಗದಲ್ಲಿ ಸಾಮಾನ್ಯವಾಗಿ ಭೂಕಂಪನಗಳು ಸಂಭವಿಸುತ್ತಲೇ ಇರುತ್ತವೆ ಎಂದು ಹೇಳಲಾಗಿದೆ.