Election Commission : ಮತದಾರರ ಪಟ್ಟಿಯಲ್ಲಿ ಹೆಸರು ಡಿಲೀಟ್ : ಮಹತ್ವದ ಆದೇಶ ನೀಡಿ ಚುನಾವಣಾ ಆಯೋಗ 

Voter ID scam: ಅಕ್ರಮದಲ್ಲಿ ಭಾಗಿಯಾದ ಆರೋಪದಲ್ಲಿ ಬಿಬಿಎಂಪಿ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಎಸ್.ರಂಗಪ್ಪ, ಶಿವಾಜಿನಗರ ಚಿಕ್ಕಪೇಟೆ ಕ್ಷೇತ್ರಗಳ ಉಸ್ತುವಾರಿ ಕೆ. ಶ್ರೀನಿವಾಸ್, ಮಹದೇವಪುರ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೆಂಗಳೂರು ನಗರ ಉಪ ಆಯುಕ್ತರ ಅಮಾನತಿಗೆ ನಿರ್ದೇಶನ ನೀಡಿದ್ದು ಇಲಾಖೆ ತನಿಖೆಗೆ ಆದೇಶಿಸಿದೆ.

Written by - Channabasava A Kashinakunti | Last Updated : Nov 26, 2022, 10:58 AM IST
  • ಮತದಾರರ ಪಟ್ಟಿಯಲ್ಲಿ ಹೆಸರು ಡಿಲೀಟ್ ಹಗರಣ
  • ಕೇಂದ್ರ ಚುನಾವಣಾ ಆಯೋಗ ಮಹತ್ವದ ಆದೇಶ
  • ಡಿಲೀಟ್ ಆದ ಬಗ್ಗೆ ಶೇ.100 ರಷ್ಟು ಪರಿಶೀಲನೆ
Election Commission : ಮತದಾರರ ಪಟ್ಟಿಯಲ್ಲಿ ಹೆಸರು ಡಿಲೀಟ್ : ಮಹತ್ವದ ಆದೇಶ ನೀಡಿ ಚುನಾವಣಾ ಆಯೋಗ  title=

ಬೆಂಗಳೂರು : ಮತದಾರರ ಪಟ್ಟಿಯಲ್ಲಿ ಹೆಸರು ಡಿಲೀಟ್ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ ಮಹತ್ವದ ಆದೇಶಗಳನ್ನು ನೀಡಿದೆ. 

ರಾಜ್ಯ ಕಾಂಗ್ರೆಸ್ ನಾಯಕರ ದೂರಿನ ಬಳಿಕ ರಾಜ್ಯ ಚುನಾವಣಾ ಆಯೋಗ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕೆಲವು ಸೂಚನೆಗಳನ್ನು ನೀಡಿ, ಈ ಬಗ್ಗೆ ಪರಿಶೀಲನೆ ನಡೆಸಲು ಆದೇಶಿಸಿದೆ.

ಇದನ್ನೂ ಓದಿ : ಟೀಚರ್ ನೇಮಕಾತಿ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಶಾಕ್...!

ಕೇಂದ್ರ ಚುನಾವಣಾ ಆಯೋಗ ಆದೇಶದಲ್ಲಿ ಮತದಾರರ ಪಟ್ಟಿ ಹೆಸರು ಡಿಲೀಟ್ ಆದ ಬೆಂಗಳೂರು ನಗರ ಕ್ಷೇತ್ರಗಳಾದ ಚಿಕ್ಕಪೇಟೆ, ಶಿವಾಜಿನಗರ ಮತ್ತು ಮಹಾದೇವಪುರದಲ್ಲಿ ಮತದಾರರ ಪಟ್ಟಿ ಬಗ್ಗೆ ಪರಿಶೀಲನೆ ನಡೆಸಬೇಕು.

ಮತದಾರರ ಹೆಸರು ಸೇರ್ಪಡೆ ಮತ್ತು ಡಿಲೀಟ್ ಆದ ಬಗ್ಗೆ ಶೇ.100 ರಷ್ಟು ಪರಿಶೀಲನೆ ನಡೆಸದಬೇಕು, ಈ ಮೂರೂ ಕ್ಷೇತ್ರಗಳಲ್ಲಿ ಡಿ. 24 ರವರೆಗೂ ಮತದಾರರ ಪರಿಷ್ಕರಣೆಗೆ ಅವಧಿ ವಿಸ್ತರಿಸಬೇಕು.

ಅಕ್ರಮದಲ್ಲಿ ಭಾಗಿಯಾದ ಆರೋಪದಲ್ಲಿ ಬಿಬಿಎಂಪಿ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಎಸ್.ರಂಗಪ್ಪ, ಶಿವಾಜಿನಗರ ಚಿಕ್ಕಪೇಟೆ ಕ್ಷೇತ್ರಗಳ ಉಸ್ತುವಾರಿ ಕೆ. ಶ್ರೀನಿವಾಸ್, ಮಹದೇವಪುರ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೆಂಗಳೂರು ನಗರ ಉಪ ಆಯುಕ್ತರ ಅಮಾನತಿಗೆ ನಿರ್ದೇಶನ ನೀಡಿದ್ದು ಇಲಾಖೆ ತನಿಖೆಗೆ ಆದೇಶಿಸಿದೆ.

ಆ ಮೂರು ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆಗೆ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿದೆ. 

1 . ಶಿವಾಜಿನಗರ ಕ್ಷೇತ್ರಕ್ಕೆ ಪ್ರಿಯಾಂಕಾ ಮೇರಿ ಫ್ರಾನ್ಸಿಸ್.

2 ಚಿಕ್ಕಪೇಟೆ ಕ್ಷೇತ್ರಕ್ಕೆ ಡಾ. ಆರ್.ವಿಶಾಲ್.

3 ಮಹದೇವಪುರ ಕ್ಷೇತ್ರಕ್ಕೆ ಅಜಯ್ ನಾಗಭೂಷಣ.

ಇನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ಮೇಲ್ವಿಚಾರಣೆಗಾಗಿ

A. ಬಿಬಿಎಂಪಿ ಕೇಂದ್ರ ಭಾಗಕ್ಕೆ ಉಜ್ವಲ್ ಘೋಷ್.

B. ಬಿಬಿಎಂಪಿ ಉತ್ತರಕ್ಕೆ ರಾಮಚಂದ್ರನ್ ಆರ್.

C. ಬಿಬಿಎಂಪಿ ದಕ್ಷಿಣಕ್ಕೆ ಪಿ. ರಾಜೇಂದ್ರ ಚೋಳನ್.

D. ಬೆಂಗಳೂರು ನಗರ ಡಾ.ಎನ್.ಮಂಜುಳಾ.

ಇದನ್ನೂ ಓದಿ : BESCOM : ದುಸ್ಥಿಯಲ್ಲಿದ್ದ 1 ಲಕ್ಷಕ್ಕೂ ಅಧಿಕ ಟ್ರಾನ್ಸ್‌ ಫಾರ್ಮರ್‌ ರಿಪೇರಿ ಮಾಡಿದ ಬೆಸ್ಕಾಂ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News