ಬೆಂಗಳೂರು : ಪ್ರತಿ ವರ್ಷದಂತೆ ಈ ವರ್ಷವೂ ದೀಪಾವಳಿಯನ್ನು ನಗರದಾದ್ಯಂತ ಸಡಗರದಿಂದ ಆಚರಿಸಲಾಗುತ್ತಿದ್ದು, ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲೀನ್ಯ ಮತ್ತು ವಾಯು ಮಾಲೀನ್ಯವನ್ನು ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತದೆ, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಮತ್ತು ಪ್ರಾಣಿ-ಪಕ್ಷಿಗಳ ಕಲರವಕ್ಕೆ ತೊಂದರೆ ಉಂಟುಮಾಡುತ್ತಿದೆ. ಆದ್ದರಿಂದ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಸರಳ ರೀತಿಯಲ್ಲಿ ಪ್ಲಾಸ್ಟಿಕ್ ಮುಕ್ತ ಹಾಗೂ ಮಾಲಿನ್ಯರಹಿತವಾಗಿ ಆಚರಿಸೋಣ ಎಂದು ಸರ್ಕಾರ ಕರೆ ನೀಡಿದೆ.


COMMERCIAL BREAK
SCROLL TO CONTINUE READING

ಸರ್ವೋಚ್ಛ ನ್ಯಾಯಾಲಯದ ಆದೇಶ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಟಳಿಯ ನಿರ್ದೇಶನದಂತೆ, ದೀಪಾವಳಿ ಹಬ್ಬದ ಆಚರಣೆ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರವೇ ಬಳಸಬೇಕು. ಪಟಾಕಿಗಳನ್ನು ಕೊಳ್ಳುವ ಸಮಯದಲ್ಲಿ ಪಟಾಕಿಗಳ ಪ್ಯಾಕೆಟ್‌ಗಳ ಮೇಲೆ ಹಸಿರು ಚಿನ್ಹೆಯನ್ನು ಖಚಿತಪಡಿಕೊಳ್ಳಿ ಹಾಗೂ ಕ್ಯೂಆರ್ ಕೋಡ್ ಮೂಲಕ ಪಟಾಕಿಯ ಬಗ್ಗೆತಿಳಿದುಕೊಳ್ಳಿ. ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರವೇ ಪಟಾಕಿಗಳನ್ನು ಹಚ್ಚಲು ಅವಕಾಶವಿರುತ್ತದೆ. ಪಟಾಕಿಯ ಬಳಕೆಯ ಸಮಯದಲ್ಲಿ ಪ್ರಾಣಿಗಳು, ಪಕ್ಷಿಗಳು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಬಳಸಿ ಎಂದು ತಿಳಿಸಿದೆ. 


ಇದನ್ನೂ ಓದಿ : ದುಪ್ಪಟ್ಟು ದರವಿದ್ರೂ ಕಣ್ಮುಚ್ಚಿ ಕುಳಿತ ಅಧಿಕಾರಿಗಳು


ಈ ಮೂಲಕ ಸಾರ್ವಜನಿಕರಿಗೆ ತಿಳಿಸುವುದೇನೆಂದರೆ ವಸತಿ ಮತ್ತು ನಗರ ವ್ಯವಹಾರಗಳ ಇಲಾಖೆ, ಭಾರತ ಸರ್ಕಾರವು. ಸ್ವಚ್ಚ ಭಾರತ್ ಯೋಜನೆ 2.0 ಅಡಿಯಲ್ಲಿ “ಸ್ವಚ್ಚ ದೀಪಾವಳಿ-ಶುಭ ದೀಪಾವಳಿ” ಎಂಬ ಪ್ರಚಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸಾರ್ವಜನಿಕರು ‘My Gov Portal’ ನಲ್ಲಿ ಅಥವಾ ವೆಬ್ ಲಿಂಕ್(https://pledge.mygov.in/swachh-diwali-shubh-diwali/) ಅಥವಾ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ತಮ್ಮ ದಾಖಲೆಗಳನ್ನು ನೊಂದಾಯಿಸಲು ಕೋರಿದೆ. ‘ಸ್ವಚ್ಚ ದೀಪಾವಳಿ-ಶುಭ ದೀಪಾವಳಿ’ ಅಭಿಯಾನಕ್ಕೆ ಕೈ ಜೋಡಿಸಲು ಹೆಮ್ಮೆಪಡುತ್ತೇನೆ. ಪರಿಸರ ಸ್ನೇಹಿ ಸ್ಥಳಿಯ ಉತ್ಪನ್ನಗಳನ್ನು ಬಳಸಲು ನಾನು ಬದ್ಧನಾಗಿದ್ದೇನೆ, ಏಕ ಬಳಕೆಯ ಪ್ಲಾಸ್ಟಿಕ್ ಬೇಡ ಎಂದು ಹೇಳುತ್ತೇನೆ ಮತ್ತು ಹಸಿರು ದೀಪಾವಳಿಯನ್ನು ಆಚರಿಸುತ್ತೇನೆ’. ಎಂದು ಪ್ರಮಾಣವನ್ನು ಮಾಡಿ “ಸ್ವಚ್ಚ ದೀಪಾವಳಿ-ಶುಭ ದೀಪಾವಳಿ” ಅಭಿಯಾನದಲ್ಲಿ ಪಾಲ್ಗೊಳ್ಳಲು ಕೋರಿದೆ.


ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಹಸಿರು ಪಟಾಕಿಯನ್ನು ಮಾತ್ರ ಬಳಸು ಮೂಲಕ ಪರಿಸರ ಸ್ನೇಹಿ ಹಬ್ಬವನ್ನು ಆಚರಿಸುವ ಸಲುವಾಗಿ ಘನತ್ಯಾಜ್ಯ ವಿಭಾಗದ ಆಟೋ ಟಿಪ್ಪರ್ ಗಳಲ್ಲಿ ಧ್ವನಿವರ್ಧಕಗಳ ಮೂಲಕ ನಾಗರಿಕರಿಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.


ಇದನ್ನೂ ಓದಿ : ರಾಜ್ಯ ಕಾಂಗ್ರೆಸ್‌ ದೀಪಾವಳಿ ಹೊತ್ತಿಗೆ ರಾಜ್ಯವನ್ನು ದಿವಾಳಿ ಅಂಚಿಗೆ ನೂಕಿದೆ : ಹೆಚ್‌ಡಿಕೆ ಕಿಡಿ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.