ಶಿವಮೊಗ್ಗ: ಬಡವರು ಹಾಗೂ ಮಧ್ಯಮ ವರ್ಗದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಿ ಮುಖ್ಯವಾಹಿನಿಗೆ ಬರುವಂತಾಗಬೇಕೆಂಬ ಉದ್ದೇಶದಿಂದ ಸಾರ್ವತ್ರಿಕ ಮೂಲ ಆದಾಯದ ತತ್ವದಂತೆ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಜಾರಿ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು.
1.18 ಕೋಟಿ ಮಹಿಳಾ ಯಜಮಾನಿಯರಿಗೆ ತಿಂಗಳಿಗೆ 2000 ರೂ. ನೀಡುತ್ತಿರುವುದು ಸತ್ಯವಲ್ಲವೇ? ಇದುವರೆಗೆ ಯಾವುದೇ ಜಾತಿ ಧರ್ಮ ಭಾಷೆ ಬೇಧವಿಲ್ಲದೇ 130 ಕೋಟಿ ಮಹಿಳೆಯರು ಶಕ್ತಿ ಯೋಜನೆಯ ಮೂಲಕ ಉಚಿತವಾಗಿ ಪ್ರಯಾಣಿಸಿರುವುದು ಸುಳ್ಳಾಗುವುದು ಸಾಧ್ಯವೇ? 200 ಯೂನಿಟ್‍ವರೆಗೆ ಉಚಿತ ವಿದ್ಯುತ್1.51 ಕೋಟಿ ಜನರಿಗೆ ನೀಡಲಾಗುತ್ತಿದೆ. ಅನ್ನಭಾಗ್ಯ ಯೋಜನೆಯಡಿ 170 ರೂ. ಫಲಾನುಭವಿಗಳಿಗೆ ತಲುಪುತ್ತಿದೆ. ಈ ಎಲ್ಲಾ ಸತ್ಯಗಳನ್ನು ಪರಿಶೀಲನೆ ನಡೆಸಿ ಮಾಧ್ಯಮದವರು ಸತ್ಯವನ್ನು ಬರೆಯಬೇಕು ಎಂದರು.
ಇದನ್ನೂ ಓದಿ: ಡಾ.ಪುನೀತ್ ರಾಜ್‍ಕುಮಾರ್ ಪುತ್ಥಳಿಗೆ ಕಿಡಿಗೇಡಿಗಳಿಂದ ಹಾನಿ
ಬಡವರಿಗೆ ಆರ್ಥಿಕ ಶಕ್ತಿ ತುಂಬಬೇಕು
ಗ್ಯಾರಂಟಿ ಯೋಜನೆಗಳಿಂದ ಒಂದು ಕುಟುಂಬ ಕ್ಕೆ 4 ರಿಂದ 5 ಸಾವಿರ ರೂ.ಗಳು ಸೇರುತ್ತಿದ್ದು, ವರ್ಷಕ್ಕೆ 48 ರಿಂದ 50 ಸಾವಿದ ರೂ.ಗಳು ಸೇರುತ್ತದೆ. ಇದು ಬಡಜನರಿಗೆ ಸೌಲಭ್ಯ ನೀಡುತ್ತದೆ. ಬೆಲೆಯೇರಿಕೆ, ನಿರುದ್ಯೋಗ ಹೆಚ್ಚಾಗಿದ್ದು, ಬಡವರಿಗೆ ಕೊಂಡುಕೊಳ್ಳುವ ಶಕ್ತಿಯನ್ನು ಈ ಯೋಜನೆಗಳು ಹೆಚ್ಚಿಸುತ್ತವೆ ಎಂದು ಸಿದ್ದರಾಮಯ್ಯ ಹೇಳಿದರು.
ಯುವನಿಧಿ ಯೋಜನೆಗೆ ಇಂದು ಚಾಲನೆ:
ಇಂದು ಸರ್ಕಾರದ 5ನೇ ಗ್ಯಾರಂಟಿ ‘ಯುವನಿಧಿ’ಯನ್ನು ಜಾರಿಗೊಳಿಸಲಾಗುತ್ತಿದೆ. ಪದವಿ ಪಡೆದ ನಿರುದ್ಯೋಗಿಗಳಿಗೆ 3000 ರೂ. ಹಾಗೂ ಡಿಪ್ಲೋಮಾ ಮಾಡಿದ ನಿರುದ್ಯೋಗಿಗಳಿಗೆ 1,500 ರೂ. ಭತ್ಯೆಯನ್ನು 2 ವರ್ಷಗಳ ಕಾಲ ನೀಡುವ ಯೋಜನೆಯಾಗಿದೆ. ಈ ಅವಧಿಯಲ್ಲಿ ಭತ್ಯೆಯ ಜೊತೆಗೆ ಉದ್ಯೋಗ ಲಭಿಸಲು ಬೇಕಾದಂತಹ ಕೌಶಲ್ಯವನ್ನು ಅಭಿವೃದ್ಧಿಗೊಳಿಸಲು ಕೌಶಲ್ಯ ತರಬೇತಿಯನ್ನು ನೀಡಲಾಗುವುದು. ಈ 2 ವರ್ಷದೊಳಗೆ ಸರ್ಕಾರಿ, ಖಾಸಗಿ ಅಥವಾ ಸ್ವಯಂ ಉದ್ಯೋಗ ದೊರೆತಲ್ಲಿ ಯುವನಿಧಿ ಭತ್ಯೆಯನ್ನು ನೀಡಲಾಗುವುದಿಲ್ಲ. ಕೈಗಾರಿಕೆಗಳಲ್ಲಿ ಬೇಡಿಕೆಯಿರುವ ಕೌಶಲ್ಯದ ತರಬೇತಿಯನ್ನು ನೀಡಲಾಗುತ್ತಿದ್ದು, ತರಬೇತಿಯ ಅವಧಿಯನ್ನು ಸಂಬಂಧಪಟ್ಟ ಇಲಾಖೆ ನಿರ್ಧರಿಸಲಿದೆ ಎಂದು ಹೇಳಿದರು.
ಇದನ್ನೂ ಓದಿ: Yuva Nidhi: ಕಾಂಗ್ರೆಸ್ ಬದ್ಧತೆಯುಳ್ಳ ಪಕ್ಷ, ಜನರ ವಿಶ್ವಾಸವನ್ನು ಉಳಿಸಿಕೊಂಡಿದ್ದೇವೆ- ರಣದೀಪ್ ಸಿಂಗ್ ಸುರ್ಜೇವಾಲ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.