BIG NEWS: ಬೆಳ್ಳಂಬೆಳಗ್ಗೆ ಶಾಸಕ ಜಮೀರ್ ಅಹ್ಮದ್, ರೋಷನ್ ಬೇಗ್ ಗೆ ಇಡಿ ಶಾಕ್..!

ಬೆಳ್ಳಂಬೆಳಗ್ಗೆ ಜಮೀರ್ ಅಹ್ಮದ್ ಮತ್ತು ರೋಷನ್ ಬೇಗ್ ಗೆ ಇಡಿ ಶಾಕ್ ನೀಡಿದೆ.

Written by - Zee Kannada News Desk | Last Updated : Aug 5, 2021, 12:15 PM IST
  • ಐಎಂಇ ಹಗರಣ, ಅಕ್ರಮ ಹಣ ವರ್ಗಾವಣೆ, ತೆರಿಗೆ ವಂಚನ ಸಂಬಂಧ ಇಡಿ ಅಧಿಕಾರಿಗಳ ದಾಳಿ
  • ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್, ಮಾಜಿ ಸಚಿವ ರೋಷನ್ ಬೇಗ್ ನಿವಾಸಗಳ ಮೇಲೆ ರೇಡ್
  • ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿರುವ ಇಡಿ ಅಧಿಕಾರಿಗಳಿಂದ ಜಮೀರ್ ಅಹ್ಮದ್ ವಿಚಾರಣೆ
BIG NEWS: ಬೆಳ್ಳಂಬೆಳಗ್ಗೆ ಶಾಸಕ ಜಮೀರ್ ಅಹ್ಮದ್, ರೋಷನ್ ಬೇಗ್ ಗೆ ಇಡಿ ಶಾಕ್..!   title=
ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ಇಡಿ ದಾಳಿ (Photo Courtesy: ANI)

ಬೆಂಗಳೂರು: ಐಎಂಎ ಹಗರಣ, ಅಕ್ರಮ ಹಣ ವರ್ಗಾವಣೆ ಸೇರಿ ಅನೇಕ ವಿಚಾರಗಳಿಗೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಶಾಸಕ ಜಮೀರ್ ಅಹಮ್ಮದ್‍ ಮತ್ತು ಮಾಜಿ ಸಚಿವ ರೋಷನ್ ಬೇಗ್ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಗುರುವಾರ ದಿಢೀರ್ ದಾಳಿ ನಡೆಸಿದ ಇಡಿ ಅಧಿಕಾರಿಗಳ ತಂಡ ಜಮೀರ್ ಮತ್ತು ಬೇಗ್ ಮನೆ, ಕಚೇರಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದು, ಮಹತ್ವದ ದಾಖಲೆಗಳನ್ನು ಕಲೆ ಹಾಕಿದ್ದಾರೆಂದು ತಿಳಿದುಬಂದಿದೆ.

ಕಾಂಗ್ರೆಸ್‍ನ ಶಾಸಕ ಜಮೀರ್ ಅಹಮ್ಮದ್‍ ಅವರ ಬಂಬೂ ಬಜಾರ್ ನ ನಿವಾಸ, ವಸಂತನಗರದ ಹಳೇ ನಿವಾಸ, ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಸದಾಶಿವನಗರದಲ್ಲಿರುವ ಜಮೀರ್ ಆಪ್ತನ ನಿವಾಸ ಹಾಗೂ ಪಿಎ ಮನೆ ಸೇರಿ ಒಟ್ಟು 6 ಕಡೆ ದಾಳಿ ನಡೆಸಲಾಗಿದೆ ಅಂತಾ ತಿಳಿದುಬಂದಿದೆ. ಜಮೀರ್ ನಿವಾಸ, ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಯುಬಿ ಸಿಟಿಯಲ್ಲಿರುವ ಫ್ಲ್ಯಾಟ್‌ನಲ್ಲಿ ಇಡಿ ಅಧಿಕಾರಿಗಳು ವ್ಯಾಪಕ ಶೋಧ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇಡಿ ಅಧಿಕಾರಿಗಳಿಂದ ಒಂದು ಕಡೆ ರೇಡ್ ಮತ್ತೊಂದು ಕಡೆ ಜಮೀರ್ ಅಹ್ಮದ್ ವಿಚಾರಣೆ ನಡೆಯುತ್ತಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: BIG NEWS: ಬೊಮ್ಮಾಯಿ ಕ್ಯಾಬಿನೆಟ್ ಅಸ್ತಿತ್ವಕ್ಕೆ, ನೂತನ ಸಚಿವರ ಸಂಪೂರ್ಣ ಪಟ್ಟಿ ಇಲ್ಲಿದೆ ನೋಡಿ…

ಬಹುಕೋಟಿ ಐಎಂಎ ಹಗರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್‌ ವಿಚಾರಣೆ ವೇಳೆ ಜಮೀರ್ ಅಹ್ಮದ್ ಮತ್ತು ರೋಷನ್ ಬೇಗ್ ಈ ಇಬ್ಬರ ಹೆಸರುಗಳನ್ನು ಹೇಳಿದ್ದ. ಅಲ್ಲದೆ ಜಮೀರ್ ವಿದೇಶದಲ್ಲಿ ಕ್ಯಾಸಿನೋ ನಡೆಸುತ್ತಿರುವ ಬಗ್ಗೆ ಇಡಿ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಇದಲ್ಲದೆ ಜೀಮಿರ್ ಆದಾಯಕ್ಕೂ ಮತ್ತು ಅವರು ಸಲ್ಲಿಸುತ್ತಿದ್ದ ತೆರಿಗೆಗೂ ತಾಳೆಯಾಗುತ್ತಿಲ್ಲವೆಂದು ತಿಳಿದು ಬಂದಿದ್ದು, ಈ ಆಯಾಮದಲ್ಲಿಯೂ ತನಿಖೆ ನಡೆಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ರೋಷನ್ ಬೇಗ್ ಗೂ ಇಡಿ ಶಾಕ್..!

ಐಎಂಎ ಹಗರಣ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೋಷನ್ ಬೇಗ್ ಗೂ ಇಡಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಶಿವಾಜಿನಗರದಲ್ಲಿರುವ ಅವರ ನಿವಾಸ ಸೇರಿ ಒಟ್ಟು 6 ಕಡೆ ಆದಾಯ ತೆರಿಗೆ ಮತ್ತು ಇಡಿ ಅಧಿಕಾರಿಗಳ ಏಕಕಾಲಕ್ಕೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲಿಸಿದ್ದಾರೆ. ಬೆಂಗಳೂರಿನ ಭೂಪಸಂದ್ರದಲ್ಲಿರುವ ರೋಷನ್ ಬೇಗ್ ಪುತ್ರಿಯ ಮನೆ ಮೇಲೂ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸಿದ್ದಾರೆ.

ಇದನ್ನೂ ಓದಿ: Karnataka Cabinet Expansion: ಡಿಸಿಎಂ ಹುದ್ದೆ ಕ್ಯಾನ್ಸಲ್, ಬಿ.ವೈ.ವಿಜಯೇಂದ್ರಗೆ ಮಂತ್ರಿಸ್ಥಾನವಿಲ್ಲ!

ಐಎಂಇ ಹಣಗರದಲ್ಲಿ ಕೋಟಿ ಕೋಟಿ ರೂ. ದೇಣಿಗೆ ಪಡೆದುಕೊಂಡಿರುವ ವಿಚಾರ, ಅಕ್ರಮ ಹಣ ವರ್ಗಾವಣೆ, ತೆರಿಗೆ ವಂಚನೆ ಪ್ರಕರಣ ಸಂಬಂಧ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ರೋಷನ್ ಬೇಗ್ ಅವರನ್ನೂ ಈ ಬಗ್ಗೆ ವಿಚಾರಣೆ ನಡೆಸುವ ಸಾಧ್ಯದೆ ಇದೆ ಎಂದು ಹೇಳಲಾಗುತ್ತಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News