ಬೆಂಗಳೂರು: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ತಾಯಿ ಗೌರಮ್ಮ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದ್ದು, ಅಕ್ಟೋಬರ್ 15ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.


COMMERCIAL BREAK
SCROLL TO CONTINUE READING

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್, ಡಿಕೆಶಿ ಪುತ್ರಿ ಐಶ್ವರ್ಯ ಅವರ ವಿಚಾರಣೆ ನಡೆಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇದೀಗ ಗೌರಮ್ಮ ಅವರಿಗೆ ನೋಟೀಸ್ ನೀಡಿದ್ದಾರೆ.


ಗೌರಮ್ಮ ಅವರ ಹೆಸರಿನಲ್ಲಿ ಬೇನಾಮಿ ಆಸ್ತಿ, ಐಶ್ವರ್ಯಗೆ 5 ಎಕರೆ ಗಿಫ್ಟ್ ಡೀಡ್, 3 ಕೋಟಿ ರೂ. ಹಣ ವರ್ಗಾವಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಅಧಿಕಾರಿಗಳು ಗೌರಮ್ಮ ಅವರನ್ನು ವಿಚಾರಣೆ ನಡೆಸುವ ಸಾಧ್ಯತೆ ಇದೆ. 


ಡಿಕೆಶಿ ಪತ್ನಿಗೂ ಇಡಿ ಅಧಿಕಾರಿಗಳಿಂದ ಸಮನ್ಸ್:
ಇನ್ನು ಡಿಕೆಶಿ ಪತ್ನಿ ಉಷಾ ಅವರಿಗೂ ದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಗೆ ಅಕ್ಟೋಬರ್ 17ರಂದು ಹಾಜರಾಗಿ ವಿಚಾರಣೆ ಎದುರಿಸುವಂತೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ.