ವಿದ್ಯಾವಂತರೇ ಹೆಚ್ಚು ಜಾತಿವಾದ, ಮೌಢ್ಯದ ಆರಾಧಕರಾಗಿದ್ದಾರೆ: ಸಿಎಂ ಸಿದ್ದರಾಮಯ್ಯ
ನಮ್ಮ ಯುವ ಸಮೂಹದ ಶಕ್ತಿ ಮತ್ತು ಚೈತನ್ಯ ದುರುಪಯೋಗವಾಗಬಾರದು. ಜಾತಿ-ಧರ್ಮದ ಹೆಸರಲ್ಲಿ ಗಲಭೆಗಳಿಗೆ ಯುವ ಸಮೂಹ ದುರ್ಬಳಕೆ ಆಗುವುದನ್ನು ತಪ್ಪಿಸುವ ರೀತಿಯಲ್ಲಿ ನಮ್ಮ ಸರ್ಕಾರ ನೀತಿ ರೂಪಿಸಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು: ವಿದ್ಯಾವಂತರೇ ಹೆಚ್ಚು ಜಾತಿವಾದ ಮತ್ತು ಮೌಢ್ಯದ ಆರಾಧಕರಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಜನಮನ ಪ್ರತಿಷ್ಠಾನ ಮತ್ತು ಸಮತಾ ಅಧ್ಯಯನ ಕೇಂದ್ರವು ದೇವರಾಜ ಅರಸು ಭವನದಲ್ಲಿ ಹಮ್ಮಿಕೊಂಡಿದ್ದ ಪ್ರಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಸಭಿಕರ ಪ್ರಶ್ನೆಗಳಿಗೆ ಉತ್ತರಿಸಿ ಅವರು ಮಾತನಾಡಿದರು.
‘ಮಕ್ಕಳು ವಿಶ್ವಪ್ರಜ್ಞೆ ಬೆಳೆಸಿಕೊಂಡು ವೈಚಾರಿಕವಾಗಿ ಸನ್ನದ್ಧಗೊಳ್ಳುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೆಲಸ ಮಾಡಲಿದೆ. ಬೋಧಕರು ಜಾತ್ಯತೀತವಾಗಿಲ್ಲದಿದ್ದರೆ, ಶಿಕ್ಷಕರಲ್ಲೇ ವೈಚಾರಿಕತೆ ಇಲ್ಲದಿದ್ದರೆ ಮಕ್ಕಳಲ್ಲಿ ಜ್ಞಾನದ ವಿಕಾಸ ಸಾಧ್ಯವಾಗುವುದಿಲ್ಲ. ಜಾಗತಿಕ ಮಟ್ಟದ ಬಂಡವಾಳವನ್ನು ಆಕರ್ಷಿಕಸಬೇಕು ಎಂದರೆ ಶಾಂತಿ-ಸುವ್ಯವಸ್ಥೆ ಮತ್ತು ಉದ್ಯಮ ಸ್ನೇಹಿ ವಾತಾವರಣವಿರಬೇಕು. ಬಂಡವಾಳ ಹೂಡಿಕೆಯಿಂದ ಉದ್ಯೋಗ ಸೃಷ್ಟಿಯಾಗಿ ಜಿಡಿಪಿ ಹೆಚ್ಚುತ್ತದೆ. ಹೀಗಾಗಿ ಜಾತಿ-ಧರ್ಮದ ಸಂಘರ್ಷವಿಲ್ಲದ ಶಾಂತಿಯುತ ಸಮಾಜ ಇರಬೇಕು’ ಎಂದು ಸಿದ್ದರಾಮಯ್ಯ ಹೇಳಿದರು.
ಇದನ್ನೂ ಓದಿ: 108 ಸಿಬ್ಬಂದಿಯ ಬಾಕಿ ವೇತನ ಪಾವತಿಗೆ ಕ್ರಮ : ಮುಷ್ಕರ ನಡೆಸದಂತೆ ಸಚಿವ ದಿನೇಶ್ ಗುಂಡೂರಾವ್ ಕರೆ
ಶರಾವತಿ ಸಂತ್ರಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ-ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ ಹೇಳಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.