ಶಾಲೆ ತೆರೆಯುವ ಬಗ್ಗೆ ಆರೋಗ್ಯ ಇಲಾಖೆಯ ಸಲಹೆ ಕೇಳಿದ ಶಿಕ್ಷಣ ಇಲಾಖೆ
ಶಾಲಾ ಕಾಲೇಜುಗಳನ್ನು ತೆರೆಯುವ ಬಗ್ಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಇಂದು ಶಿಕ್ಷಣ ತಜ್ಞರು, ಅಧಿಕಾರಿಗಳು, ವೈದ್ಯರು, ತಾಂತ್ರಿಕ ಪರಿಣಿತರು ಹಾಗೂ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರೊಂದಿಗೆ ಪ್ರಾಥಮಿಕ ಹಂತದ ಸಭೆ ನಡೆಸಿದರು.
ಬೆಂಗಳೂರು: ಕೇಂದ್ರ ಸರ್ಕಾರವು ಶಾಲೆಗಳನ್ನು ತೆರೆಯುವ ಬಗ್ಗೆ ಹೊಸ ಮಾರ್ಗಸೂಚಿ (Guidelines) ಹೊರಡಿಸಿದ್ದು ಅಕ್ಟೋಬರ್ 15ರಿಂದ ಶಾಲಾ ಕಾಲೇಜುಗಳನ್ನು ತೆರೆಯುವ ಬಗ್ಗೆ ರಾಜ್ಯ ಸರ್ಕಾರಗಳು ನಿರ್ಧರಿಸಬೇಕೆಂದು ಹೇಳಿದೆ. ಈ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆ ಈಗ ಶಾಲಾ (Schools) ಕಾಲೇಜುಗಳನ್ನು ತೆರೆಯುವ ಬಗ್ಗೆ ಆರೋಗ್ಯ ಇಲಾಖೆಯ ಸಲಹೆ-ಸೂಚನೆಗಳನ್ನು ಕೇಳಿದೆ.
ಶಿಕ್ಷಣ ಇಲಾಖೆಯು ಪ್ರಮುಖವಾದ 3 ವಿಷಯಗಳ ಕುರಿತು ಆರೋಗ್ಯ ಇಲಾಖೆಯ ಸಲಹೆ ಸೂಚನೆಗಳನ್ನು ಕೇಳಿದೆ. ಅವು ಈ ರೀತಿ ಇವೆ.
1) ರಾಜ್ಯದಲ್ಲಿ LKG-PUC ತನಕ ಯಾವಾಗ ಪ್ರಾರಂಭಿಸಬಹುದು?
2) ಒಂದು ವೇಳೆ ಶಾಲೆ ಆರಂಭ ಮಾಡಿದಲ್ಲಿ ಯಾವ ತರಗತಿಗಳನ್ನು ಮೊದಲು ಪ್ರಾರಂಭಿಸಬೇಕು?
3) ಸಮುದಾಯ ಜನಪ್ರತಿನಿಧಿಗಳಿಂದ ಯಾವ ರೀತಿಯಿಂದ ಸಹಕಾರ ನಿರೀಕ್ಷಿಸಬಹುದು?
ಇದಲ್ಲದೆ ಶಾಲಾ ಕಾಲೇಜುಗಳನ್ನು ತೆರೆಯುವ ಬಗ್ಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ (S Suresh Kumar) ಇಂದು ಶಿಕ್ಷಣ ತಜ್ಞರು, ಅಧಿಕಾರಿಗಳು, ವೈದ್ಯರು, ತಾಂತ್ರಿಕ ಪರಿಣಿತರು ಹಾಗೂ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರೊಂದಿಗೆ ಪ್ರಾಥಮಿಕ ಹಂತದ ಸಭೆ ನಡೆಸಿದರು.
ದೇಶದ ಈ ಭಾಗದಲ್ಲಿ ಸದ್ಯಕ್ಕೆ ತೆರೆಯುವುದಿಲ್ಲ ಶಾಲೆ, ಈ ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ
ಸಭೆಯ ಬಳಿಕ ಮಾತನಾಡಿದ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಒಂದೆಡೆ COVID- 19 ಪ್ರಕರಣಗಳು ಏರಿಕೆಯಾಗುತ್ತಿವೆ. ಮತ್ತೊಂದೆಡೆ ಮಕ್ಕಳ ವಿಷಯದಲ್ಲಿ ತುಂಬಾ ಕಾಳಜಿ ವಹಿಸಬೇಕಾಗುತ್ತದೆ. ಆದ್ದರಿಂದ ಎಲ್ಲಾ ಆಯಾಮಗಳಲ್ಲಿ ಸಮಾಲೋಚನೆ ಮಾಡಲಾಗಿದೆ. Pros and Cons (positive ಮತ್ತು negative) ಅಂಶಗಳನ್ನು ಚರ್ಚಿಸಿದ್ದೇವೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕರೇ ಎಚ್ಚರ! ಇನ್ಮುಂದೆ ಮಾಸ್ಕ್ ಧರಿಸದಿದ್ದರೆ ಬೀಳಲಿದೆ ಭಾರೀ ದಂಡ
ತಜ್ಞರ ಅಭಿಪ್ರಾಯಗಳು ಹಾಗೂ ವಿಸ್ತೃತ ಅಧ್ಯಯನದ ನಂತರ ಶಿಕ್ಷಣ (Education) ಇಲಾಖೆಗೆ ವಿಸ್ತೃತ ವರದಿ ಬರಲಿದೆ. ಮಕ್ಕಳು, ಪೋಷಕರು ಹಾಗೂ ಶಿಕ್ಷಕರ ಸುರಕ್ಷಿತೆ ನಮ್ಮ ಸರ್ಕಾರದ ಆದ್ಯತೆಯಾಗಿದೆ. ಈ ವಿಷಯದಲ್ಲಿ ಯಾವುದೇ ರಾಜಿ ಇಲ್ಲ. ಯಾವುದೇ ನಿರ್ಧಾರ ಕೈಗೊಂಡರೂ ಮಕ್ಕಳ ಸುರಕ್ಷತೆ ಮತ್ತು ಆರೋಗ್ಯದ ದೃಷ್ಟಿಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.