ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ನಿಮಗೆ ಕಾಳಜಿ ಇಲ್ಲವೇ?: ಸಿದ್ದರಾಮಯ್ಯಗೆ ಬಿ.ಸಿ.ನಾಗೇಶ್ ತಿರುಗೇಟು

ಅನಧಿಕೃತವಾಗಿ ಹಲವು ಶಾಲೆ ಆರಂಭಿಸಲು ಅವಕಾಶ ಮಾಡಿಕೊಟ್ಟು, ಅಕ್ರಮಕ್ಕೆ ಕುಮ್ಮಕ್ಕು ನೀಡಿರುವುದರಲ್ಲಿ ಸಿದ್ದರಾಮಯ್ಯ ಪಾತ್ರ ಏನು? ಎಂದು ಬಿ.ಸಿ.ನಾಗೇಶ್ ಪ್ರಶ್ನಿಸಿದ್ದಾರೆ.

Written by - Puttaraj K Alur | Last Updated : Sep 11, 2022, 11:01 AM IST
  • ನಿಯಮಬಾಹಿರ ಕೆಲಸಗಳಿಗೆ ಕುಮ್ಮಕ್ಕು ನೀಡುತ್ತಿರುವ ನಿಮಗೆ ಮಾತನಾಡಲು ಯಾವ ನೈತಿಕತೆ ಇದೆ?
  • ವಿಪಕ್ಷ ನಾಯಕ ಸಿದ್ದರಾಮಯ್ಯರ ಹೇಳಿಕೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿರುಗೇಟು ನೀಡಿದ್ದಾರೆ
  • ಬಿಜೆಪಿ ಸರ್ಕಾರದ್ದು “ಜನಸ್ಪಂದನ” ಅಲ್ಲ ‘ಜನ ಮರ್ದನ' ಎಂಬ ಸಿದ್ದರಾಮಯ್ಯ ಹೇಳಿದ್ದರು
ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ನಿಮಗೆ ಕಾಳಜಿ ಇಲ್ಲವೇ?: ಸಿದ್ದರಾಮಯ್ಯಗೆ ಬಿ.ಸಿ.ನಾಗೇಶ್ ತಿರುಗೇಟು title=
ಸಿದ್ದರಾಮಯ್ಯಗೆ ಬಿ.ಸಿ.ನಾಗೇಶ್ ತಿರುಗೇಟು

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ವರ್ಷ ತುಂಬಿದ್ದಕ್ಕಾಗಿ ‘ಜನಸ್ಪಂದನ’ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದಕ್ಕೆ “ಜನಸ್ಪಂದನ” ಅಲ್ಲ ‘ಜನ ಮರ್ದನ'ಎಂದು ಹೆಸರಿಡಬೇಕಾಗಿತ್ತು ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಭಾನುವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ನಿಮ್ಮ ಸರ್ಕಾರದ ಅವಧಿಯಲ್ಲಿ ಖಾಸಗಿ ಸಿಬಿಎಸ್‌ಇ ಶಾಲೆಗಳ ಆರಂಭಕ್ಕೆ NOC ನೀಡಲು ನಿಯಮಗಳನ್ನೇ ರೂಪಿಸದೆ, ಅನಧಿಕೃತವಾಗಿ ಹಲವು ಶಾಲೆಗಳನ್ನು ಆರಂಭಿಸಲು ಅವಕಾಶ ಮಾಡಿಕೊಟ್ಟು, ಅಕ್ರಮಕ್ಕೆ ಕುಮ್ಮಕ್ಕು ನೀಡಿರುವುದರಲ್ಲಿ ಸಿದ್ದರಾಮಯ್ಯ ಪಾತ್ರ ಏನು?’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Karnataka Lokayukta : ಅಧಿಕೃತ ಎಸಿಬಿ ರದ್ದು ಹಿನ್ನೆಲೆ : ಇಂದು ಎಲ್ಲ ಕಡತಗಳು ಲೋಕಾಯುಕ್ತಕ್ಕೆ ವರ್ಗಾವಣೆ

‘ಪಾರದರ್ಶಕ, ಪ್ರಾಮಾಣಿಕ, ಸುರಕ್ಷಿತ-ಶೈಕ್ಷಣಿಕ ವಾತಾವರಣ ನಿರ್ಮಿಸಲು ಹೊರಟ ಬಿಜೆಪಿ ಸರ್ಕಾರದ ವಿರುದ್ಧ, ಕ್ರಿಮಿನಲ್ ಕೇಸ್ ಸೇರಿ ಹಲವು ಆರೋಪಗಳಿರುವ ಬೆಂಬಲಿಗನ ಮೂಲಕ ಆಧಾರರಹಿತ ಆರೋಪಗಳನ್ನು ಮಾಡಿಸಿ, ನಿಯಮಬಾಹಿರ ಕೆಲಸಗಳಿಗೆ ಕುಮ್ಮಕ್ಕು ನೀಡುತ್ತಿರುವ ನಿಮಗೆ ಮಾತನಾಡಲು ಯಾವ ನೈತಿಕತೆ ಇದೆ? ನಿಯಮಬಾಹಿರ ಕೆಲಸಗಳಲ್ಲಿ ನಿಮ್ಮ ಪಾಲೆಷ್ಟು?’ ಎಂದು ಬಿ.ಸಿ.ನಾಗೇಶ್ ಕುಟುಕಿದ್ದಾರೆ.

‘2004ರಲ್ಲಿ ತಮಿಳುನಾಡಿನ ಕುಂಭಕೋಣಂನ ಶಾಲೆಯೊಂದರಲ್ಲಿ ನಡೆದ ಅಗ್ನಿದುರಂತದ ಹಿನ್ನೆಲೆ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಸುಪ್ರೀಂಕೋರ್ಟ್ ಆದೇಶದ ಅನುಸಾರ ರೂಪಿಸಿರುವ ನಿಯಮಗಳು, ಮಾರ್ಗಸೂಚಿಗಳನ್ನೇ ನೀವು ಪ್ರಶ್ನಿಸುತ್ತಿದ್ದೀರಿ! ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ನಿಮಗೆ ಕಾಳಜಿ ಇಲ್ಲವೇ ಸಿದ್ದರಾಮಯ್ಯ?’ ಎಂದು ಶಿಕ್ಷಣ ಸಚಿವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಾಲ ಬಿಚ್ಚೋರಿಗೆ ಬುಲ್ಡೋಜರ್ ದಾಳಿಯ ಎಚ್ಚರಿಕೆ ಕೊಟ್ಟ ಸಿಟಿ ರವಿ..!

‘ಖಾಸಗಿ ಶಾಲೆ ಪ್ರಥಮ ಮಾನ್ಯತೆ & ಮಾನ್ಯತೆ ನವೀಕರಣ ಪ್ರಕ್ರಿಯೆಯನ್ನು ಆನ್‌ಲೈನ್‌ಗೊಳಿಸಿ, ಪಾರದರ್ಶಕ ವ್ಯವಸ್ಥೆಯನ್ನು ನಮ್ಮ ಸರ್ಕಾರ ಅನುಷ್ಠಾನಗೊಳಿಸಿದೆ. ಆದರೆ, ಶಿಸ್ತುಬದ್ಧ ವ್ಯವಸ್ಥೆಯ ಅನುಷ್ಠಾನದ ವಿರುದ್ಧವೇ ನಿಂತು, ಸಂಘಟನೆಯ ಅಧ್ಯಕ್ಷನೆಂದು ಹೇಳಿಕೊಂಡು ಓಡಾಡುವ ಬೂಟಾಟಿಕೆಯ ವ್ಯಕ್ತಿಯ ಅಕ್ರಮದಲ್ಲಿ ಸಿದ್ದರಾಮಯ್ಯನವರ ಪಾಲೆಷ್ಟು?’ ಎಂದು ಅವರು ಪ್ರಶ್ನಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News