SSLC PUC Exam 2024: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಪ್ರಕಟ
SSLC and PUC exam date announcement: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳ ದಿನಾಂಕ ಪ್ರಕಟವಾಗಿದ್ದು, ಈ ಕೆಳಗಿನಂತೆ ಪರೀಕ್ಷೆಗಳು ನಡೆಯಲಿವೆ.
Education news SSLC PUC exams: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳ ದಿನಾಂಕ ಪ್ರಕಟವಾಗಿದ್ದು, ಈ ಕೆಳಗಿನಂತೆ ಪರೀಕ್ಷೆಗಳು ನಡೆಯಲಿವೆ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದರು. ಮಾರ್ಚ್ 1 ರಿಂದ 22ರ ವರೆಗೆ ಪಿಯುಸಿ ಹಾಗೂ ಮಾರ್ಚ್ 25 ರಿಂದ ಜೂನ್ 06 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದರು.
ಇದನ್ನೂ ಓದಿ: ಇದು ಎನ್‌ಡಿಎ ಕೊನೆಯ ಚುನಾವಣೆ, ಮೋದಿ ಸರ್ಕಾರ ಅಂತ್ಯವಾಗುತ್ತೆ ಎಂದು ಭವಿಷ್ಯ ನುಡಿದ ಶಾಸಕ ಅಬ್ಬಯ್ಯಾ ಪ್ರಸಾದ್
ಅಲ್ಲದೆ ಈ ಬಾರಿ ಪಿಯುಸಿ ಪರೀಕ್ಷೆಯಲ್ಲಿ 6,98,624 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ಪಿಯುಸಿಗೆ 1124 ಪರೀಕ್ಷಾ ಕೇಂದ್ರಗಳನ್ನು ನಿಗದಿ ಮಾಡಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 8,96,271 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದು, ಒಟ್ಟು 2747 ಪರೀಕ್ಷಾ ಕೇಂದ್ರಗಳು ಇರಲಿದೆ.
ಎಲ್ಲ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳು ಮೂರರಲ್ಲಿ ಯಾವುದಾದರು ಪರೀಕ್ಷೆಗೆ ಹಾಜರಾಗಬೇಕು. ಮೂರು ಪರೀಕ್ಷೆಯಲ್ಲಿ ಮೊದಲು ಅಥವಾ ಎರಡು ಯಾವ ಪರೀಕ್ಷೆಯನ್ನು ಬೇಕಿದ್ರೆ ಆಯ್ಕೆ ಮಾಡಬಹುದು. ಮೂರು ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಟಾಪ್ ಮಾರ್ಕ್ಸ್ ಪರಿಗಣನೆ ಮಾಡಲಾಗುತ್ತದೆ. ಹೆಚ್ಚು ಅಂಕ ಪಡೆದಿರುವ ಮಾರ್ಕ್ಸ್ ಮಾತ್ರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ: ಬಿಜೆಪಿ ವಿಷದ ಹೊಗೆ ಬಿಡುತ್ತದೆ ಎಂದು ಜನ ಪಕ್ಕಕ್ಕೆ ತಳ್ಳಿದರು: ಸಿಎಂ ಸಿದ್ದರಾಮಯ್ಯ
ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧ್ಯಕ್ಷರಾದ ಮಂಜುಳಾ, ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಾದ ಸಿಂಧೂ ಬಿ ರೂಪೇಶ್ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.