ನಾಳೆ SSLC ಫಲಿತಾಂಶ ಪ್ರಕಟಿಸುವುದರಲ್ಲೂ ಗೊಂದಲಕ್ಕೆ ಸಿಲುಕಿರುವ ರಾಜ್ಯ ಸರ್ಕಾರ

ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆ ನಡೆಸಿದ್ದೇ ವಿವಾದಾಸ್ಪದವಾಗಿತ್ತು. ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಣ ಕ್ಷೇತ್ರದ ತಜ್ಞರ ವಿರೋಧದ ನಡುವೆಯೂ ಸರ್ಕಾರ ಸ್ವಪ್ರತಿಷ್ಠೆಗಾಗಿ ಎಸ್ ಎಲ್ ಸಿ (SSLC) ಪರೀಕ್ಷೆ ನಡೆಸಿತ್ತು. 

Written by - Yashaswini V | Last Updated : Aug 6, 2020, 12:19 PM IST
  • ನಾಳೆ ಎಸ್ ಎಸ್ ಎಲ್ ಸಿ (SSLC) ಫಲಿತಾಂಶ ಇಲ್ಲ.
  • SSLC ಫಲಿತಾಂಶ ಇಲ್ಲ ದಿನಾಂಕ ಇನ್ನೂ ನಿಶ್ಚಯವಾಗಿಲ್ಲ
ನಾಳೆ SSLC ಫಲಿತಾಂಶ ಪ್ರಕಟಿಸುವುದರಲ್ಲೂ ಗೊಂದಲಕ್ಕೆ ಸಿಲುಕಿರುವ ರಾಜ್ಯ ಸರ್ಕಾರ title=

ಬೆಂಗಳೂರು: COVID- 19 ಕಾರಣಕ್ಕೆ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆ ನಡೆಸುವ ವಿಷಯದಲ್ಲಿ ಇನ್ನಿಲ್ಲದ ಗೊಂದಲ ಸೃಷ್ಟಿಸಿದ್ದ ರಾಜ್ಯ ಸರ್ಕಾರ ಈಗ ಫಲಿತಾಂಶ ಪ್ರಕಟಿಸುವ ವಿಷಯದಲ್ಲೂ ಗೊಂದಲಕ್ಕೀಡಾಗಿದೆ. ಅಲ್ಲದೆ ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲೂ ಗೊಂದಲ ಸೃಷ್ಟಿಸುತ್ತಿದೆ.

ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆ ನಡೆಸಿದ್ದೇ ವಿವಾದಾಸ್ಪದವಾಗಿತ್ತು. ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಣ ಕ್ಷೇತ್ರದ ತಜ್ಞರ ವಿರೋಧದ ನಡುವೆಯೂ ಸರ್ಕಾರ ಸ್ವಪ್ರತಿಷ್ಠೆಗಾಗಿ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆ ನಡೆಸಿತ್ತು. ಈಗ ಫಲಿತಾಂಶ ಯಾವಾಗ ಎನ್ನುವ ಬಗ್ಗೆ ಸ್ಪಷ್ಟತೆ ಇಲ್ಲದಂತಾಗಿದೆ.

ಆಗ ಪರೀಕ್ಷೆ ನಡೆಸುವಾಗ ಮಕ್ಕಳ ಜೀವ ಒತ್ತೆ ಇಟ್ಟು ಪರೀಕ್ಷೆ ನಡೆಸಲಾಯಿತು. ಈಗ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟ ಆಡುತ್ತಿದೆ.‌ ಸರ್ಕಾರದ ಯಾವ ಮೂಲದಿಂದ ಮಾಹಿತಿ ಸೋರಿಕೆಯಾಗಿದೆಯೋ ಗೊತ್ತಿಲ್ಲ. ಆದರೆ ನಾಳೆಯೇ (ಆಗಸ್ಟ್ 7) ಎಸ್ ಎಸ್ ಎಲ್ ಸಿ (SSLC) ಪರೀಕ್ಷಾ ಫಲಿತಾಂಶ ಎಂಬ ಸುದ್ದಿಗಳು ಸರಿದಾಡುತ್ತಿವೆ. ಈಗ ಸ್ವತಃ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ (S Suresh Kumar) 'ನಾಳೆ ಎಸ್ ಎಸ್ ಎಲ್ ಸಿ (SSLC) ಫಲಿತಾಂಶ ಇಲ್ಲ' ಎಂದು ಸ್ಪಷ್ಟೀಕರಣ ನೀಡಿದ್ದಾರೆ.

ಈ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, 'ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ ಎಂಬ ಸುದ್ದಿ ಸತ್ಯವಲ್ಲ, ಇನ್ನೂ ದಿನಾಂಕ ನಿಶ್ಚಯವಾಗಿಲ್ಲ' ಎಂದು ಬರೆದುಕೊಳ್ಳುವ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ. ದಿನಾಂಕ ನಿಗಧಿಯಾದ ಬಳಿಕ ಅದನ್ನು ಸರಿಯಾಗಿ ತಿಳಿಸುವ ಕೆಲಸವನ್ನು ಅವರು ಮಾಡಬೇಕಾಗಿದೆ.

Trending News