S Suresh Kumar : PUC ಪರೀಕ್ಷೆಗಳ ಬಗ್ಗೆ ಮಹತ್ವದ ಮಾಹಿತಿ : ಸಚಿವ ಸುರೇಶ್ ಕುಮಾರ್!
ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಶಿಕ್ಷಣ ಇಲಾಖೆಯು ಆಯೋಜಿಸಿದ್ದ ಸಭೆಯಲ್ಲಿ ಎಲ್ಲ ರಾಜ್ಯಗಳ ಶಿಕ್ಷಣ ಸಚಿವರು ಭಾಗವಿಸಿದ್ದರು
ಬೆಂಗಳೂರು : ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸುವುದು ಬಹಳ ಮುಖ್ಯ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಶಿಕ್ಷಣ ಇಲಾಖೆಯು ಆಯೋಜಿಸಿದ್ದ ಸಭೆಯಲ್ಲಿ ಎಲ್ಲ ರಾಜ್ಯಗಳ ಶಿಕ್ಷಣ ಸಚಿವರು ಭಾಗವಿಸಿದ್ದರು. ರಾಜ್ಯ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್(S Suresh Kumar) ಅವರು ಕೂಡ ಭಾಗವಹಿಸಿದ್ದರು. ಸಭೆಯಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್, ವೃತ್ತಿಪರ ಶಿಕ್ಷಣಕ್ಕೆ ಸನ್ನದ್ಧರಾಗುವ ಹಂತದಲ್ಲಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಯಾವುದಾದರೂ ಮಾದರಿಯಲ್ಲಿ ಪರೀಕ್ಷೆಗಳನ್ನು ನಡೆಸಬೇಕಾದ್ದು ಅನಿವಾರ್ಯ. ಕೋವಿಡ್ ಸಂಪೂರ್ಣವಾಗಿ ಹತೋಟಿಗೆ ಬಂದ ನಂತರ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿಯಾದರೂ ಪರೀಕ್ಷೆಗಳನ್ನು ನಡೆಸುವುದು ಸಮರ್ಪಕ ಎಂದರು.
ಇದನ್ನೂ ಓದಿ : Basavaraj Bommai : ಅಂತರ ರಾಜ್ಯ ಪ್ರಯಾಣಿಕರಿಗೆ 'ಕೋವಿಡ್ ನೆಗೆಟಿವ್' ಕಡ್ಡಾಯ!
ಪ್ರಸ್ತುತ ಕೊರೋನಾ ಎಲ್ಲೆಡೆ ತೀವ್ರವಾಗಿ ಹಾರುಡುತ್ತಿದ್ದು, ರಾಜ್ಯದಲ್ಲಿ ಎರಡನೇ ಅಲೆ ಹತೋಟಿಗೆ ಬಂದ ಕೂಡಲೇ 15-20 ದಿನಗಳ ಕಾಲಾವಕಾಶ ನೀಡಿ ಮುಂಚೆಯೇ ಪರೀಕ್ಷೆ(2nd PUC Exams)ಗಳ ದಿನಾಂಕವನ್ನು ಪ್ರಕಟಿಸಲು ಸದ್ಯಕ್ಕೆ ತೀರ್ಮಾನಿಸಲಾಗಿದೆ. ಕೊರೋನಾ ಕಾರಣಕ್ಕಾಗಿ ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಳ್ಳಲು ವಿಫಲರಾಗುವ ವಿದ್ಯಾರ್ಥಿಗಳಿಗೆ ಹೊಸದಾಗಿ ಇನ್ನೊಮ್ಮೆ ಪರೀಕ್ಷೆ ಬರೆಯಲು ಇದೇ ಸಾಲಿನಲ್ಲಿ ಅವಕಾಶ ಕಲ್ಪಿಸಲು ಸಹ ರಾಜ್ಯ ಸರ್ಕಾರ ಯೋಚಿಸಿದೆ ಅಂದು ಹೇಳಿದ್ದಾರೆ.
ಇದನ್ನೂ ಓದಿ : Karnataka Govt : ಚಾಮರಾಜನಗರ ಆಕ್ಸಿಜನ್ ದುರಂತ : ಸರ್ಕಾರದಿಂದ ಸಂತ್ರಸ್ತರಿಗೆ ₹ 2 ಲಕ್ಷ ಪರಿಹಾರ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.