ಸರ್ಕಾರಿ ಬಸ್ ಅಪಘಾತ: ಇಬ್ಬರು ಸಾವು, ನಿರ್ವಾಹಕ ಸೇರಿ 8 ಜನರಿಗೆ ಗಾಯ
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿಯ ಅರಸಾಪುರ ಗ್ರಾ.ಪಂ ವ್ಯಾಪ್ತಿಯ ಕಾಶಾಪುರ ಗ್ರಾಮದ ಮುಖ್ಯರಸ್ತೆಯಲ್ಲಿ ಅಪಘಾತ ಸಂಭವಿಸಿದೆ.
ತುಮಕೂರು: ಕಾಶಾಪುರ ರಸ್ತೆಯ ತಿರುವಿನಲ್ಲಿ ಬೇವಿನ ಮರಕ್ಕೆ ಸರ್ಕಾರಿ ಬಸ್ ಡಿಕ್ಕಿ (Bus Accident) ಹೊಡೆದಿದೆ. ಅಪಘಾತದಲ್ಲಿ ಬಿಕ್ಷುಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಜಿಲ್ಲೆಯ ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿಯ ಅರಸಾಪುರ ಗ್ರಾ.ಪಂ ವ್ಯಾಪ್ತಿಯ ಕಾಶಾಪುರ ಗ್ರಾಮದ ಮುಖ್ಯರಸ್ತೆಯಲ್ಲಿ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ವಿದೇಶಿ ಕರೆನ್ಸಿ ಕಳ್ಳ ಸಾಗಾಟ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬಂಧನ
ಚಿಕ್ಕಬಳ್ಳಾಪುರದಿಂದ ಗೌರಿಬಿದನೂರು-ಮಧುಗಿರಿ-ಶಿರಾ ಮಾರ್ಗವಾಗಿ ತಿರುಪತಿಗೆ (Tirupati) ತೆರಳುತ್ತಿದ್ದ ಸರಕಾರಿ ಕೊರಟಗೆರೆ ತಾಲೂಕಿನ ಕಾಶಾಪುರ ತಿರುವಿನಲ್ಲಿ ಅಪಘಾತವಾಗಿದೆ
ಗೌರಿಬಿದನೂರು ಕಡೆಯಿಂದ ವೇಗವಾಗಿ ಬರುತ್ತಿದ್ದ ಸರಕಾರಿ ಬಸ್ ಕಾಶಾಪುರ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೇವಿನ ಮರಕ್ಕೆ ಡಿಕ್ಕಿ ಹೊಡೆದಿದೆ.
ಕಾಶಪುರದ ಮುಖ್ಯರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಬಿಕ್ಷುಕನ ಮೇಲೆ ಬಸ್ ಹರಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ನಂತರ ಅದೇ ಬಸ್ ರೈತ ಗೋಪಾಲಯ್ಯ ಎಂಬುವವರ ಮೇಲೆಯು ಹರಿದಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಗೋಪಾಲಯ್ಯ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ.
ಸರಕಾರಿ ಬಸ್ಸಿನ ಚಾಲಕ ಅಪಘಾತದ ನಂತರ ಸ್ಥಳದಿಂದ ಪರಾರಿ ಆಗಿದ್ದಾರೆ. ನಿರ್ವಾಹಕ ಸೇರಿ ಬಸ್ಸಿನಲ್ಲಿದ್ದ 8 ಜನರಿಗೆ ಗಾಯವಾಗಿದೆ. ಗಾಯಾಳುಗಳನ್ನು ಕೊರಟಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಈ ಕುರಿತು ಕೊರಟಗೆರೆ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಒಂದೇ ಗಂಟೆಯ ಅವಧಿಯೊಳಗೆ ಶಿವಮೊಗ್ಗದಲ್ಲಿ ಐದು ಕಡೆ ಸರಗಳ್ಳತನ !
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.