By-election for Karnataka Legislative Council: 2023ರ ರಾಜ್ಯ ವಿಧಾನಸಭಾ ಚುನಾಣೆಯಲ್ಲಿ ಸ್ಪರ್ಧಿಸುವ ನಿಟ್ಟಿನಲ್ಲಿ ಬಿಜೆಪಿಯ ಮಾಜಿ ನಾಯಕರು ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಕರ್ನಾಟಕ ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ಚುನಾವಣಾ ಆಯೋಗ ಉಪಚುನಾವಣೆ ದಿನಾಂಕವನ್ನು ಪ್ರಕಟಿಸಿದೆ. 
ಜೂನ್ 30, 2023ರಂದು ಉಪಚುನಾವಣೆಗೆ ಮುಹೂರ್ತ ನಿಗಡಿಯಾಗಿದ್ದು, ಅದೇ ದಿನ ಮತ ಎಣಿಕೆಯೂ ನಡೆಯಲಿದೆ. 


COMMERCIAL BREAK
SCROLL TO CONTINUE READING

ಕರ್ನಾಟಕ ವಿಧಾನ ಪರಿಷತ್ತಿನ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 20, 2023 ಕೊನೆಯ ದಿನಾಂಕವಾಗಿದೆ. ಜೂನ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಜೂನ್ 23 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. 


ಇದನ್ನೂ ಓದಿ- ಕರ್ನಾಟಕ ಸೇರಿದಂತೆ ಈ ರಾಜ್ಯಗಳಲ್ಲಿ ಮುಂದಿನ 3 ದಿನ ಭಾರೀ ಮಳೆ


ಎಂಎಲ್‌ಸಿ ಉಪಚುನಾವಣೆಯ ಮತದಾನ, ಮತಎಣಿಕೆ: 
ಕರ್ನಾಟಕ ವಿಧಾನ ಪರಿಷತ್ತಿನ ಉಪಚುನಾವಣೆಗೆ ರಾಜ್ಯ ವಿಧಾನಸಭಾ ಶಾಸಕರು ಜೂನ್ 30 ರಂದು ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಪ್ರತ್ಯೇಕವಾಗಿ ಮೂರು ಸ್ಥಾನಗಳಿಗೆ ಮತ ಚಲಾಯಿಸಲಿದ್ದಾರೆ. ಅದೇ ದಿನ ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ. 


ವಾಸ್ತವವಾಗಿ, 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಬಾಬುರಾವ್ ಚಿಂಚನಸೂರ್, ಆರ್ ಶಂಕರ್ ಮತ್ತು ಲಕ್ಷ್ಮಣ ಸವದಿ ತಮ್ಮ ವಿಧಾನಪರಿಷತ್ ಸದಸ್ಯತ್ವ (ಎಂಎಲ್‌ಸಿ) ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಪಕ್ಷದಿಂದ ಹೊರಬಂದಿದ್ದರು. ಇದರಿಂದ ಕರ್ನಾಟಕ ವಿಧಾನಪರಿಷತ್ತಿನ ಮೂರು ಸ್ಥಾನಗಳು ತೆರವಾಗಿದ್ದವು. 


ಇದನ್ನೂ ಓದಿ- ಮೈಸೂರು, ಗೌರೀಬಿದನೂರು, ಕೋಲಾರಕ್ಕೆ ಉಪನಗರ ರೈಲು ಯೋಜನೆ ವಿಸ್ತರಣೆ: ಎಂ.ಬಿ.ಪಾಟೀಲ್


ಈ ಮೂವರು ನಾಯಕರ ಪೈಕಿ ಚಿಚಣಸೂರ್ ಗ್ರುಮಿಟ್‌ಕಲ್‌ನಿಂದ ಸ್ಪರ್ಧಿಸಿ ಪರಾಭವಗೊಂಡರೆ, ಶಂಕರ್ ರಾಣೆಬೆನ್ನೂರಿನಿಂದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಸೋಲುಂಡರು. ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ  ಕಾಂಗ್ರೆಸ್ ಟಿಕೆಟ್‌ನಲ್ಲಿ ಪ್ರತಿಷ್ಠಿತ ಕಣವಾಗಿ ಪರಿಗಣಿಸಿದ್ದ ಅಥಣಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ದಾಖಲಿಸಿದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.


rainKarnataka rain