ನ.28 ರಂದು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಚುನಾವಣೆ
ಇದೇ ನ.28ರಂದು ಬಳ್ಳಾರಿ ಮಹಾನಗರ ಪಾಲಿಕೆಯ 22ನೇ ಅವಧಿಯ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಅಂದು ಮಹಾನಗರ ಪಾಲಿಕೆ ಸುತ್ತ ಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಬಳ್ಳಾರಿ: ಇದೇ ನ.28ರಂದು ಬಳ್ಳಾರಿ ಮಹಾನಗರ ಪಾಲಿಕೆಯ 22ನೇ ಅವಧಿಯ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಅಂದು ಮಹಾನಗರ ಪಾಲಿಕೆ ಸುತ್ತ ಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಚುನಾವಣೆಯ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವುದರಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತವಾಗಿ ಚುನಾವಣೆ ನಡೆಸಲು ಸಿಆರ್‌ಪಿಸಿ ಕಾಯ್ದೆ 1973 ಕಲಂ 144 ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿಯನ್ನು ಅಪ್ಪಿಕೊಂಡ ಪ್ಯಾಲಿಸ್ತೀನ್ ಬೆಂಬಲಿಗ
ನ.28ರಂದು ಮಹಾನಗರ ಪಾಲಿಕೆಯ 500 ಮೀ. ವ್ಯಾಪ್ತಿಯಲ್ಲಿ ನಿಷೇಧಿಸಲಾದ ಚಟುವಟಿಕೆಗಳು:
ಇಂಕ್ (ಮಸಿ), ನೀರು, ಬೆಂಕಿ ಪೊಟ್ಟಣ, ಲೈಟರ್ ಮತ್ತು ಇತರ ಅಪಾಯಕಾರಿ ವಸ್ತುಗಳನ್ನು ತೆಗೆದುಕೊಂಡು ಹೋಗುವುದು. ಶಸ್ತ್ರ, ಬಡಿಗೆ, ಬರ್ಚಿಗದೆ, ಬಂದೂಕು, ಚಾಕು, ಚೂರಿ, ಕೋಲು, ಲಾಠಿ ಅಥವಾ ಶರೀರಕ್ಕೆ ಗಾಯ ಮಾಡಲು ಉಪಯೋಗಿಸಬಹುದಾದ ಯಾವುದೇ ವಸ್ತು ತೆಗೆದುಕೊಂಡು ಹೋಗುವುದು ನಿಷೇಧಿಸಲಾಗಿದೆ.
ಯಾವುದೇ ದಾಹಕ (ನಾಶಕಾರಿ) ಇಲ್ಲವೆ ಸ್ಫೋಟಕ ವಸ್ತು ಒಯುವುದು, ಪಟಾಕಿ / ಸಿಡಿಮದ್ದು ಸಿಡಿಸುವುದು. ಕಲ್ಲು ಎಸೆಯುವ ವಸ್ತು ಅಥವಾ ಅಂತಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಶಸ್ತ್ರಗಳು ಅಥವಾ ಸಾಧನಗಳು ಇವುಗಳನ್ನು ತೆಗೆದುಕೊಂಡು ತಿರುಗಾಡುವುದು. ಕಾರು/ಮೋಟರ್ ಬೈಕ್ ಮತ್ತು ಇತರೆ ವಾಹನಗಳಲ್ಲಿ ರ್ಯಾಲಿಯನ್ನು ಆಯೋಜಿಸುವುದು ಸಹ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: “ನನ್ನನ್ನು ಕರೆದಿಲ್ಲ… ವಿಶ್ವಕಪ್ ಫೈನಲ್ ಪಂದ್ಯ ನಾನು ನೋಡಲ್ಲ”- ಕ್ರಿಕೆಟ್ ದಿಗ್ಗಜ ಕಪಿಲ್ ದೇವ್
ವಿಜಯೋತ್ಸವಗಳನ್ನು ಆಚರಿಸುವುದು ಹಾಗೂ ಭೋಜನಕೂಟಗಳನ್ನು ಏರ್ಪಡಿಸುವುದು. 5 ಕ್ಕಿಂತ ಹೆಚ್ಚು ಜನರು ಗುಂಪು ಕೂಡಿ ತಿರುಗಾಡುವುದು ಮಹಾನಗರ ಪಾಲಿಕೆ ಸಿಬ್ಬಂದಿ ಹಾಗೂ ಮಹಾನಗರಪಾಲಿಕೆ ಸದಸ್ಯರು ಹೊರತು ಪಡಿಸಿ).
ಅದೇ ರೀತಿಯಾಗಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಕುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿಯ ಪ್ರದರ್ಶನವನ್ನು ಹಾಗೂ ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಯಾವುದೇ ವಸ್ತು ಅಥವಾ ಪದಾರ್ಥದ ತಯಾರಿ ಪ್ರದರ್ಶನ ಅಥವಾ ಪ್ರಸಾರ ಮಾಡುವುದು ನಿಷೇಧಿಸಲಾಗಿದೆ ಎಂದು ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
------