ರಾಯಚೂರು: ಮಸ್ಕಿ ವಿಧಾನಸಭೆ ಉಪ ಚುನಾವಣೆಯ ದಿನಾಂಕ ಘೋಷಣೆಗೆ ತಯಾರಿ ನಡೆದಿದೆ. ಇದಕ್ಕೆ ಪೂರಕವೆಂಬಂತೆ ಮಸ್ಕಿ ಕ್ಷೇತ್ರಕ್ಕೆ ಚುನಾವಣಾ ಆಯೋಗ ಅಧಿಕಾರಿಯನ್ನ ನೇಮಿಸಿದೆ.
ಲಿಂಗಸುಗೂರು ಸಹಾಯಕ ಆಯುಕ್ತರನ್ನು ಚುನಾವಣಾ ಅಧಿಕಾರಿ(Election Officer)ಯನ್ನಾಗಿ ನಿಯುಕ್ತಿಗೊಳಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಈ ಮೂಲಕ ಸದ್ಯ ಮತದಾರರ ಪಟ್ಟಿ, ಗುರುತಿನ ಚೀಟಿ ಹಾಗೂ ಮತಗಟ್ಟೆಗಳ ಮಾಹಿತಿಗಳನ್ನ ಕ್ರೋಢೀಕರಿಸಿ ಚುನಾವಣಾ ದಿನಾಂಕ ಘೋಷಣೆಗೆ ಸಿದ್ಧತೆ ನಡೆಸಿದೆ.
ರೈತರಿಗೆ ಸರ್ಕಾರಿದಿಂದ ಸಿಹಿ ಸುದ್ದಿ: KIADBಗೆ ಭೂಮಿ ಕೊಟ್ಟವರಿಗೆ ಪರಿಹಾರ ಹೆಚ್ಚಳ!
ಇತ್ತ ಕಾಂಗ್ರೆಸ್(Congress) ಹಾಗೂ ಜೆಡಿಎಸ್ ಈಗಾಗಲೇ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿವೆ. ಮತದಾರರನ್ನು ಸೆಳೆಯಲು ನಾನಾ ತಂತ್ರಗಳನ್ನು ರೂಪಿಸುತ್ತಿವೆ.
ಮಾಜಿ ಸಿಎಂ ವೀರಪ್ಪ ಮೊಯಿಲಿಗೆ 2020 ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಕಾಂಗ್ರೆಸ್ ಬಿಜೆಪಿ ಪಕ್ಷ(BJP Party)ಗಳು ತಮ್ಮ ಗೆಲುವಿಗಾಗಿ ಕಾರ್ಯತಂತ್ರ ಶುರುಮಾಡಿವೆ. ಇನ್ನು ಇದೇ ಮಾರ್ಚ್ 20ರಂದು ಮಸ್ಕಿಯಲ್ಲಿ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಪಕ್ಷ ಸೇರ್ಪಡೆ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಸಮಾವೇಶ ನಡೆಯಲಿದೆ. ಈ ಮೂಲಕ ಮಸ್ಕಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಗೆಲುವಿಗೆ ಸಿಎಂ ಬಿಎಸ್ವೈ ಮೆಗಾ ಪ್ಲಾನ್ ಮಾಡಿದ್ದಾರೆ.
KSRTC Bus: ಶಿವಸೇನೆ ಪುಂಡಾಟಿಕೆ; ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ ಬಂದ್!
ಇತ್ತ ಕಾಂಗ್ರೆಸ್, ತನ್ನ ಅಭ್ಯರ್ಥಿ ಬಸನಗೌಡ ತುರುವಿಹಾಳ(Basanagowda Turuvihala) ಗೆಲುವಿಗಾಗಿ ಕಾರ್ಯತಂತ್ರ ಶುರುಮಾಡಿದೆ. ವಿರೂಪಾಕ್ಷಪ್ಪ ಬಿಜೆಪಿ ಸೇರಿದ್ದರಿಂದ ಪಕ್ಷಕ್ಕೆ ಉಂಟಾಗಿರುವ ಡ್ಯಾಮೇಜ್ ಕಂಟ್ರೋಲ್ ಮಾಡುವಂತೆ ಕೋರಿ ಬಸನಗೌಡ ತುರುವಿಹಾಳ್ ಸಿದ್ದರಾಮಯ್ಯರ ಮೊರೆ ಹೋಗಿದ್ದಾರೆ.
Petrol-Diesel: 'ಬಡ, ಮಧ್ಯಮ ವರ್ಗಕ್ಕೆ ಕೈಗೆಟುಕುವ ದರದಲ್ಲಿ ಸಿಗಲಿದೆ ಶೀಘ್ರದಲ್ಲಿ ಪೆಟ್ರೋಲ್'
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.