ರಾಯಚೂರು: ಮಸ್ಕಿ ವಿಧಾನಸಭೆ ಉಪ ಚುನಾವಣೆಯ ದಿನಾಂಕ ಘೋಷಣೆಗೆ ತಯಾರಿ ನಡೆದಿದೆ. ಇದಕ್ಕೆ ಪೂರಕವೆಂಬಂತೆ ಮಸ್ಕಿ ಕ್ಷೇತ್ರಕ್ಕೆ ಚುನಾವಣಾ ಆಯೋಗ ಅಧಿಕಾರಿಯನ್ನ ನೇಮಿಸಿದೆ.


COMMERCIAL BREAK
SCROLL TO CONTINUE READING

ಲಿಂಗಸುಗೂರು ಸಹಾಯಕ ಆಯುಕ್ತರನ್ನು ಚುನಾವಣಾ ಅಧಿಕಾರಿ(Election Officer)ಯನ್ನಾಗಿ ನಿಯುಕ್ತಿಗೊಳಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಈ ಮೂಲಕ ಸದ್ಯ ಮತದಾರರ ಪಟ್ಟಿ, ಗುರುತಿನ ಚೀಟಿ ಹಾಗೂ ಮತಗಟ್ಟೆಗಳ ಮಾಹಿತಿಗಳನ್ನ ಕ್ರೋಢೀಕರಿಸಿ ಚುನಾವಣಾ ದಿನಾಂಕ ಘೋಷಣೆಗೆ ಸಿದ್ಧತೆ ನಡೆಸಿದೆ.


ರೈತರಿಗೆ ಸರ್ಕಾರಿದಿಂದ ಸಿಹಿ ಸುದ್ದಿ: KIADBಗೆ ಭೂಮಿ ಕೊಟ್ಟವರಿಗೆ ಪರಿಹಾರ ಹೆಚ್ಚಳ!


ಇತ್ತ ಕಾಂಗ್ರೆಸ್(Congress) ಹಾಗೂ ಜೆಡಿಎಸ್ ಈಗಾಗಲೇ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿವೆ. ಮತದಾರರನ್ನು ಸೆಳೆಯಲು ನಾನಾ ತಂತ್ರಗಳನ್ನು ರೂಪಿಸುತ್ತಿವೆ.


ಮಾಜಿ ಸಿಎಂ ವೀರಪ್ಪ ಮೊಯಿಲಿಗೆ 2020 ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ


ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಕಾಂಗ್ರೆಸ್ ಬಿಜೆಪಿ ಪಕ್ಷ(BJP Party)ಗಳು ತಮ್ಮ ಗೆಲುವಿಗಾಗಿ ಕಾರ್ಯತಂತ್ರ ಶುರುಮಾಡಿವೆ. ಇನ್ನು ಇದೇ‌ ಮಾರ್ಚ್​ 20ರಂದು ಮಸ್ಕಿಯಲ್ಲಿ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಪಕ್ಷ ಸೇರ್ಪಡೆ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಸಮಾವೇಶ ನಡೆಯಲಿದೆ. ಈ ಮೂಲಕ ಮಸ್ಕಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಗೆಲುವಿಗೆ ಸಿಎಂ ಬಿಎಸ್​​ವೈ ಮೆಗಾ ಪ್ಲಾನ್ ಮಾಡಿದ್ದಾರೆ.


KSRTC Bus: ಶಿವಸೇನೆ ಪುಂಡಾಟಿಕೆ; ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ ಬಂದ್!


ಇತ್ತ ಕಾಂಗ್ರೆಸ್, ತನ್ನ ಅಭ್ಯರ್ಥಿ ಬಸನಗೌಡ ತುರುವಿಹಾಳ(Basanagowda Turuvihala) ಗೆಲುವಿಗಾಗಿ ಕಾರ್ಯತಂತ್ರ ಶುರುಮಾಡಿದೆ. ವಿರೂಪಾಕ್ಷಪ್ಪ ಬಿಜೆಪಿ‌ ಸೇರಿದ್ದರಿಂದ ಪಕ್ಷಕ್ಕೆ ಉಂಟಾಗಿರುವ ಡ್ಯಾಮೇಜ್ ಕಂಟ್ರೋಲ್ ಮಾಡುವಂತೆ ಕೋರಿ ಬಸನಗೌಡ ತುರುವಿಹಾಳ್ ಸಿದ್ದರಾಮಯ್ಯರ ಮೊರೆ ಹೋಗಿದ್ದಾರೆ.


Petrol-Diesel: 'ಬಡ, ಮಧ್ಯಮ ವರ್ಗಕ್ಕೆ ಕೈಗೆಟುಕುವ ದರದಲ್ಲಿ ಸಿಗಲಿದೆ ಶೀಘ್ರದಲ್ಲಿ ಪೆಟ್ರೋಲ್'


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.