ಚುನಾವಣೆಯಲ್ಲಿ ಹಿನ್ನಡೆ, ಕಾಂಗ್ರೆಸ್ ಆತ್ಮಾವಲೋಕನ: ಎಂ ಬಿ ಪಾಟೀಲ
MB Patil : ನಾವು ಎಡವಿದ್ದೆಲ್ಲಿ ಎನ್ನುವುದನ್ನು ನಾವು ಕಂಡುಕೊಳ್ಳಲಿದ್ದೇವೆ. ಗೆಲ್ಲಬಹುದಾಗಿದ್ದ ಕೆಲವು ಕ್ಷೇತ್ರಗಳು ಕೈಜಾರಿರುವುದು ನಮಗೆ ಗೊತ್ತಾಗಿದೆ ಎಂದರು.
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ನಾವು ರಾಜ್ಯದಲ್ಲಿ ಕನಿಷ್ಟ ಪಕ್ಷ 14 ಸ್ಥಾನ ಗೆಲ್ಲುವ ನಿರೀಕ್ಷೆ ಇತ್ತು. ಆದರೆ 9 ಸ್ಥಾನಗಳಷ್ಟೇ ಬಂದಿವೆ. ಈ ಹಿನ್ನಡೆಗೆ ಕಾರಣಗಳೇನು ಎಂದು ಕಾಂಗ್ರೆಸ್ ಪಕ್ಷವು ಆತ್ಮಾವಲೋಕನ ಮಾಡಿಕೊಳ್ಳಲಿದೆ ಎಂದು ಪಕ್ಷದ ಹಿರಿಯ ನಾಯಕ ಮತ್ತು ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಶನಿವಾರ ಹೇಳಿದ್ದಾರೆ.
ಇಲ್ಲಿನ ನಿವಾಸದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕಳೆದ ಒಂದು ವರ್ಷದಲ್ಲಿ ರಾಜ್ಯ ಸರಕಾರವು ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದು, ಜನರಿಗೆ ಅದರ ಲಾಭ ಸಿಗುವಂತೆ ಮಾಡಿತ್ತು. ಆದರೂ ನಾವು ಎಡವಿದ್ದೆಲ್ಲಿ ಎನ್ನುವುದನ್ನು ನಾವು ಕಂಡುಕೊಳ್ಳಲಿದ್ದೇವೆ. ಗೆಲ್ಲಬಹುದಾಗಿದ್ದ ಕೆಲವು ಕ್ಷೇತ್ರಗಳು ಕೈಜಾರಿರುವುದು ನಮಗೆ ಗೊತ್ತಾಗಿದೆ ಎಂದರು.
ಇದನ್ನೂ ಓದಿ: ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗಕ್ಕೆ ಶಿಕ್ಷಕರ ನೇರಗುತ್ತಿಗೆ ನೇಮಕಕ್ಕಾಗಿ ಅರ್ಜಿ ಆಹ್ವಾನ
ಚುನಾವಣೆ ಹಿನ್ನಡೆಗೆ ಯಾರೋ ಒಬ್ಬರನ್ನು ಹೊಣೆ ಮಾಡುವುದು ಸಾಧ್ಯವಿಲ್ಲ. ಸಚಿವರ ಅಥವಾ ಶಾಸಕರ ಮೌಲ್ಯಮಾಪನ ಕೂಡ ನಡೆಯುವುದಿಲ್ಲ. ಪಕ್ಷದ ಮುಂದಿನ ಕಾರ್ಯತಂತ್ರ ಏನಿರಬೇಕು ಎಂದಷ್ಟೇ ಚಿಂತಿಸಲಾಗುವುದು ಎಂದು ಅವರು ನುಡಿದರು.
ಈಗ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ ಆಗುತ್ತಿದ್ದಾರೆ. ಕಳೆದ ಎರಡು ಬಾರಿಗಿಂತ ಈ ಸಲ ಬಿಜೆಪಿ ಬಲ ಕುಂದಿದೆ. ಹೀಗಾಗಿ ಈ ಸಲ ಅವರ ಸರಕಾರ ಎಷ್ಟು ದಿನ ಇರುತ್ತದೋ ಹೇಳಲು ಸಾಧ್ಯವಿಲ್ಲ. ಅದರಲ್ಲೂ ನಿತೀಶಕುಮಾರ್ ತರಹದ ವ್ಯಕ್ತಿಯನ್ನು ಇಟ್ಟುಕೊಂಡು ಸರಕಾರ ನಡೆಸುವುದು ಎಷ್ಟು ಕಷ್ಟ ಎನ್ನುವುದು ನಮಗೆ ಗೊತ್ತಿದೆ ಎಂದು ಅವರು ಭವಿಷ್ಯ ನುಡಿದರು.
ಮಹಾರಾಷ್ಟ್ರ, ಉತ್ತರ ಪ್ರದೇಶ, ರಾಜಾಸ್ಥಾನಗಳಲ್ಲಿ ಬಿಜೆಪಿ ಹೆಚ್ಚಿನ ಕಡೆ ಸೋಲಲಿದೆ ಎಂದು ನಾನು ಮೊದಲೇ ಹೇಳಿದ್ದೆ. ಈಗ ಅದೇ ರೀತಿ ಆಗಿದೆ ಎಂದು ಅವರು ನೆನಪಿಸಿದರು.
ಇದನ್ನೂ ಓದಿ: ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.