)
ಬೆಂಗಳೂರು : ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದೆ. ಈ ಬಗ್ಗೆ ನಮ್ಮಅನುಭವದ ಮೇಲೆ ನಾವು ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇವಿಎಂ ಬದಲು ಮತ್ತೆ ಬ್ಯಾಲೆಟ್ ಪೇಪರ್ ನಟ್ಟ ಮುಖ ಮಾಡುವ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಈ ನಿರ್ಧಾರವನ್ನು ತಮ್ಮ ಅನುಭವದ ಆಧಾರದಲ್ಲಿ ತೆಗೆದುಕೊಳ್ಳಲಾಗಿದೆ ಎಂದೂ ಹೇಳಿದ್ದಾರೆ. ಇನ್ನು ಅನೇಕ ದೇಶಗಳು ಇವಿಎಂ ಬಳಸಿ ಪುನಃ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡುತ್ತಿದ್ದಾರೆ ಎಂದು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.
ಇನ್ನು ಧರ್ಮಸ್ಥಳ ಪ್ರಕರಣವನ್ನು ಎನ್.ಐ. ಎ ಗೆ ವಹಿಸಬೇಕೆಂದು ಸ್ವಾಮೀಜಿಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿರುವ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಧರ್ಮಸ್ಥಳ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್.ಐ.ಟಿ ರಚನೆ ಮಾಡಿದ್ದು ಅವರೂ ಪೋಲೀಸಿನವರೇ ಎಂದು ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ : ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಮೈ ಮರೆತಿದ್ಯಾ ಸರ್ಕಾರ