ಇಂದಿನಿಂದ ರಾಜ್ಯದಲ್ಲಿ ವಿದ್ಯುತ್​ ದರ ಇಳಿಕೆ: ಪ್ರತಿ ಯುನಿಟ್​ಗೆ 1.10 ರೂ. ಕಡಿತ

ಕರ್ನಾಟಕ ರಾಜ್ಯ ವಿದ್ಯುತ್​ಚ್ಛಕ್ತಿ ನಿಯಂತ್ರಣ ಆಯೋಗ(KERC) ಲೋಕಸಭೆ ಚುನಾವಣೆ ಸಮಯದಲ್ಲಿ ಎಲ್ಲ ವರ್ಗದ ವಿದ್ಯುತ್​ ಬಳಕೆದಾರರಿಗೆ ಸಿಹಿ ಸುದ್ದಿಯನ್ನು​ ನೀಡಿದೆ.

Written by - Zee Kannada News Desk | Last Updated : Apr 1, 2024, 06:32 PM IST
  • ಕರ್ನಾಟಕ ರಾಜ್ಯ ವಿದ್ಯುತ್​ಚ್ಛಕ್ತಿ ನಿಯಂತ್ರಣ ಆಯೋಗ ಲೋಕಸಭೆ ಚುನಾವಣೆ ಸಮಯದಲ್ಲಿ ವಿದ್ಯುತ್​ ಬಳಕೆದಾರರಿಗೆ ಪ್ರತಿ ಯುನಿಟ್​ ಗೆ ದರ ಇಳಿಕೆಯಾಗಿದೆ.
  • 100 ಯುನಿಟ್​ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯುನಿಟ್​ಗೆ 1.10 ರೂ. ಕಡಿಮೆ ಮಾಡಲಾಗಿದೆ.
  • ಎಲ್ಲಾ ಎಸ್ಕಾಂಗಳಿಗೂ ಏಕರೂಪದ ಗೃಹಬಳಕೆ ವಿದ್ಯುತ್​ ದರ ನಿಗದಿ ಮಾಡಿದೆ
ಇಂದಿನಿಂದ ರಾಜ್ಯದಲ್ಲಿ ವಿದ್ಯುತ್​ ದರ ಇಳಿಕೆ: ಪ್ರತಿ ಯುನಿಟ್​ಗೆ 1.10 ರೂ. ಕಡಿತ title=

ಕರ್ನಾಟಕ ರಾಜ್ಯ ವಿದ್ಯುತ್​ಚ್ಛಕ್ತಿ ನಿಯಂತ್ರಣ ಆಯೋಗ ಲೋಕಸಭೆ ಚುನಾವಣೆ ಸಮಯದಲ್ಲಿ  ವಿದ್ಯುತ್​ ಬಳಕೆದಾರರಿಗೆ  ಪ್ರತಿ ಯುನಿಟ್​ ಗೆ ದರ ಇಳಿಕೆಯಾಗಿದೆ. 

ಇದನ್ನು ಓದಿ : Stressbuster Snacks: ದಿನನಿತ್ಯ ಒತ್ತಡ ಹೆಚ್ಚಾಗುತ್ತಾ ಇದೆಯೇ? ಮನಸ್ಸಿಗೆ ವಿಶ್ರಾಂತಿ ಪಡೆಯಲು ಈ ಆಹಾರಗಳನ್ನು ಸೇವಿಸಿ!ದಿನನಿತ್ಯ ಒತ್ತಡ ಹೆಚ್ಚಾಗುತ್ತಾ ಇದೆಯೇ? ಮನಸ್ಸಿಗೆ ವಿಶ್ರಾಂತಿ ಪಡೆಯಲು ಈ ಆಹಾರಗಳನ್ನು ಸೇವಿಸಿ!

100 ಯುನಿಟ್​ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯುನಿಟ್​ಗೆ 1.10 ರೂ. ಕಡಿಮೆ ಮಾಡಲಾಗಿದ್ದು, ಕೆಇಆರ್ ಸಿ ವಿದ್ಯುತ್​ ದರ ಇಳಿಕೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ. 

15 ವರ್ಷಗಳ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆಯಾಗಿದ್ದು, ಗೃಹ ಬಳಕೆಯಲ್ಲಿ 100 ಯುನಿಟ್​​ಗಿಂತ ಹೆಚ್ಚು ವಿದ್ಯುತ್​​ ಬಳಕೆ ಮಾಡುವವರಿಗೆ ಪ್ರತಿ ಯುನಿಟ್​ಗೆ 1.10 ರೂ. ಕಡಿಮೆ ಮಾಡಲಾಗಿದೆ.  

 ಎಲ್ಲಾ ಎಸ್ಕಾಂಗಳಿಗೂ ಏಕರೂಪದ ಗೃಹಬಳಕೆ ವಿದ್ಯುತ್​ ದರ ನಿಗದಿ ಮಾಡಿದೆ ಮತ್ತು 2024-25ನೇ ಸಾಲಿಗೆ ಅನ್ವಯವಾಗುವಂತೆ ಈ ಪರಿಷ್ಕೃತ ದರ ಇಂದಿನಿಂದಲೇ(ಏಪ್ರಿಲ್​ 01) ಜಾರಿಗೆ ಬರಲಿದೆ.

ಇದನ್ನು ಓದಿ : IPL 2024: ಒಂದೇ ಪಂದ್ಯದಲ್ಲಿ ಒಂದರ ಮೇಲೊಂದರಂತೆ 5 ದಾಖಲೆ ಬರೆದ Mahendra Singh Dhoni

ರಾಜ್ಯ ಸರ್ಕಾರ 200 ಯುನಿಟ್​ ಒಳಗೆ ಬಳಸುವವರಿಗೆ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್​ ನೀಡುವುದರಿಂದ ಈ ಸೌಲಭ್ಯಕ್ಕೆ ನೋಂದಾಯಿಸಿಕೊಂಡವರಿಗೆ ದರ ಇಳಿಕೆಯ ಪ್ರಯೋಜನ ಸಿಗುವುದಿಲ್ಲ. 100 ಯುನಿಟ್​ಗಿಂತ ಕಡಿಮೆ ವಿದ್ಯುತ್​ ಬಳಕೆ ಮಾಡುವವರು ಈಗಾಗಲೆ ಪ್ರತಿ ಯುನಿಟ್​ಗೆ 4.75 ರೂ. ಪಾವತಿಸುತ್ತಿದ್ದಾರೆ. ಆದರೆ ಇದಕ್ಕೂ  ಮೊದಲು 100ಕ್ಕಿಂತ ಹೆಚ್ಚು ಯುನಿಟ್​ ವಿದ್ಯುತ್​ ಬಳಕೆ ಮಾಡುವವರಿಗೆ ಪ್ರತಿ ಯುನಿಟ್​​ಗೆ 7 ರೂ. ನಿಗದಿ ಮಾಡಲಾಗಿತ್ತು. ಇದೀಗ 7 ರೂ. ಬದಲಿಗೆ ಪ್ರತಿ ಯುನಿಟ್​ಗೆ 5.90 ರೂ. ಮಾತ್ರ ಶುಲ್ಕ ವಿಧಿಸಲಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News