Elephant Attack: ಕಾಡಾನೆ ದಾಳಿಯಿಂದ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಪಿ.ಜಿ‌.ಪಾಳ್ಯ ಸಮೀಪ ಆಲದಕೆರೆ ಕಾಡಿನಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಪಿ‌.ಜಿ‌‌‌.ಪಾಳ್ಯ ಸಮೀಪದ ಮಾಳಿಗನತ್ತ ಗ್ರಾಮದ ಪ್ರಭುಸ್ವಾಮಿ(55) ಮೃತ ದುರ್ದೈವಿ. ಮಲೆ  ಮಹದೇಶ್ವರ  ವನ್ಯಜೀವಿಧಾಮ  ಪಿ ಜಿ ಪಾಳ್ಯ ಅರಣ್ಯ  ವಲಯಕ್ಕೆ ಸೇರಿದ ಆಲದಕೆರೆ ಬಯಲು ಅರಣ್ಯ ಪ್ರದೇಶಕ್ಕೆ ಪ್ರಭುಸ್ವಾಮಿ ಹಾಗೂ ಮಗ ಚಂದ್ರು ಇಬ್ಬರೂ ಪೊರಕೆ ಕಡ್ಡಿ ಕೀಳಲು ತೆರಳಿದ್ದರು.


ಇದನ್ನೂ ಓದಿ- ಇಂದಿನಿಂದ ‘ಅನ್ನಭಾಗ್ಯ’ ಅಕ್ಕಿ ಬದಲು ಸಿಗುತ್ತೆ ಹಣ! ಯಾರಿಗೆ ಎಷ್ಟು ನಗದು? ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್


ಅಪ್ಪ ಒಂದು ಭಾಗದಲ್ಲಿ ಮಗ ಒಂದು ಭಾಗದಲ್ಲಿ ಪೊರಕೆ ಕಡ್ಡಿ ಕೀಳುತ್ತಿದ್ದಾಗ  ಆನೆ ದಾಳಿ ಮಾಡಿದೆ, ಪ್ರಭುಸ್ವಾಮಿ ಸ್ಥಳದಲ್ಲೇ ಅಸುನೀಗಿದ್ದಾರೆ. ಅದೃಷ್ಟವಶಾತ್ ಮಗ ಪಾರಾಗಿದ್ದಾನೆ. 
 
ಇದನ್ನೂ ಓದಿ- ಬಿಸಿಬಿಸಿ ರಾಗಿಮುದ್ದೆ-ನಾಟಿ ಕೋಳಿ ಸಾರಿನ ಘಮ ಘಮ..ಮುದ್ದೆ ತಿನ್ನುವ ಸ್ಪರ್ಧೆ..!


ಮೃತದೇಹವನ್ನು  ಮರಣೋತ್ತರ ಪರೀಕ್ಷೆಗಾಗಿ  ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ. ಮಲೆಮಹದೇಶ್ವರ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=38l6m8543Vk
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.