ಬೆಂಗಳೂರು: ರಾಜ್ಯ ಸರಕಾರವು ಮಹತ್ವಾಕಾಂಕ್ಷೆಯೊಂದಿಗೆ ರಚಿಸಿರುವ ಮಶೀನ್ ಟೂಲ್ಸ್ ವಲಯದ ವಿಷನ್ ಗ್ರೂಪಿನ ಚೊಚ್ಚಲ ಸಭೆಯು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಇಲ್ಲಿನ ಖನಿಜ ಭವನದಲ್ಲಿ ನಡೆಯಿತು. ಈ ವಲಯದ ಗಣ್ಯ ಉದ್ಯಮಿಗಳು ಭಾಗವಹಿಸಿದ್ದ ಸಭೆಯಲ್ಲಿ ದೇಶದಲ್ಲಿ ಅಗ್ರಸ್ಥಾನದಲ್ಲಿರುವ ರಾಜ್ಯದ ಮಶೀನ್ ಟೂಲ್ಸ್ ವಲಯವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಬಗ್ಗೆ ಸಲಹೆ, ಸೂಚನೆಗಳು ಮೂಡಿಬಂದವು.
ಸಭೆಯಲ್ಲಿ ಮಾತನಾಡಿದ ಸಚಿವರು, ಮಶೀನ್ ಟೂಲ್ ವಲಯವು ಜಾಗತಿಕ ಸ್ಪರ್ಧೆಯನ್ನು ಗಮನದಲ್ಲಿ ಇಟ್ಟುಕೊಂಡು ಸೂಕ್ಷ್ಮಾತಿ ಸೂಕ್ಷ್ಮ ಬಿಡಿಭಾಗಗಳನ್ನೂ ತಯಾರಿಸುವಂತಹ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕಾದ ಜರೂರಿದೆ. ಈ ಕುರಿತು ಉದ್ಯಮಿಗಳು ಸರಕಾರಕ್ಕೆ ರಚನಾತ್ಮಕ ಸಲಹೆ ನೀಡಬೇಕು. ಇದನ್ನು ಸರಕಾರವು ಗಂಭೀರವಾಗಿ ಪರಿಗಣಿಸಿ, ಮುಂದಿನ ಹೆಜ್ಜೆ ಇಡಲಿದೆ ಎಂದರು.
ಮಶೀನ್ ಟೂಲ್ಸ್ ತಯಾರಿಕೆಯಲ್ಲಿ ಪುಣೆ ಮತ್ತು ರಾಜಕೋಟ್ ಕೂಡ ಮುಂಚೂಣಿಯಲ್ಲಿವೆ. ರಾಜ್ಯದಲ್ಲಿ ಈ ವಲಯದಲ್ಲಿ ಹೂಡಿಕೆ ಆಕರ್ಷಣೆ, ಉದ್ಯೋಗ ಸೃಷ್ಟಿ ಮುಂತಾದವುಗಳ ಕಡೆ ಗಮನ ಕೊಡಬೇಕಾಗಿದೆ. ಮದ್ರಾಸ್ ಐಐಟಿ ಸಂಸ್ಥೆಯಲ್ಲಿ ಮಶೀನ್ ಟೂಲ್ ವಲಯದ ಸಂಶೋಧನಾ ಅನ್ವಯಿಕತೆಗೆ ವಿಶೇಷ ಕೇಂದ್ರವಿದೆ. ಇದಕ್ಕೆ ಸರಕಾರವು ಶೇ 80ರಷ್ಟು ಮತ್ತು ಉದ್ಯಮ ವಲಯವು ಮಿಕ್ಕ ಶೇ 20ರಷ್ಟು ವೆಚ್ಚ ಭರಿಸುತ್ತಿವೆ. ಕರ್ನಾಟಕದಲ್ಲೂ ಇಂಥದೊಂದು ಕೇಂದ್ರವನ್ನು ಸ್ಥಾಪಿಸಬೇಕು ಎಂದು ಉದ್ಯಮಿಗಳು ಸಲಹೆ ನೀಡಿದರು. ಇದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದರು.
ಮಶೀನ್ ಟೂಲ್ ವಿಭಾಗದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಆದ್ಯತೆ ಕೊಡಬೇಕಾಗಿದೆ. ಮೆಕ್ಯಾನಿಕಲ್ ಎಂಜಿನಿಯರುಗಳಿಗೆ ಉದ್ಯಮದ ನೇರ ಅನುಭವವನ್ನು ನಾವು ಒದಗಿಸಬೇಕಾಗಿದೆ. ಇದಕ್ಕಾಗಿ ಅತ್ಯುತ್ತಮ ಎಂಜಿನಿಯರಿಂಗ್ ಕಾಲೇಜುಗಳ ಜತೆ ಒಡಂಬಡಿಕೆಗೆ ನಾವು ಸಿದ್ಧರಾಗಿದ್ದೇವೆ. ಜಗತ್ತಿನ ಅತ್ಯುತ್ತಮ ಉದ್ಯಮಗಳು ನಮ್ಮಲ್ಲಿಗೆ ಬಂದು ಹೂಡಿಕೆ ಮಾಡುವಂತೆ ಆಗಬೇಕು. 2025ರ ಫೆಬ್ರವರಿಯಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಮಶೀನ್ ಟೂಲ್ಸ್ ವಲಯದ ಕಡೆಗೂ ಆದ್ಯ ಗಮನ ಕೊಡಲಾಗುವುದು ಎಂದು ಸಚಿವರು ನುಡಿದರು.
𝐊𝐞𝐲 𝐌𝐞𝐞𝐭𝐢𝐧𝐠 𝐡𝐞𝐥𝐝 𝐚𝐭 𝐁𝐞𝐧𝐠𝐚𝐥𝐮𝐫𝐮 𝐈𝐊𝐅 𝐎𝐟𝐟𝐢𝐜𝐞
Today, a significant meeting was held with Machine Tools Vision Group members at the IKF (Investment Karnataka Forum) office in Bengaluru. The meeting included extensive discussions on automation and… pic.twitter.com/eYtpKPkQ0L
— M B Patil (@MBPatil) June 11, 2024
ಸದ್ಯಕ್ಕೆ ತುಮಕೂರಿನ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಮಶೀನ್ ಟೂಲ್ಸ್ ಪಾರ್ಕ್ ಇದೆ. ಇದರ ಜೊತೆಗೆ ಇನ್ನೂ ಹಲವು ಉಪಕ್ರಮಗಳು ಆಗಬೇಕಾಗಿದೆ. ಜತೆಗೆ ನಮ್ಮ ಉದ್ಯಮಿಗಳು ತಾವು ತಯಾರಿಸುವ ಉತ್ಪನ್ನಗಳನ್ನು ಜಾಗತಿಕ ಮಟ್ಟದಲ್ಲಿ ಪ್ರದರ್ಶಿಸಿ, ಗಮನ ಸೆಳೆಯಬೇಕು. ಇದಕ್ಕೆ ಸರಕಾರ ಅಗತ್ಯ ಬೆಂಬಲ ಕೊಡಲಿದೆ. ಉದ್ಯಮಿಗಳು ಸರಕಾರ ರಚಿಸಿರುವ ವಿಷನ್ ಗ್ರೂಪ್ ಅನ್ನು ಕೇವಲ ಸಲಹಾ ಸಂಸ್ಥೆ ಎಂದು ಭಾವಿಸಬಾರದು ಎಂದು ಅವರು ಒತ್ತಿ ಹೇಳಿದರು.
ಉದ್ಯಮದ ಬೇರೆಬೇರೆ ವಲಯಗಳಲ್ಲಿ ಯಾವ ಬಗೆಯ ಕೌಶಲ್ಯ ಬೇಕು ಎನ್ನುವುದನ್ನು ಉದ್ಯಮಿಗಳು ಮುಕ್ತವಾಗಿ ಹೇಳಬೇಕು. ಈಗಿನ ಪರಿಸ್ಥಿತಿ ನೋಡಿದರೆ, ನಮ್ಮಲ್ಲಿ ಫಿನಿಶಿಂಗ್ ಸ್ಕೂಲುಗಳ ಅಗತ್ಯವಿದೆ ಎನ್ನುವುದು ಸ್ಪಷ್ಟವಾಗಿದೆ. ಉದ್ಯಮಿಗಳು ಮಶೀನ್ ಟೂಲ್ ವಲಯದ ಉತ್ಕರ್ಷಕ್ಕೆ ಅಗತ್ಯವಿರುವ ನೀಲ ನಕಾಶೆಯನ್ನು ಒದಗಿಸಬೇಕು ಎಂದು ಅವರು ಕೋರಿದರು.
ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಷನ್ ಗ್ರೂಪ್ ಉಪಾಧ್ಯಕ್ಷ ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಸದಸ್ಯರಾದ ಟಿಮ್ ಕೆನ್ ವ್ಯವಸ್ಥಾಪಕ ನಿರ್ದೇಶಕ ಸಂಜಯ್ ಕೌಲ್, ವೈಜಿ-1 ವ್ಯವಸ್ಥಾಪಕ ನಿರ್ದೇಶಕ ಸಾರಂಗ್ ವಿ ಪಾರೀಖ್, ಇಂಡಿಯನ್ ಮಶೀನ್ ಟೂಲ್ಸ್ ಮ್ಯಾನಫ್ಯಾಕ್ಚರರ್ಸ್ ಅಸೋಸಿಯೇಶನ್ ಅಧ್ಯಕ್ಷ ರಾಜೇಂದ್ರ ಎಸ್ ರಾಜಮಾನೆ, ಹಿರಿಯ ಸಲಹೆಗಾರ ಸತೀಶಕುಮಾರ್, ಕೆಐಎಡಿಬಿ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ