ಬೆಂಗಳೂರು: ಸಾಲ ಮಾಡಿಯಾದರೂ ತುಪ್ಪ ತಿನ್ನಬೇಕೆಂಬ “ವಿತ್ಥನೀತಿ”ಯನ್ನು ಸಿದ್ದರಾಮಯ್ಯನವರು ರಾಜ್ಯದ ಮೇಲೆ ಹೇರಿ ಹೋಗಿದ್ದಾರೆ ಎಂದು ಸಚಿವ ವಿ.ಸುನೀಲ್ ಕುಮಾರ್ ಕಿಡಿಕಾರಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ಸಾಲ ಎತ್ತುವಳಿಯನ್ನೇ ಬಂಡವಾಳ ಹೂಡಿಕೆ ಎಂದು ವ್ಯಾಖ್ಯಾನಿಸುವ ಅವರ ಭಂಡತನ ಅರ್ಥಶಾಸ್ತ್ರದ ಹೊಸ ವ್ಯಾಖ್ಯಾನವೇ ಸರಿ. ದಿವಾಳಿ ಹೊಂದುವುದನ್ನೇ ಪ್ರಧಾನ ಗುರಿಯಾಗಿಸಿಕೊಂಡ ಅರ್ಥವ್ಯವಸ್ಥೆಗೆ ನಿಮ್ಮ ನೀತಿ ಆದರ್ಶ’ವೆಂದು ಟೀಕಿಸಿದ್ದಾರೆ.


COMMERCIAL BREAK
SCROLL TO CONTINUE READING

‘ಕುತ್ತಿಗೆವರೆಗೆ ಮುಳುಗಿದ್ದ ಎಸ್ಕಾಂಗಳನ್ನು ಸಾಲದ ಹೊರೆಯಿಂದ ಮೇಲೆತ್ತಿದ್ದೇವೆಂದು ಬೆನ್ನು ಚಪ್ಪರಿಸಿಕೊಂಡಿದ್ದೀರಿ, ಸಂತೋಷ. ಸಮಕಾಲೀನ ರಾಜಕಾರಣದ “ಉತ್ತರಪುರುಷ” ಎಂದು ಬಿರುದಾಂಕಿತರಾದ ನಿಮ್ಮಿಂದ ಇಂಥ ಸುಳ್ಳು ಬಡಾಯಿಗಿಂತ ಹೆಚ್ಚಿನದನ್ನು ನಿರೀಕ್ಷಿಸಲು ಸಾಧ್ಯವೇ? ನೀವು ಎಸ್ಕಾಂಗಳ ಮೇಲೆ ಹೊರಿಸಿ ಹೋದ ಸಾಲದ ಗಂಟನ್ನು ಇಳಿಸಿದ್ದು ನಾವು’ ಎಂದು ಸುನೀಲ್ ಕುಮಾರ್ ಕುಟುಕಿದ್ದಾರೆ.


ಕೇಂದ್ರ ಸಚಿವ ನಿತಿನ್ ಗಡ್ಕರಿಯವರಿಗೆ ಬೆದರಿಕೆ ಕರೆ; ಸಂಪೂರ್ಣ ತನಿಖೆ: ಸಿಎಂ ಬೊಮ್ಮಾಯಿ


‘ನೀವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕೆಪಿಸಿಎಲ್‌ ಮೇಲಿನ 10,203 ಕೋಟಿ ರೂ. ಸಾಲವೂ ಸೇರಿದಂತೆ 2013 ರಿಂದ 2018ರ ಅವಧಿಯಲ್ಲಿ  33,404.20 ಕೋಟಿ ರೂ. ಸಾಲದ ಗಂಟನ್ನು ಎಸ್ಕಾಂಗಳ ಮೇಲೆ ಹೊರಿಸಿದ್ದಿರಿ. ನೀವೇ ಸ್ಟೇರಿಂಗ್‌ ಹಿಡಿದು “ಸಮನ್ವಯ” ಸಾಧಿಸಿದ ಮೈತ್ರಿ ಸರ್ಕಾರದ ಕಾಲದಲ್ಲಿ 27,178 ಕೋಟಿ ರೂ. ಸಾಲದ ಹೊರೆ ಎಸ್ಕಾಂಗಳ ಮೇಲೆ ಬಿತ್ತು. ಆದರೆ ವಾಸ್ತವ ಮರೆ ಮಾಚುವುದಕ್ಕಾಗಿ ನೀವು ಸಾಲವನ್ನು ಬಂಡವಾಳ ಹೂಡಿಕೆ ಎಂದು ವ್ಯಾಖ್ಯಾನಿಸಿದ್ದೀರಿ. ಇಷ್ಟೊಂದು ಸಾಲ ಮಾಡಿದ ಮೇಲೆ ಹೊರೆ ಇಳಿಸಿದ್ದೇನೆಂದು ಬೆನ್ನು ತಟ್ಟಿಕೊಳ್ಳುವ ನಿಮ್ಮ ಜ್ಞಾನನಿಧಿಯ ಬಗ್ಗೆ ಸಾಮಾನ್ಯ ಪ್ರಜೆಯೂ ಸರ್ವಾಂಗಗಳಿಂದಲೂ ಕನಿಕರ ವ್ಯಕ್ತಪಡಿಸಬಹುದು’ ಎಂದು ಸುನೀಲ್ ಕುಮಾರ್ ಟ್ವೀಟ್ ಮಾಡಿದ್ದಾರೆ.


ಪ್ರಿಯಾಂಕಾ ಗಾಂಧಿ ಕಾರ್ಯಕ್ರಮ ‘ನಾ ನಾಯಕಿ’ ಅಲ್ಲ, ನಾ ನಾಲಾಯಕಿ: ಅಶ್ವತ್ಥ ನಾರಾಯಣ ವ್ಯಂಗ್ಯ


ಸುನೀಲ್ ಕುಮಾರ್ ಟೀಕಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.