ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇನ್ಮುಂದೆ ರಸ್ತೆ ಗುಂಡಿ ಕಾಣಿಸಿಕೊಂಡರೆ ಇಂಜಿನಿಯರ್‌ಗೆ ದಂಡ!

ಇನ್ನು ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದು ಪ್ರತಿ ಇಂಜಿನಿಯರ್‌ಗಳ ಜವಾಬ್ದಾರಿ.

Last Updated : Aug 22, 2019, 08:30 AM IST
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇನ್ಮುಂದೆ ರಸ್ತೆ ಗುಂಡಿ ಕಾಣಿಸಿಕೊಂಡರೆ ಇಂಜಿನಿಯರ್‌ಗೆ ದಂಡ! title=

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಇಂಜಿನಿಯರ್‌ಗಳಿಗೆ ಶಾಕ್ ನೀಡಿದ್ದು, ಒಂದುವೇಳೆ ಅವೈಜ್ಞಾನಿಕವಾಗಿ ರಸ್ತೆ ಗುಂಡಿಗಳನ್ನು ಮುಚ್ಚಿದರೆ ಪ್ರತಿ ಗುಂಡಿಗೆ ಇಂಜಿನಿಯರ್‌ಗಳಿಗೆ 1 ಸಾವಿರ ರೂ. ದಂಡ ವಿಧಿಸಲು ಬಿಬಿಎಂಪಿ ನಿರ್ಧಾರ ಕೈಗೊಂಡಿದೆ.

ಈ ಕುರಿತು ಬಿಬಿಎಂಪಿ ಮೇಯರ್ ಗಂಗಾಂಬಿಕೆ ವಲಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಪ್ರತಿ ವಾರ್ಡ್ ಗೂ ಭೇಟಿ ನೀಡಿ ಪರಿಶೀಲನೆ ನಡೆಸಿ ಸಮಸ್ಯೆಗಳ ಪಟ್ಟಿ ಮಾಡಬೇಕು. ವಾರ್ಡ್ ಮಟ್ಟದಲ್ಲಿನ ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳಬೇಕು. ಪ್ರತಿ ವಾರ್ಡ್ ನಲ್ಲಿ ಪ್ರಮುಖವಾಗಿ ಕಂಡುಬರುವ ರಸ್ತೆ ಗುಂಡಿ, ಬೀದಿ ದೀಪ, ಕಸದ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ನೀಡಬೇಕು ಎಂದು ಸೂಚಿಸಿದ್ದಾರೆ.

ಇನ್ನು ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದು ಪ್ರತಿ ಇಂಜಿನಿಯರ್‌ಗಳ ಜವಾಬ್ದಾರಿಯಾಗಿದ್ದು, ವೈಜ್ಞಾನಿಕವಾಗಿ ರಸ್ತೆ ಗುಂಡಿ ಮುಚ್ಚಲು ಸೂಕ್ತ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಅವೈಜ್ಞಾನಿಕವಾಗಿ ಗುಂಡಿ ಮುಚ್ಚಿದರೆ ಸಂಬಂಧಪಟ್ಟ ಇಂಜಿನಿಯರ್‌ಗಳೇ ಪ್ರತಿ ಗುಂಡಿಗೆ 1 ಸಾವಿರ ರೂ. ದಂಡ ವಿಧಿಸಲಾಗುತ್ತದೆ ಎಂದು ಬಿಬಿಎಂಪಿ ಪ್ರಧಾನ ಎಂಜಿನಿಯರ್ ಎಂ.ಆರ್. ವೆಂಕಟೇಶ್ ಮಾಹಿತಿ ನೀಡಿದ್ದಾರೆ.

Trending News