ಚಿಕ್ಕಬಳ್ಳಾಪುರ: ಇಂಗ್ಲಿಷ್ ಮಾಸ್ಟರ್ ಖ್ಯಾತಿಯ ಗುಡಿಬಂಡೆ ಜಗನ್ನಾಥ್ ಅವರು ತೀವ್ರ ಹೃದಯಾಘಾತದಿಂದ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. ಗುಡಿಬಂಡೆ ಪಟ್ಟಣದ ಸಂತೆ ಬೀದಿಯಲ್ಲಿರುವ ಅವರ ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿದ್ದು ಇಂದು ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಇಂದು ಬೆಳಗಿನ ಜಾವ ಎಂದಿನಂತೆ ಗುಡಿಬಂಡೆ ಸಂತೆ ಬೀದಿಯ ತಮ್ಮ ಮನೆಯಲ್ಲಿ ಸ್ನಾನ ಮಾಡಿ ದೇವರ ಪೂಜೆ ಮಾಡಿ ಪೇಪರ್ ಓದುತ್ತಿದ್ದಾಗ  ತೀವ್ರ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ  ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.


ಇದನ್ನೂ ಓದಿ- ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿಷವಾದ ಜೀವ ಜಲ, ಕಲುಷಿತ ನೀರು ಸೇವಿಸಿ ಇಬ್ಬರು ಮೃತ


ಜಗನ್ನಾಥ್ ಮೇಷ್ಟ್ರು ಅಪಾರ ಸಂಖ್ಯೆಯಲ್ಲಿ ಶಿಷ್ಯ ವೃಂದವನ್ನು ಹೊಂದಿದ್ದು, ಇಂಗ್ಲಿಷ್ ಟ್ಯೂಷನ್ ಮೂಲಕವೇ ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿದ್ದರು. ಇನ್ನು ಗುಡಿಬಂಡೆ, ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಸೇರಿದಂತೆ ಹಲವು ಕಾಲೇಜುಗಳಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. 


ಇದನ್ನೂ ಓದಿ- ದೀಪಾವಳಿ‌ ಸಂಭ್ರಮ: ಮಾದಪ್ಪನ ಬೆಟ್ಟದಲ್ಲಿ ಹಾಲರವಿ ಉತ್ಸವದ ಸಡಗರ


ಗುಡಿಬಂಡೆ ಸರ್ಕಾರಿ ಪ್ರೌಢಶಾಲೆಯಲ್ಲಿ ಗುಮಾಸ್ತರಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದ ಜಗನ್ನಾಥ್ ಮೇಷ್ಟ್ರು ನಿವೃತ್ತಿ ನಂತರ ವಿವಿಧ ಕಾಲೇಜುಗಳಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.