ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯು 2021-22ನೇ ಸಾಲಿಗೆ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯು.ಪಿ.ಎಸ್.ಸಿ, ಕೆ.ಎ.ಎಸ್, ಬ್ಯಾಂಕಿಂಗ್, ಗ್ರೂಪ್-ಸಿ, ಎಸ್.ಎಸ್.ಸಿ. ಮತ್ತು ಆರ್.ಆರ್.ಬಿ. ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ತರಬೇತಿಗಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಂದ ಅರ್ಜಿಯನ್ನು ಸ್ವೀಕರಿಸಲಾಗಿದೆ.
ಇದನ್ನೂ ಓದಿ: ಕೃಷಿ ವಿ.ವಿ. ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಸಕಾರಾತ್ಮಕ ಸ್ಪಂದನೆ-ರಾಜ್ಯಪಾಲರ ಭರವಸೆ
ಅಭ್ಯರ್ಥಿಗಳ ಆಯ್ಕೆಗಾಗಿ ಅಕ್ಟೋಬರ್ 31 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆ.ಇ.ಎ) ಮೂಲಕ ಸಾಮ್ಯಾನ ಪ್ರವೇಶ ನಡೆಸಲಾಗುತ್ತಿದೆ.ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್-ಸೈಟ್ ವಿಳಾಸ keauthority-ka@nic.in ರಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್‍ಲೋಡ್ ಮಾಡಿಕೊಳ್ಳುವುದು.
ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿಗೆ ಅಥವಾ ದೂರವಾಣಿ ಸಂಖ್ಯೆ : 0836-2447201 ಸಂಪರ್ಕಿಸಬಹುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.