ಧಾರವಾಡ: ಬೆಳಗಾವಿ ವಿಭಾಗ ಮಟ್ಟದ 7 ಜಿಲ್ಲೆಗಳ ಉದ್ದಿಮೆಗಳ ಅಭಿವೃದ್ದಿಗೆ ಉದ್ಯಮಿಯಾಗು ಹಾಗೂ ಉದ್ಯೋಗ ನೀಡು ಕಾರ್ಯಗಾರವನ್ನು ಫೆಬ್ರವರಿ 19 ರಂದು ಹುಬ್ಬಳ್ಳಿಯ ಕೆ.ಎಲ್.ಇ. ಐಟಿ, ಇಂಜನೀಯರಿಂಗ್ ಕಾಲೇಜು, ವಿದ್ಯಾನಗರದ ಬಿ.ವ್ಹಿ.ಬಿ ಇಂಜನೀಯರಿಂಗ್ ಕಾಲೇಜು, ಎಸ್.ಡಿ.ಎಂ ಇಂಜನೀಯರಿಂಗ್ ಕಾಲೇಜುಗಳಲ್ಲಿ ಬೆಳಿಗ್ಗೆ 9-30 ರಿಂದ ಮಧ್ಯಾಹ್ನ 3-30 ರವರೆಗೆ ವರ್ಚುಯಲ್ ಕಾರ್ಯಗಾರವನ್ನು ಏರ್ಪಡಿಸಲಾಗಿರುತ್ತದೆ.
ಇದನ್ನೂ ಓದಿ: Zameer Ahmed : ಕೆಪಿಸಿಸಿಯಿಂದ ಶಾಸಕ ಜಮೀರ್ ಅಹಮದ್ ಗೆ ಬಿಗ್ ಶಾಕ್!
ಕಾರ್ಯಗಾರದಲ್ಲಿ ಕೈಗಾರಿಕೆ ಸ್ಥಾಪನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಯೋಜನೆಗಳು ಮೂಲಭೂತ ಸೌಕರ್ಯಗಳು ಹಾಗೂ ಹಣಕಾಸು ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುವುದು. ಯಶಸ್ವಿ ಯುವ ಉದ್ದಿಮೆದಾರರಿಂದ ಅವರ ಯಶೋಗಾಥೆ ಮಾಹಿತಿ ನೀಡುವ ಒಂದು ಮಹತ್ವಾಕಾಂಕ್ಷಿ ಕಾರ್ಯಕ್ರಮ ಇದಾಗಿದೆ.
ಕಾರ್ಯಕ್ರಮದಲ್ಲಿ ಭಾಗವಹಿಸುವ ಭಾವಿ ಉದ್ದಿಮೆದಾರರಿಗೆ ವೆಬ್‍ಸೈಟ್ https://ebiz.karnataka.gov.in/eBiz ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ.
ಇದನ್ನೂ ಓದಿ: Karnataka Hijab Row: ಹಿಜಾಬ್ ವಿವಾದದ ವಿಚಾರಣೆ ಮುಂದೂಡಿದ ಹೈಕೋರ್ಟ್
ಆಸಕ್ತ ಭಾವಿ ಉದ್ದಿಮೆದಾರರು ನೋಂದಣಿ ಮಾಡಿಕೊಂಡು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಟಿ.ಸಿದ್ದಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.