Karnataka Cabinet : ದತ್ತ ಪೀಠದಲ್ಲಿ ಮುಸ್ಲಿಂ- ಹಿಂದೂ ಪೂಜೆಗೆ ಸಮಾನ ಅವಕಾಶ : ಸಂಪುಟ ಅನುಮೋದನೆ

ದತ್ತ ಪೀಠದಲ್ಲಿ ಪೂಜಾ ಕೈಂಕರ್ಯಗಳನ್ನು ನೆರವೇರಿಸುವ ಸಂಬಂಧ ಕಾನೂನು ಸಚಿವ ಮಾಧುಸ್ವಾಮಿ ನೇತೃತ್ವದಲ್ಲಿ ಸಚಿವ ಸಂಪುಟ ಉಪಸಮಿತಿ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

Written by - RACHAPPA SUTTUR | Last Updated : Jul 1, 2022, 07:19 PM IST
  • ದತ್ತ ಪೀಠದಲ್ಲಿ ಪೂಜಾ ಕೈಂಕರ್ಯ
  • ಕಾನೂನು ಸಚಿವ ಮಾಧುಸ್ವಾಮಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ
  • ಮುಸ್ಲಿಂ ಸಮುದಾಯದ ಮುಜಾವರ್ ನೇಮಕ
Karnataka Cabinet : ದತ್ತ ಪೀಠದಲ್ಲಿ ಮುಸ್ಲಿಂ- ಹಿಂದೂ ಪೂಜೆಗೆ ಸಮಾನ ಅವಕಾಶ : ಸಂಪುಟ ಅನುಮೋದನೆ title=

ಬೆಂಗಳೂರು : ದತ್ತ ಪೀಠದಲ್ಲಿ ಪೂಜಾ ಕೈಂಕರ್ಯಗಳನ್ನು ನೆರವೇರಿಸುವ ಸಂಬಂಧ ಕಾನೂನು ಸಚಿವ ಮಾಧುಸ್ವಾಮಿ ನೇತೃತ್ವದಲ್ಲಿ ಸಚಿವ ಸಂಪುಟ ಉಪಸಮಿತಿ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಸಚಿವ ಸಂಪುಟ ಉಪಸಮಿತಿ ವರದಿಯಲ್ಲಿನ ಶಿಫಾರಸುಗಳನ್ನು ಹೈ ಕೋರ್ಟ್ ಗೆ ಸಲ್ಲಿಸಲು ತೀರ್ಮಾನಿಸಲಾಗಿದೆ. ಬಾಬಾಬುಡನ್ ಗಿರಿ ಇನಾಂ ದತ್ತಾತ್ರೇಯ ಪೀಠದಲ್ಲಿ ಹಿಂದೂ ಸಂಪ್ರದಾಯದ ಪೂಜಾ ಕೈಂಕರ್ಯಗಳನ್ನು ನೆರವೇರಿಸಲು ಮುಸ್ಲಿಂ ಸಮುದಾಯದ ಮುಜಾವರ್ ನೇಮಕ ಮಾಡಿ ರಾಜ್ಯ ಸರ್ಕಾರ 2018 ರ ಮಾ.19ರಂದು ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಶ್ರೀ ಗುರು ದತ್ತಾತ್ರೇಯ ದೇವಸ್ಥಾನ ಸಂವರ್ಧನಾ ಸಮಿತಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಸರ್ಕಾರದ ಆದೇಶವನ್ನು ರದ್ದುಪಡಿಸಿ 2021ರ ಫೆ 28ರಂದು ಆದೇಶಿಸಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ, ನ್ಯಾ. ನಾಗಮೋಹನ್‌ದಾಸ್ ಸಮಿತಿಯ ವರದಿಯನ್ನು ಪರಿಗಣನೆಗೆ ತೆಗೆದುಕೊಳ್ಳದೇ ಪ್ರಕರಣವನ್ನು ಕಾನೂನು ರೀತಿ ಹೊಸದಾಗಿ ಪರಿಶೀಲಿಸಬೇಕು ಎಂದು ಸರ್ಕಾರಕ್ಕೆ ಸೂಚನೆ ನೀಡಿತ್ತು. ಏಕಸದಸ್ಯಪೀಠದ ಆದೇಶ ಪ್ರಶ್ನಿಸಿ ಷಾ ಖಾದ್ರಿ ಮೇಲ್ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ : ಸಾವಿರಾರು ದೂರು ಬಂದ್ರು ತಲೆಕೆಡಿಸಿಕೊಳ್ಳದ ಬಿಎಂಟಿಎಫ್‌: ಸಾರ್ವಜನಿಕರಿಂದ ಅಸಮಾಧಾನ

ಏಕಸದಸ್ಯಪೀಠದ ಆದೇಶ ಪಾಲನೆ ಮಾಡಲು ರಾಜ್ಯ ಸರ್ಕಾರ ಮೂವರು ಸಚಿವರನ್ನೊಳಗೊಂಡ ಸಚಿವ ಸಂಪುಟದ ಉಪ ಸಮಿತಿ ರಚಿಸಿದೆ. ಈ ಉಪ ಸಮಿತಿಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರ, ಗೃಹ ಹಾಗೂ ಮುಜರಾಯಿ ಇಲಾಖೆ ಸಚಿವರಿದ್ದರು. ಈ ಸಮಿತಿ ಈಗಾಗಲೇ ಸ್ಥಳಕ್ಕೆ ಭೇಟಿ ಕೊಟ್ಟು ಎರಡೂ ಕಡೆಯ ಸಂಬಂಧಪಟ್ಟವರೊಂದಿಗೆ ಸಮಾಲೋಚನೆ ನಡೆಸಿದೆ. ಎರಡೂ ಪಕ್ಷಗಾರರ ನಡುವಿನ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ 6 ವಾರಗಳಲ್ಲಿ ತೀರ್ಮಾನ ತೆಗೆದುಕೊಳ್ಳುವುದಾಗಿ ಕೋರ್ಟ್ ಗೆ ತಿಳಿಸಲಾಗಿತ್ತು. ಈ ಹಿನ್ನೆಲೆ ಪ್ರಕರಣದ ವಿಚಾರಣೆ 6 ವಾರ ಮುಂದೂಡಲಾಗಿತ್ತು.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ದತ್ತಪೀಠ ಸಂಬಂಧ ಪೂಜಾಕೈಂಕರ್ಯ ಸಂಬಂಧ ಸಂಪುಟ ಉಪಸಮಿತಿಯ ವರದಿ ಶಿಫಾರಸಿಗೆ ಅನುಮೋದನೆ ನೀಡಲಾಗಿದೆ.

ಇದನ್ನೂ ಓದಿ : Heavy rain Fall : ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರಿ‌ ಮಳೆ :ಹವಾಮಾನ ಇಲಾಖೆ 

 ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News