ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್‍ಗಳ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Kanakadasa Jayanthi 2023: ದಾಸಶ್ರೇಷ್ಠ ಕನಕದಾಸರು ಸಮಾಜ ಸುಧಾರಕರಾಗಿದ್ದರು. ಅವರ ಸಾಹಿತ್ಯದ ಮೂಲಕ ಮನುಷ್ಯತ್ವವನ್ನು ಸಾರಿದರು. ಇಡೀ ಜಾತ್ಯಾತೀತವಾದ, ಮೇಲು-ಕೀಳು ಭೇದಭಾವವಿಲ್ಲದ ಸಮಸಮಾಜ ನಿರ್ಮಿಸಲು ಶ್ರಮಿಸಿದ ವಿಶ್ವಮಾನವ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Written by - Prashobh Devanahalli | Edited by - Puttaraj K Alur | Last Updated : Nov 30, 2023, 01:01 PM IST
  • ಬೆಂಗಳೂರಿನ 225 ವಾರ್ಡ್‍ಗಳಲ್ಲಿಯೂ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲಾಗುವುದು
  • ಇಂದಿರಾ ಕ್ಯಾಂಟೀನ್‍ಗೆ ಸ್ಥಳದ ಅಭಾವವಿರುವ ಕಡೆ ಮೊಬೈಲ್ ಕ್ಯಾಂಟೀನ್‍ಗಳ ಸ್ಥಾಪನೆ
  • ದಾಸಶ್ರೇಷ್ಠ ಕನಕದಾಸರ ಜಯಂತಿಯಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯ
ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್‍ಗಳ ಸ್ಥಾಪನೆ: ಸಿಎಂ ಸಿದ್ದರಾಮಯ್ಯ title=
ಕನಕದಾಸ ಜಯಂತಿ 2023

ಬೆಂಗಳೂರು: ಸಾರ್ವಜನಿಕರ ಅನುಕೂಲಕ್ಕಾಗಿ ಈ ವರ್ಷ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್‍ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗುರುವಾರ ಶಾಸಕರ ಭವನ ಆವರಣದಲ್ಲಿ ಸಂತ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು.

ಇಂದಿರಾ ಕ್ಯಾಂಟೀನ್ ಸಮರ್ಪಕವಾಗಿ ನಡೆಯುತ್ತಿಲ್ಲವೆಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯನವರು, ‘ಬೆಂಗಳೂರಿನ 225 ವಾರ್ಡ್‍ಗಳಲ್ಲಿಯೂ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಇದಲ್ಲದೇ ಅಗತ್ಯವಿರುವೆಡೆ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಇಂದಿರಾ ಕ್ಯಾಂಟೀನ್‍ಗೆ ಸ್ಥಳದ ಅಭಾವವಿರುವ ಕಡೆ ಮೊಬೈಲ್ ಕ್ಯಾಂಟೀನ್‍ಗಳನ್ನು ಸ್ಥಾಪಿಸಲಾಗುವುದು ಎಂದರು.

ಇದನ್ನೂ ಓದಿ: ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದವಾಗಿದೆ: ಸಿಎಂ ಸಿದ್ದರಾಮಯ್ಯ

ಸಮಸಮಾಜದ ಕನಸು ಕಂಡಿದ್ದ ಕನಕದಾಸರು

ದಾಸಶ್ರೇಷ್ಠ ಕನಕದಾಸರು ಸಮಾಜ ಸುಧಾರಕರಾಗಿದ್ದರು. ಅವರ ಸಾಹಿತ್ಯದ ಮೂಲಕ ಮನುಷ್ಯತ್ವವನ್ನು ಸಾರಿದರು. ಇಡೀ ಜಾತ್ಯಾತೀತವಾದ, ಮೇಲು-ಕೀಳು ಭೇದಭಾವವಿಲ್ಲದ ಸಮಸಮಾಜ ನಿರ್ಮಿಸಲು ಶ್ರಮಿಸಿದ ವಿಶ್ವಮಾನವ. ರಾಮಧಾನ್ಯ ಚರಿತೆ, ಮೋಹನತರಂಗಿಣಿ ಸೇರಿದಂತೆ ಹಲವು ಕೃತಿಗಳನ್ನು ರಚಿಸಿದವರು. ಸಮಾಜದ ತಾರತಮ್ಯ ಹೋಗಲಾಡಿಸಲು ಹೋರಾಡಿದ ದಾಸಶ್ರೇಷ್ಠರ ದಿನವನ್ನು ಸರ್ಕಾರ ಇಂದು ಆಚರಿಸುತ್ತಿದೆ ಎಂದು ಹೇಳಿದರು.

ಕನಕದಾಸರು ತಮ್ಮ ಸಾಹಿತ್ಯದ ಮೂಲಕ ತಮ್ಮ ಆದರ್ಶಗಳನ್ನು ಜನರಿಗೆ ತಿಳಿಹೇಳಿ ಜಾಗೃತಿ ಮೂಡಿಸಿದ್ದರು. ಜನರಿಗೆ ಅರ್ಥವಾಗುವ ಸರಳ ಭಾಷೆಯಲ್ಲಿ ತಮ್ಮ ದಾಸ ಸಾಹಿತ್ಯವನ್ನು ರಚಿಸಿದರು ಎಂದ ಸಿಎಂ, ಇದೇ ಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ ಕನಕದಾಸ ಜಯಂತಿಯ ಶುಭಾಶಯಗಳನ್ನು ತಿಳಿಸಿದರು.

ಇದನ್ನೂ ಓದಿ: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಾಧನೆ ನಿರ್ಣಾಯಕ ಪಾತ್ರ ವಹಿಸಲಿದೆ: ಸಿಎಂ ಸಿದ್ದರಾಮಯ್ಯ 

ಶಾಸಕ ಬಿ.ಆರ್.ಪಾಟೀಲ್ ಅವರನ್ನು ಭೇಟಿಯಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಿ.ಆರ್.ಪಾಟೀಲ್ ಅವರೊಂದಿಗೆ ಚರ್ಚಿಸಲಾಗಿತ್ತು. ಅವರು ಅಧಿವೇಶನಕ್ಕೆ ಆಗಮಿಸಲು ಮನವೊಲಿಸಿರುವುದಾಗಿ ತಿಳಿಸಿದರು. ನಿಮಾನ್ಸ್ ನಲ್ಲಿ ರೋಗಿಗಳಿಗೆ ಸರಿಯಾದ ಚಿಕಿತ್ಸಾ ವ್ಯವಸ್ಥೆಯಿಲ್ಲದೇ ರೋಗಿಯೊಬ್ಬರ ಸಾವು ಸಂಭವಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಈ ಬಗ್ಗೆ ನಿಮಾನ್ಸ್ ನಿರ್ದೇಶಕರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://youtu.be/--phA9ji8NM

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News