"ಕಾಲೇಜುಗಳಲ್ಲಿ ಕೂಡಾ ಮಂಗಳೂರು ಜೈಲಿನಂತೆ ಹಿಂದೂ ಮುಸ್ಲಿಮರ ನಡುವೆ ಗೋಡೆಯನ್ನು ಕಟ್ಟಿದ್ದೀರಿ"

ಮಂಗಳೂರಿನಲ್ಲಿ ಜೈಲು ಈಗಾಗಲೇ ಹಿಂದೂ ಜೈಲು, ಮುಸ್ಲಿಮ್‌ ಜೈಲು ಎಂದು ಇಬ್ಭಾಗ ಮಾಡಲಾಗಿದೆ.ಅದರಂತೆಯೇ ಈಗ ನಮ್ಮ ಕಾಲೇಜುಗಳನ್ನು ಮಾಡಲಿ ಜನಪ್ರತಿನಿಧಿಗಳು ಹೊರಟಿದ್ದಾರೆ. ಆ ಮೂಲಕ ಈಗ ಶಾಲಾ ಕಾಲೇಜಿನ ತರಗತಿಗಳನ್ನು ಸಹಿತ ಬೇರೆ ಬೇರೆ ಮಾಡುವಂತಾಗಿದೆ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ ಹೇಳಿದ್ದಾರೆ.

Written by - Zee Kannada News Desk | Last Updated : Feb 5, 2022, 10:46 PM IST
  • ಮಂಗಳೂರಿನಲ್ಲಿ ಜೈಲು ಈಗಾಗಲೇ ಹಿಂದೂ ಜೈಲು, ಮುಸ್ಲಿಮ್‌ ಜೈಲು ಎಂದು ಇಬ್ಭಾಗ ಮಾಡಲಾಗಿದೆ.ಅದರಂತೆಯೇ ಈಗ ನಮ್ಮ ಕಾಲೇಜುಗಳನ್ನು ಮಾಡಲಿ ಜನಪ್ರತಿನಿಧಿಗಳು ಹೊರಟಿದ್ದಾರೆ. ಆ ಮೂಲಕ ಈಗ ಶಾಲಾ ಕಾಲೇಜಿನ ತರಗತಿಗಳನ್ನು ಸಹಿತ ಬೇರೆ ಬೇರೆ ಮಾಡುವಂತಾಗಿದೆ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ ಹೇಳಿದ್ದಾರೆ.
"ಕಾಲೇಜುಗಳಲ್ಲಿ ಕೂಡಾ ಮಂಗಳೂರು ಜೈಲಿನಂತೆ ಹಿಂದೂ ಮುಸ್ಲಿಮರ ನಡುವೆ ಗೋಡೆಯನ್ನು ಕಟ್ಟಿದ್ದೀರಿ" title=

ಮಂಗಳೂರು: ಮಂಗಳೂರಿನಲ್ಲಿ ಜೈಲು ಈಗಾಗಲೇ ಹಿಂದೂ ಜೈಲು, ಮುಸ್ಲಿಮ್‌ ಜೈಲು ಎಂದು ಇಬ್ಭಾಗ ಮಾಡಲಾಗಿದೆ.ಅದರಂತೆಯೇ ಈಗ ನಮ್ಮ ಕಾಲೇಜುಗಳನ್ನು ಮಾಡಲಿ ಜನಪ್ರತಿನಿಧಿಗಳು ಹೊರಟಿದ್ದಾರೆ. ಆ ಮೂಲಕ ಈಗ ಶಾಲಾ ಕಾಲೇಜಿನ ತರಗತಿಗಳನ್ನು ಸಹಿತ ಬೇರೆ ಬೇರೆ ಮಾಡುವಂತಾಗಿದೆ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ ಹೇಳಿದ್ದಾರೆ.

ಇದನ್ನೂ ಓದಿ: ಹಿಜಾಬ್ ಹೆಸರಿನಲ್ಲಿ ಭಾರತದ ಹೆಣ್ಣುಮಕ್ಕಳ ಭವಿಷ್ಯವನ್ನು ಕಸಿಯುತ್ತಿದ್ದೇವೆ: ರಾಹುಲ್ ಗಾಂಧಿ

ಹಿಜಾಬ್‌ ಧರಿಸಿದ ವಿದ್ಯಾರ್ಥಿನಿಯರ ಪ್ರವೇಶ ನಿರಾಕರಿಸಿದ ಪ್ರಾಂಶುಪಾಲರ ದುರ್ವರ್ತನೆಯ ವಿರುದ್ಧ ನಗರದ ಕ್ಲಾಕ್‌ ಟವರ್‌ ಬಳಿ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ ನೇತ್ರತ್ವದಲ್ಲಿ ಜರುಗಿದ ಪ್ರತಿಭಟನಾ ಪ್ರದರ್ಶನವನ್ನು ಉದ್ದೇಶಿಸಿ ಮಾತನಾಡಿದ ಅವರು "ನೀವು ಈ ವಿವಾದವನ್ನು ಸೃಷ್ಟಿ ಮಾಡಿ, ಕಾಲೇಜುಗಳಲ್ಲಿ ಕೂಡಾ ಮಂಗಳೂರು ಜೈಲಿನಂತೆ ಹಿಂದೂ ಮುಸ್ಲಿಮರ ನಡುವೆ ಗೋಡೆಯನ್ನು ಕಟ್ಟಿದ್ದೀರಿ. ಚುನಾವಣೆಯಲ್ಲಿ ಗೆಲುವ ತಂತ್ರ ನಡೆಸಿದ್ದೀರಿ," ಎಂದು ಹೇಳಿದರು.

"ನಿಜವಾಗಿ ಈ ವಿಚಾರವೂ ನಾವು ಗಂಭೀರವಾಗಿ ಮಾತನಾಡಬೇಕಾದಂತಹ ವಿಚಾರ ಆಗಬಾರದಿತ್ತು. ಈ ಸಣ್ಣ ವಿಚಾರವನ್ನು ಕಾನೂನು, ನ್ಯಾಯಾಲಯ, ಸಂವಿಧಾನ ಎಂದು ಜಠಿಲವಾದಂತಹ ಸಮಸ್ಯೆಯನ್ನಾಗಿಸಲಾಗಿದೆ.ಅದು ಕೂಡಾ ಆಳುವ ಶಕ್ತಿಗಳೇ ವ್ಯವಸ್ಥಿತವಾದ ಪಿತೂರಿಯನ್ನು ಮಾಡುವಾಗ ನಾವು ಅನಿವಾರ್ಯವಾಗಿ ಪ್ರತಿಕ್ರಿಯೆ ನೀಡುತ್ತಿದ್ದೇವೆ. ವಿದ್ಯಾರ್ಥಿಗಳ ನಡುವೆ ಈ ಕೋಮು ವಿಚಾರ ಭಿತ್ತಿದ ನಳಿನ್‌ ಕುಮಾರ್‌, ರಘುಪತಿ ಭಟ್ಟರು, ಸುನಿಲ್‌ ಕುಮಾರ್‌ ಅವರಿಗೆ ನಾಚಿಕೆಯಾಗಬೇಕು. ನೀವು ಜನಪ್ರತಿನಿಧಿಯಾಗಲು ನಾಲಾಯಕ್ಕು. ಸಾಮಾನ್ಯ ನಾಗರಿಕರಿಗೆ ಇರುವ ಪ್ರಜ್ಞೆ ಈ ಸಂಸದರು, ಶಾಸಕರುಗಳಿಗೆ ಇಲ್ಲ ಎಂಬುವುದು ಖೇಧಕರ ವಿಚಾರ," "ಭಾರತದ ಇತಿಹಾಸದಲ್ಲಿ ಜನಪ್ರಿಯ ಪ್ರಧಾನಿಯಾಗಿ ದೇಶ ಆಳಿದ ಇಂಧಿರಾಗಾಂಧಿಯವರು ತಲೆಯ ಮೇಲೆ ವಸ್ತ್ರ ಹಾಕಿಕೊಂಡು ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದರು. ಇದನ್ನು ನೀವು ನೆನಪು ಮಾಡಿಕೊಳ್ಳಿ. ನಿಮ್ಮ ನಾಯಕರು ಅವರನ್ನು ದುರ್ಗೆ ಎಂದು ಕರೆದಿದ್ದರು. ಅವರು ತಲೆಯ ಮೇಲೆ ವಸ್ತ್ರ ಹಾಕಿದ್ದಕ್ಕೆ ಅವರನ್ನು ನೀವು ಪಾಕಿಸ್ತಾನಕ್ಕೆ ಕಳುಹಿಸಿದಿರಾ?," ಎಂದು ಪ್ರಶ್ನಿಸಿದರು.

"ಪ್ರಸ್ತುತ ಜಗತ್ತಿನ ಮುಂದೆ ಭಾರತದ ಮಾನ ಹರಾಜು ಆಗುತ್ತಿದೆ. ವಿದೇಶದ ಮಾಧ್ಯಮಗಳಲ್ಲಿ ಉಡುಪಿ, ಕುಂದಾಪುರದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳು ಶಿಕ್ಷಣ ಕೊಡಿ ಎಂದು ಅಂಗಲಾಚುವ ಸುದ್ದಿ ಪ್ರಸಾರವಾಗುತ್ತಿದೆ. ಹಾಗಿರುವಾಗ ಭಾರತದ ಘನತೆ ಏನಾಗಬೇಕು,"ಬಿಜೆಪಿ ಮುಖಂಡರುಗಳು ತಮ್ಮದೇ ಆದ ಖಾಸಗಿ ಶಾಲೆಗಳನ್ನು ನಡೆಸುತ್ತಿದ್ದಾರೆ. ಅಲ್ಲಿ ಈ ಹಿಜಾಬ್‌ ಪ್ರಶ್ನೆಗಳು ಬರುವುದಿಲ್ಲ. ದೊಡ್ಡ ದೊಡ್ಡ ಕಾಲೇಜು, ಸಂಸ್ಥೆಗಳಲ್ಲಿ ಈ ಹಿಜಾಬ್‌ ಪ್ರಶ್ನೆ ಬರುವುದಿಲ್ಲ. ಶ್ರೀಮಂತರ ಮಕ್ಕಳು ಹಿಜಾಬ್‌ ಧರಿಸಿದರೆ ಅದು ದೊಡ್ಡ ಸಮಸ್ಯೆ ಆಗುವುದಿಲ್ಲ. ಆದರೆ ಬಡ ಮಕ್ಕಳು ಕಲಿಯುವ ಕಾಲೇಜುಗಳಲ್ಲಿ ಮಾತ್ರ ಈ ಸಮಸ್ಯೆ ಯಾಕೆ ಬರುತ್ತದೆ ಎಂಬುವುದನ್ನು ನಾವು ಅರ್ಥ ಮಾಡಿಕೊಳ್ಳಬೇಕು," ಎಂದರು.

ಇದನ್ನೂ ಓದಿ: ಸಿಎಂ ಬೊಮ್ಮಾಯಿ ಮೊದಲ ಬಜೆಟ್: ಆರ್ಥಿಕ ಮುಗ್ಗಟ್ಟಿನ ಮದ್ಯೆ ಆಯವ್ಯಯ! ಯಾವ ಯೋಜನೆಗಳಿಗೆ ಆದ್ಯತೆ?

ಇದೆ ವೇಳೆ ಹಿರಿಯ ದಲಿತ ಮುಖಂಡರಾದ ಎಂ ದೇವದಾಸ್‌ ರವರು ಮಾತನಾಡಿ, "ಎಲ್ಲ ಧರ್ಮಗಳಿಗೂ ಅದರದ್ದೇ ಆದ ಪದ್ಧತಿ ಇದೆ.ಇದು ಹಿಂದಿನಿಂದಲೂ ಬಂದ ಒಂದು ಪದ್ಧತಿ.ಈಗ ಮುಸ್ಲಿಂ ಹೆಣ್ಣು ಮಕ್ಕಳು ಹೆಚ್ಚಾಗಿ ಶಿಕ್ಷಣವನ್ನು ಪಡೆಯುತ್ತಿದ್ಧಾರೆ.ಇದನ್ನು ಸಹಿಸಲಾಗದೆ ಹೀಗೆ ವಿವಾದ ಸೃಷ್ಟಿ ಮಾಡಲಾಗುತ್ತಿದೆ. ಬುದ್ಧಿವಂತರ ಜಿಲ್ಲೆ ಈಗ ಬುದ್ಧಿವಂತರ ಹುಚ್ಚರ ಸಂತೆಯಾಗುತ್ತಿದೆ. ಸರ್ಕಾರ ಧರ್ಮ ರಾಜಕಾರಣ ಮಾಡುತ್ತಿದೆ," ಎಂದು ಹೇಳಿದರು.

ಈ ಪ್ರತಿಭಟನೆಯಲ್ಲಿ ಎಡಪಕ್ಷಗಳು, ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ಭಾಗವಹಿಸಿದ್ದವು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News