ಬೆಂಗಳೂರು: - ಅಸಮಾನತೆಯನ್ನು ಹೋಗಲಾಡಿಸಿ, ಸಮಸಮಾಜ ನಿರ್ಮಿಸಲು ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು. ಶಿಕ್ಷಣದ ಜೊತೆಗೆ ವಿದ್ಯಾವಂತರು ಮಾನವೀಯ ಗುಣವನ್ನು ರೂಢಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಅವರು ಡಾII ಬಿ.ಆರ್. ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯದ ನೂತನ ಒಳಾಂಗಣ ಕ್ರೀಡಾ ಸಂಕೀರ್ಣ ಹಾಗೂ ಮೊದಲನೆ ವರ್ಷದ ಬಿ.ಇ ತರಗತಿಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.


ಅವಕಾಶ ವಂಚಿತರು ಮುಖ್ಯವಾಹಿನಿಗೆ ಬರಲು ಗುಣಮಟ್ಟದ ಶಿಕ್ಷಣ ಅತ್ಯಗತ್ಯ. ಹಿಂದೆ ನಮ್ಮ ಸಮಾಜದಲ್ಲಿ, ಶೋಷಿತ ವರ್ಗದ ಜನರು ಶಿಕ್ಷಣದಿಂದ ವಂಚಿತರಾಗಿದ್ದು, ಅಂಬೇಡ್ಕರ್ ಅವರ ಪರಿಶ್ರಮದಿಂದ ಅವರಿಗೆ ಉಚಿತ ಶಿಕ್ಷಣ ಸೌಲಭ್ಯ ನೀಡಲಾಗುತ್ತಿತ್ತು. ಶೋಷಿತವರ್ಗದವರಿಗೆ ನ್ಯಾಯ ಒದಗಿಸಿ ಸಮಸಮಾಜ ನಿರ್ಮಿಸಬೇಕೆಂಬ ಗುರಿಯೊಂದಿಗೆ ಅಂಬೇಡ್ಕರ್ ರವರು ಹೋರಾಡಿದರು.


ಬಾಬಾಸಾಹೇಬ್ ಅಂಬೇಡ್ಕರ್ ಭಾರತ ಕಂಡ ಮಹಾನ್ ಮೇಧಾವಿ. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಆಶಯ ಹಾಗೂ ಜನರಿಗೆ ನೀಡುವ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಸಂವಿಧಾನ ಪೀಠಿಕೆಯನ್ನು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಓದಬೇಕೆಂದು ಸರ್ಕಾರ ತಿಳಿಸಿದೆ.


ಜಾತಿವ್ಯವಸ್ಥೆಯಿಂದ ಸಮಾಜದಲ್ಲಿ ವೈರುಧ್ಯತೆ, ಅಸಮಾನತೆಯಿದೆ. ಬಡವರು, ದೀನದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರಿಗೆ ಆರ್ಥಿಕ ಹಾಗೂ ಸಾಮಾಜಿಕ ಸಮಾನತೆ ಸಿಕ್ಕಾಗ ಮಾತ್ರ ಜಾತಿ ವ್ಯವಸ್ಥೆ ನಿರ್ಮೂಲನೆ ಮಾಡಲು ಸಾಧ್ಯ. ಬುದ್ಧ, ಬಸವಾದಿ ಶರಣರು, ಮಹಾತ್ಮ ಗಾಂಧೀಜಿಯವರ ಸಮ ಸಮಾಜದ ಕನಸು ಈಡೇರಬೇಕಿದೆ. ಅಸಮಾನತೆಯ ನಿರ್ಮೂಲನೆಗಾಗಿ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು.


ಇದನ್ನೂ ಓದಿ: ಬ್ರ್ಯಾಂಡ್‌ ಬೆಂಗಳೂರು ಬೇಡ, ಸುರಕ್ಷಿತವಾದ ರೆಗ್ಯುಲರ್‌ ಬೆಂಗಳೂರು ನೀಡಿದರೆ ಸಾಕು: ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಹೇಳಿಕೆ 


ವೈಚಾರಿಕ ಶಿಕ್ಷಣದಿಂದ ಅಸಮಾನತೆ ಹೋಗಲಾಡಿಸಬಹುದು. ವಿದ್ಯಾವಂತರು ಮಾನವೀಯತೆಯ ಗುಣವನ್ನು ರೂಢಿಸಿಕೊಳ್ಳಬೇಕು. ಮನುಷ್ಯ ಮನುಷ್ಯನನ್ನು ದ್ವೇಷಿಸಬಾರದು. ಇದಕ್ಕೆ ಪ್ರಚೋದನೆ ನೀಡುವಂತಹವರು ಸಂವಿಧಾನವನ್ನು ಬದಲಾಯಿಸಲು ಹೊರಟಿದ್ದಾರೆ. ಅಂತಹವರಿಂದ ನಮ್ಮ ಸಂವಿಧಾನವನ್ನು ರಕ್ಷಿಸಿಕೊಳ್ಳಬೇಕು.


ಅಂಬೇಡ್ಕರ್ ಅವರ ತತ್ವಾದರ್ಶಗಳ ಹಾದಿಯಲ್ಲಿ ನಡೆದು ಜಯಪ್ರಕಾಶ್ ನಾರಾಯಣ ಅವರು 1980 ರಲ್ಲಿ ಡಾII ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯವನ್ನು ಪ್ರಾರಂಭಿಸಿದರು. ಇಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಡಾ.ಅಂಬೇಡ್ಕರ್ ರವರ ಮೂಲಮಂತ್ರವಾಗಿದ್ದ ಶಿಕ್ಷಣ, ಸಂಘಟನೆ, ಹೋರಾಟಗಳ ಆದರ್ಶಗಳನ್ನು ಪಾಲಿಸಬೇಕಾದುದ್ದು ವಿದ್ಯಾರ್ಥಿಗಳ ಕರ್ತವ್ಯವಾಗಿದ್ದು, ಸಮಾಜದ ಬದಲಾವಣೆಗೆ ಶ್ರಮಿಸಬೇಕು.


ಪ್ರತಿ ವರ್ಷ ಇಂಜಿನಿಯರಿಂಗ್ ಪದವಿ ಪಡೆಯುವ ವಿದ್ಯಾರ್ಥಿಗಳಲ್ಲಿ ಕೇವಲ ಶೇ.15 ರಷ್ಟು ವಿದ್ಯಾರ್ಥಿಗಳಿಗೆ ಉದ್ಯೋಗ ದೊರೆಯುತ್ತಿದೆ. ಕೈಗಾರಿಕೆಗಳಲ್ಲಿ ಹಾಗೂ ಆಧುನಿಕ ತಾಂತ್ರಿಕ ಕ್ಷೇತ್ರದಲ್ಲಿ ಬೇಡಿಕೆಯಿರುವ ವಿಷಯಗಳಿಗೆ ಮಹತ್ವ ನೀಡಬೇಕು. ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದ್ದು, ಕೌಶಲ್ಯಾಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ. ಕೈಗಾರಿಕೆಗಳ ಬೇಡಿಕೆಗೆ ತಕ್ಕಂತೆ ಕೌಶಲ್ಯಾಭಿವೃದ್ಧಿಯ ತರಬೇತಿ ನೀಡಿದರೆ, ಉದ್ಯೋಗ ಪಡೆಯಲು ಅನುಕೂಲವಾಗುತ್ತದೆ ಎಂದು ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.