ಕಾನೂನು ಪಾಲನೆ ಮಾಡದಿದ್ದರೆ ಶಿಕ್ಷೆ ಕಟ್ಟಿಟ್ಟ ಬುತ್ತಿ: ಗೃಹ ಸಚಿವ ಪರಮೇಶ್ವರ್
ದುಡ್ಡಿದ್ದವರಿಗೆ, ವಿದ್ಯಾವಂತರಿಗೆ, ಬಡವರಿಗೆ ಬೇರೆಬೇರೆ ಕಾನೂನುಗಳನ್ನು ರೂಪಿಸಿಲ್ಲ.ಎಲ್ಲರಿಗೂ ಒಂದೇ ರೀತಿಯ ಮತದಾನದ ಹಕ್ಕನ್ನು ಕಲ್ಪಿಸಲಾಗಿದೆ. ನಾವೆಲ್ಲ ಕಾನೂನು ಪರಿಪಾಲನೆ ಮಾಡಬೇಕು. ಇಲ್ಲವಾದರೆ ಶಿಕ್ಷೆ ಅನುಭವಿಸುವುದು ಕಟ್ಟಿಟ್ಟ ಬುತ್ತಿ ಎಂದರು.
ಬೆಂಗಳೂರು :ಈ ನೆಲದಲ್ಲಿ ಉಳ್ಳವರಿಗೂ,ಬೀದಿಯಲ್ಲಿ ಕೂಲಿ ಕೆಲಸ ಮಾಡುವರಿಗೂ ಒಂದೇ ಕಾನೂನು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ ರಾಷ್ಟ್ರಪತಿಗಳ ಹಾಗೂ ಮುಖ್ಯಮಂತ್ರಿಗಳ ಪದಕ ಪ್ರಧಾನ ಮತ್ತು ಸನ್ನಡತೆಯ ಶಿಕ್ಷಾ ಬಂದಿಗಳ ಅವಧಿಪೂರ್ವ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.
ದುಡ್ಡಿದ್ದವರಿಗೆ, ವಿದ್ಯಾವಂತರಿಗೆ, ಬಡವರಿಗೆ ಬೇರೆಬೇರೆ ಕಾನೂನುಗಳನ್ನು ರೂಪಿಸಿಲ್ಲ.ಎಲ್ಲರಿಗೂ ಒಂದೇ ರೀತಿಯ ಮತದಾನದ ಹಕ್ಕನ್ನು ಕಲ್ಪಿಸಲಾಗಿದೆ. ನಾವೆಲ್ಲ ಕಾನೂನು ಪರಿಪಾಲನೆ ಮಾಡಬೇಕು. ಇಲ್ಲವಾದರೆ ಶಿಕ್ಷೆ ಅನುಭವಿಸುವುದು ಕಟ್ಟಿಟ್ಟ ಬುತ್ತಿ ಎಂದರು.
ಇದನ್ನೂ ಓದಿ : ಕೆ.ಸಿ ಜನರಲ್ ಜನಪ್ರಿಯ ಆಸ್ಪತ್ರೆಯಾಗಿಸಲು 200 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯ: ಸಚಿವ ದಿನೇಶ್ ಗುಂಡೂರಾವ್
ಮನುಷ್ಯ ಪ್ರಕೃತಿಯ ನಿಯಮವನ್ನು ಅರ್ಥ ಮಾಡಿಕೊಳ್ಳಬೇಕು.ಉತ್ತಮವಾಗಿ ನಡೆದುಕೊಂಡರೆ ಸಮಾಜ ಗುರುತಿಸುತ್ತದೆ.ಕೆಲ ಸಂದರ್ಭಗಳಲ್ಲಿ ನಮಗೆ ಗೊತ್ತಿದ್ದೋ, ಗೊತ್ತಿಲ್ಲದೆಯೋ ಆ ಕ್ಷಣಾರ್ಧದಲ್ಲಿ ತೆಗೆದುಕೊಳ್ಳುವ ತೀರ್ಮಾನದಿಂದ ತಪ್ಪುಗಳನ್ನು ಮಾಡಿರುತ್ತೇವೆ. ತಪ್ಪುಗಳನ್ನು ತಿದ್ದಿಕೊಳ್ಳಬೇಕು.ಇದರ ಪಶ್ಚಾತಾಪದಿಂದ ಜೀವನದ ಹೊಸ ಹಾದಿಯತ್ತ ಸಾಗಬೇಕು ಎಂದು ಹೇಳಿದರು.
ಮಾಡಿದ ತಪ್ಪನ್ನು ತಿದ್ದಿಕೊಂಡವರಿಗೆ ಕಾನೂನಿನಲ್ಲಿ ಮತ್ತೊಂದು ಅವಕಾಶ ಕಲ್ಪಿಸಲಾಗಿದೆ.ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲಾಗುತ್ತಿದೆ. ಈ ಹಿಂದೆ ವರ್ಷಕ್ಕೆ ಎರಡು ಬಾರಿ ಬಿಡುಗಡೆ ಮಾಡಲಾಗುತ್ತಿತ್ತು. ಇದೀಗ ಸನ್ನಡತೆಆಧಾರದ ಮೇಲೆ ಸುಪ್ರೀಂ ಕೋರ್ಟ್ ಆದೇಶದಂತೆ ವರ್ಷಕ್ಕೆ ಮೂರು ಬಾರಿ ಬಿಡುಗಡೆ ಮಾಡಲಾಗುತ್ತಿದೆ.ನಿಮ್ಮಲ್ಲಿಯೇ ಪರಿವರ್ತನೆ ತಂದುಕೊಂಡರೆ, ಸಮಾಜದಲ್ಲಿ ಬದುಕಲು ಮತ್ತೊಂದು ಅವಕಾಶ ಸಿಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ : ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ
ಜೀವನ ತುಂಬ ವೇಗವಾಗಿ ಸಾಗುತ್ತಿದೆ. ಯಾವುದೇ ಕಾರಣಕ್ಕೂ ಮತ್ತೊಂದು ತಪ್ಪನ್ನು ಮಾಡಬೇಡಿ.ನಿಮ್ಮ ಕುಟುಂಬದ ಜೊತೆ ಉಳಿದ ಜೀವನವನ್ನು ಸಾಗಿಸಬೇಕು ಎಂದು ಕಿವಿಮಾತು ಹೇಳಿದರು.
ರಾಜ್ಯದ 54 ಕಾರಾಗೃಹಗಳಲ್ಲಿ 15 ಸಾವಿರಕ್ಕೂ ಹೆಚ್ಚು ಜನರಿದ್ದಾರೆ. ಎಲ್ಲರನ್ನು ಸುರಕ್ಷಿತವಾಗಿಡಬೇಕು, ವಿವಿಧ ಕೌಶಲ ತರಬೇತಿ, ಶಿಕ್ಷಣದ ಮೂಲಕ ಅವರನ್ನು ಸುಧಾರಿಸಿ ಪರಿವರ್ತನೆ ತರುವ ಜವಾಬ್ದಾರಿಯು ಇಲಾಖೆಯ ಮೇಲಿದೆ.ಈ ನಿಟ್ಟಿನಲ್ಲಿ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು ಅನೇಕ ಬೇಡಿಕೆಗಳ ಪ್ರಸ್ತಾವನೆಯನ್ನು ಸರ್ಕಾರದ ಮುಂದೆ ಇಟ್ಟಿದ್ದಾರೆ.ಎಲ್ಲ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.