ಬೆಂಗಳೂರು : ಬಜೆಟ್ ನಲ್ಲಿ (Budget 2021)ಎಲ್ಲವನ್ನೂ ಏರಿಸಿರುವ ಕೇಂದ್ರ ತನ್ನದು ‘ಆತ್ಮನಿರ್ಭರ ಭಾರತ’ ರೂಪಿಸುವ ಬಜೆಟ್‌ ಎಂದು ಆತ್ಮವಂಚನೆಯ ಮಾತುಗಳನ್ನಾಡುತ್ತಿದೆ. ಇಷ್ಟು ಏರಿಕೆಗಳನ್ನು ಕಂಡ ಭಾರತವು ಆತ್ಮನಿರ್ಭರತೆಯನ್ನು (Aathma Nirbhar) ಸಾಧಿಸಲು ಸಾಧ್ಯವೇ? ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಪ್ರಶ್ನಿಸಿದ್ದಾರೆ. ಡೀಸೆಲ್‌, ಪೆಟ್ರೋಲ್‌ ಈಗಾಗಲೇ ಏರುತ್ತಿದೆ. ಅದರ ಜೊತೆಗೆ ಈಗಿನ ಭಾರಿ ಏರಿಕೆ ಪರಿಣಾಮ ಏನಾಗಲಿದೆ ಎಂದು ಕೇಂದ್ರ ಯೋಚಿಸಿದಂತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 


COMMERCIAL BREAK
SCROLL TO CONTINUE READING

ಏರಿಕೆಗಳನ್ನು ಸಮರ್ಥಿಸಿಕೊಳ್ಳುತ್ತಾ ಕೃಷಿ ಸೆಸ್‌ ಅನ್ನು ಕೇಂದ್ರ ಸರ್ಕಾರ ಮುಂದಿಟ್ಟಿದೆ. ಒಂದೆಡೆ ರೈತರನ್ನು (Farmers) ದೇಶದ್ರೋಹಿಗಳೆಂದು ಬಿಂಬಿಸುವ ಸರ್ಕಾರ ತನ್ನ ರಕ್ಷಣೆಗೆ ಮಾತ್ರ ಕೃಷಿ ಕ್ಷೇತ್ರದ ನೆರವು ಪಡೆದಂತಿದೆ. ಕೃಷಿ ಸೆಸ್‌ನಿಂದ ಸಂಗ್ರಹವಾಗುವ ಹಣವನ್ನು ಕೃಷಿ ರಂಗದ (Agriculture) ಅಭಿವೃದ್ದಿಗೆ ಬಳಸಲಾಗುತ್ತದೆಯೇ ಎಂಬುದರ ವಿವರಣೆಯೇ ಬಜೆಟ್‌ನಲ್ಲಿ ಇಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.


Budget 2021 : ಸೂಪರ್ ಸುದ್ದಿ ..! ಚಿನ್ನ ಇನ್ನು ಅಗ್ಗವಾಗಲಿದೆ, ಮಾರ್ಕೆಟ್ ರೇಟ್ ಕೂಡಾ ಇಳಿದಿದೆ



2020-21ರಲ್ಲಿ 9.5% ಮತ್ತು 2022ರಲ್ಲಿ 6.8% ವಿತ್ತೀಯ ಕೊರತೆ ಇರುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಇದು ಒಂದು ಅರ್ಥವ್ಯವಸ್ಥೆಯಲ್ಲಿನ ಭೀಕರ ಪರಿಸ್ಥಿತಿಯೇ ಸರಿ. ಈ ಕೊರತೆಯನ್ನು ಸರ್ಕಾರ ಎಲ್ಲಿಂದ ತುಂಬಿಸಿಕೊಳ್ಳುತ್ತದೆ? ಎಂದು ಹೆಚ್ ಡಿಕೆ (HDK) ಪ್ರಶ್ನಿಸಿದ್ದಾರೆ. ಇದರ ಪರಿಹಾರಕ್ಕಾಗಿ ನೋಟು (Note) ಪ್ರಿಂಟು ಮಾಡಲು ಆಗುವುದಿಲ್ಲ. ಕಡೆಗೆ ಅದು ಬ್ಯಾಂಕ್‌ಗಳಿಗೆ (Bank) ಕೈಹಾಕುತ್ತದೆ ಎಂದಿದ್ದಾರೆ. ಭಾರಿ ಪ್ರಮಾಣದ ವಿತ್ತೀಯ ಕೊರತೆಯನ್ನು ನೀಗಿಸಿಕೊಳ್ಳಲು ಕೇಂದ್ರ ಸರ್ಕಾರವು ಮುಂದಿನ ದಿನಗಳಲ್ಲಿ ಬ್ಯಾಂಕ್‌ಗಳಲ್ಲಿನ ಸಂಪನ್ಮೂಲವನ್ನು ಅಕ್ಷರಶಃ ದೋಚಲು ಆರಂಭಿಸುತ್ತದೆ. ಇದು ಮತ್ತೊಂದು ಆರ್ಥಿಕ ವಿಷಮ ಪರಿಸ್ಥಿತಿಗೆ ಕಾರಣವಾಗುತ್ತದೆ. ಅದರ ಪರಿಣಾಮ ಸಾಮಾನ್ಯ ಜನರ ಮೇಲೆ ಆಗುತ್ತದೆ. ಜನರ ಶೋಷಣೆಗೆ ಇದು ಕಾರಣವಾಗುವುದರಲ್ಲಿ ಅನುಮಾನವೇ ಇಲ್ಲ ಎಂದು ಕುಮಾರಸ್ವಾಮಿ (Kumaraswamy) ಹೇಳಿದ್ದಾರೆ.


 


15ನೇ ಹಣಕಾಸು ಆಯೋಗದ ಪ್ರಕಾರ ರಾಜ್ಯಗಳು ಶೇ. 41ರಷ್ಟು ತೆರಿಗೆ ಪಾಲು ಹೊಂದಿರುವುದಾಗಿಯೂ, ಅದನ್ನು ಕೇಂದ್ರ ಸರ್ಕಾರ ಒಪ್ಪಿರುವುದಾಗಿಯೂ ವಿತ್ತ ಮಂತ್ರಿ ಹೇಳಿದ್ದಾರೆ. ಆದರೆ, ರಾಜ್ಯಗಳ ಪಾಲನ್ನು ಕೇಂದ್ರ ಸರ್ಕಾರ ಈ ವರೆಗೆ ಸರಿಯಾಗಿ ನೀಡಿಲ್ಲ. ಪಾಲನ್ನು ತೋರಿಸುವುದು, ಪಾಲು ನೀಡದೇ ವಂಚಿಸುವುದು ಕೇಂದ್ರ ಪಾಲಿಸಿಕೊಂಡು ಬಂದ ಪರಿಪಾಠವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಪಾದಿಸಿದ್ದಾರೆ.


ಇದನ್ನೂ ಓದಿ : Budget 2021: Home Loan ಪಡೆಯಬೇಕೆನ್ನುವವರಿಗೆ ಇಲ್ಲಿದೆ ಸಂತಸದ ಸುದ್ದಿ


ಹೋದಲ್ಲಿ, ಬಂದಲ್ಲಿ ಅಭಿವೃದ್ಧಿಯ ಮಂತ್ರ ಜಪಿಸುವ ಕೇಂದ್ರ ಸರ್ಕಾರ ಮುಂದಿನ ವರ್ಷ ₹12 ಲಕ್ಷ ಕೋಟಿ ಸಾಲ ಮಾಡುವುದಾಗಿ ಹೇಳಿಕೊಂಡಿದೆ. ಯಾಕೆ ಇಷ್ಟು ದೊಡ್ಡ ಮೊತ್ತದ ಸಾಲ? ಈ ಬಗ್ಗೆ ಸರ್ಕಾರದ ಬಳಿ ವಿವರಣೆಗಳೇನಾದರೂ ಇದೆಯೇ? ಈ ಸಾಲದಿಂದ ಆಗಬಹುದಾದ ಘನವಾದ, ಪ್ರಮುಖವಾದ ಕಾರ್ಯವಾದರೂ ಏನು ಎಂಬುದನ್ನು ಕೇಂದ್ರ ಸರ್ಕಾರ (Central government) ಹೇಳುತ್ತದೆಯೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.


Covid ಲಸಿಕೆಗಾಗಿ ₹35 ಸಾವಿರ ಕೋಟಿ ನೀಡುವುದಾಗಿಯೂ, ಬೇಕಿದ್ದರೆ ಇನ್ನಷ್ಟು ನೀಡುವುದಾಗಿಯೂ ಕೇಂದ್ರ ಹೇಳಿದೆ. ಇತರ ದೇಶಗಳಿಗೆ ಲಸಿಕೆ ಕಳುಹಿಸುತ್ತಿರುವುದಾಗಿಯೂ ಹೇಳಿದೆ. ಈ ಎಲ್ಲ ಬಣ್ಣನೆಗಳನ್ನು ಬಿಟ್ಟು ಕೇಂದ್ರ ಸರ್ಕಾರ 130 ಕೋಟಿ ಜನರಿಗೆ ಉಚಿತ ಲಸಿಕೆಯನ್ನು (Vaccine) ಖಚಿತ ಮಾಡಬೇಕಿತ್ತು. ಆದರೆ, ಸರ್ಕಾರ ಬಣ್ಣನೆಯಲ್ಲಿ ಮಾತು ಮುಗಿಸಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.