‘ರಾಷ್ಟ್ರಮಟ್ಟದಲ್ಲಿ ಕನ್ನಡ ಚಿತ್ರಗಳು ಯಶಸ್ಸು ಕಾಣುತ್ತಿರುವುದಕ್ಕೆ ಹಿಂದಿ ನಟರು ನಂಜು ಕಾರುತ್ತಿದ್ದಾರೆ’
ಒಂದು ಧರ್ಮ, ಒಂದು ಭಾಷೆ, ಒಂದು ಸಂಸ್ಕೃತಿಯನ್ನು ಹೇರುವುದು ಜನವಿರೋಧಿ ಮಾತ್ರವಲ್ಲ ಸಂವಿಧಾನ ವಿರೋಧಿ ಕೂಡ ಆಗಿದೆ ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಬೆಂಗಳೂರು: ನಮ್ಮ ಚಂದನವನದ ಕನ್ನಡ ಚಿತ್ರಗಳು, ಬಾಲಿವುಡ್ ಚಿತ್ರಗಳಿಗೆ ಸೆಡ್ಡು ಹೊಡೆದು ರಾಷ್ಟ್ರಮಟ್ಟದಲ್ಲಿ ಯಶಸ್ಸು ಕಾಣುವುದನ್ನು ಸಹಿಸದ ಹಿಂದಿ ಚಿತ್ರನಟರು ಕನ್ನಡದ ವಿರುದ್ಧ ನಂಜು ಕಾರುತ್ತಿದ್ದಾರೆ. ಕನ್ನಡ ಚಿತ್ರರಂಗ ಇದಕ್ಕೆ ಒಕ್ಕೊರಲಿನ ಉತ್ತರ ನೀಡಬೇಕಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
‘ಕಾಂಗ್ರೆಸ್ ಬಹು ಧರ್ಮ, ಬಹುಭಾಷೆ, ಬಹು ಸಂಸ್ಕೃತಿಗಳನ್ನೊಳಗೊಂಡ ಬಹುತ್ವವನ್ನು ಒಪ್ಪಿಕೊಂಡ, ಅಪ್ಪಿಕೊಂಡ ಪಕ್ಷ. ಒಂದು ಧರ್ಮ, ಒಂದು ಭಾಷೆ, ಒಂದು ಸಂಸ್ಕೃತಿಯನ್ನು ಹೇರುವುದು ಜನವಿರೋಧಿ ಮಾತ್ರವಲ್ಲ ಸಂವಿಧಾನ ವಿರೋಧಿ ಕೂಡ ಆಗಿದೆ. ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಬಿಜೆಪಿ ನಾಯಕರ ಕುತಂತ್ರದ ರಾಜಕಾರಣವನ್ನು ಸ್ವಾಭಿಮಾನಿ ಕನ್ನಡಿಗರೆಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕಾಗಿದೆ. ನಮ್ಮೆದುರಿಗೆ ಗೋಕಾಕ್ ಹೋರಾಟದ ಮಾದರಿ ಇದೆ’ ಎಂದು ಟ್ವೀಟ್ ಮಾಡಿದ್ದಾರೆ.
HD Kumaraswamy : 'ಹುಬ್ಬಳ್ಳಿಯ ಪೊಲೀಸರನ್ನು ನಾನು ಅಭಿನಂದಿಸುತ್ತೆನೆ'
ಐಸ್‍ಕ್ರೀಮ್ ಬಾಕ್ಸ್ ನಲ್ಲಿದ್ದ ಜವರಾಯ: ಬಾಲಕಿಯರ ಸಾವಿನ ‘ಕಣ್ಣಾಮುಚ್ಚಾಲೆ’ ಆಟ..!
ಬಿಜೆಪಿ ನಾಯಕರು ಅವರನ್ನು ಓಲೈಸಲು ಸಾಲಲ್ಲಿ ನಿಂತಿದ್ದಾರೆ. ಬಿಜೆಪಿ ನಾಯಕರೇ, ಅಮಿತ್ ಶಾ ಅವರ ಗುಲಾಮರಾಗಬೇಡಿ, ಕನ್ನಡ ತಾಯಿಯ ಸ್ವಾಭಿಮಾನಿ ಮಕ್ಕಳಾಗಿ’ ಎಂದು ಕುಟುಕಿರುವ ಸಿದ್ದರಾಮಯ್ಯ ‘ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ನಾನು ರಾಜಕೀಯ ಜೀವನ ಪ್ರಾರಂಭಿಸಿದವನು. ನಾನು ಇಂದು, ಮುಂದು, ಎಂದೆಂದೂ ಒಬ್ಬ ಕನ್ನಡದ ಕಾವಲುಗಾರ. ಕಳ್ಳರ ಜೊತೆ ಷಾಮೀಲಾಗುವ ಡೋಂಗಿ ಚೌಕಿದಾರ ಅಲ್ಲ’ ಎಂದು ಹಿಂದಿ ಹೇರಿಕೆ ವಿರುದ್ಧ ಖಡಕ್ ಆಗಿ ಎಚ್ಚರಿಕೆ ನೀಡಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.