ಬೆಂಗಳೂರು: ರಾಜ್ಯ ಸರ್ಕಾರ ಜನರ ಮೇಲೆ ಹೆಚ್ಚಿನ ತೆರಿಗೆ ಹಾಕದೆ, ಹೆಚ್ಚಿನ ಸಾಲ ಮಾಡದೇ 5 ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡಬೇಕು. ಇದರ ಹೊರತಾಗಿ ತೆರಿಗೆ ಹಾಕಿದರೆ ಜನ ವಿರೋಧಿ ಗ್ಯಾರಂಟಿಗಳಾಗುತ್ತವೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ರಾಜ್ಯಪಾಲರ ಭಾಷಣದ ಕುರಿತು ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ರಾಜ್ಯಪಾಲರ ಭಾಷಣ ನೋಡಿದಾಗ ಜನರ ನಿರೀಕ್ಷೆ ಈಡೇರಿಸುವ, ಭಿನ್ನ ಆಡಳಿತ ನೀಡುವ ಭರವಸೆ ಇಲ್ಲ. ಚರ್ವಿತ ಚರ್ವಣ ಭಾಷಣ ಇದಾಗಿದೆ’ ಎಂದು ಹೇಳಿದರು.
ಇದನ್ನೂ ಓದಿ: "ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಅಧಿಕಾರವಿಲ್ಲದೆ ಹತಾಶರಾಗಿದ್ದಾರೆ"-ಸಿಎಂ ಸಿದ್ದರಾಮಯ್ಯ
ಚುನಾವಣೆಯ ಸಂದರ್ಭದಲ್ಲಿ ಗ್ಯಾರಂಟಿಗಳನ್ನು ಸಾಮಾನ್ಯ ಆಶ್ವಾಸನೆಗಳನ್ನೇ ವಿಶೇಷವೆಂದು ಬಿಂಬಿಸಿದ್ದಾರೆ. ಗ್ಯಾರಂಟಿಗಳಿಗೆ ಜನರು ಮರುಳಾಗಿದ್ದಾರೋ ಗೊತ್ತಿಲ್ಲ, ಮನ್ನಣೆ ಕೊಟ್ಟಿದ್ದಾರೆ. ಜನರು ನೀವು ಕೊಟ್ಟ ಮಾತುಗಳನ್ನು ಹೆಚ್ಚು ನಂಬಿದ್ದಾರೆ. ಎಲ್ಲರಿಗೂ ಗೃಹಲಕ್ಷ್ಮಿ, ಎಲ್ಲರಿಗೂ 10 ಕೆಜಿ ಉಚಿತ ಅಕ್ಕಿ, ಎಲ್ಲರಿಗೂ ಗೃಹಜ್ಯೋತಿ, ಡಿಗ್ರಿಯಾದವರಿಗೆ ನಿರುದ್ಯೋಗ ಭತ್ಯೆ ಅಂತಾ ಹೇಳಿದ್ದೀರಿ. ಈಗ ಎಲ್ಲದಕ್ಕೂ ಕಂಡಿಷನ್ ಹಾಕಿ ಎಲ್ಲದಕ್ಕೂ ಏಜೆಂಟ್ಗಳು ಹುಟ್ಟಿಕೊಂಡಿದ್ದಾರೆ ಎಂದು ಆರೋಪಿಸಿದರು.
ಬಸ್ ಪ್ರಯಾಣ ಮಾತ್ರ ಆರಂಭವಾಗಿದೆ. ಅಕ್ಕಿ ಬದಲು ದುಡ್ಡು ಕೊಡುವುದಾಗಿ ಹೇಳಿದ್ದಾರೆ. ನೀವು ಕೊಡುವ ಹಣಕ್ಕೆ ಎರಡೂವರೆ ಕೆಜಿ ಅಕ್ಕಿ ಬರುತ್ತದೆ. ನೀವು ಘೋಷಣೆ ಮಾಡಿರುವಂತೆ ಎಲ್ಲಾ ಯೋಜನೆಗಳ ಜಾರಿಗೆ 52 ಸಾವಿರ ಕೋಟಿ ರೂ. ಖರ್ಚಾಗುತ್ತದೆ ಅಂತಾ ನೀವೇ ಹೇಳಿದ್ದೀರಿ. ಆದರೆ ಎಲ್ಲದಕ್ಕೂ ಕಂಡಿಷನ್ ಹಾಕಿರೋದರಿಂದ ಸುಮಾರು 20 ರಿಂದ 25 ಸಾವಿರ ಕೊಟಿ ರೂ. ಮಾತ್ರ ಖರ್ಚಾಗಬಹುದು.
ಇದನ್ನೂ ಓದಿ: ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಶ್ವಾನಗಳದ್ದೇ ದರ್ಬಾರ್..! ಬೌಬೌ.. ಸೌಂಡ್ಸ್ಗೆ ರೋಗಿಗಳ ಬೇಸರ
ರಾಜ್ಯದಲ್ಲಿ ಜಿಎಸ್ಟಿ ಸಂಗ್ರಹ ಹೆಚ್ಚಾಗಿದೆ. ಇತರ ಟ್ಯಾಕ್ಸ್ ಸಂಗ್ರಹ ಕೂಡ ಹೆಚ್ಚಾಗಿದೆ. ಈ ಸರ್ಕಾರ ಹೆಚ್ಚಿನ ಸಾಲ ತೆಗೆದುಕೊಳ್ಳುವ ಅಗತ್ಯವಿಲ್ಲ. ನಾನು ಸರಪ್ಲಸ್ ಬಜೆಟ್ ಮಂಡನೆ ಮಾಡಿದ್ದೇನೆ. 78 ಸಾವಿರ ಕೋಟಿ ರೂ. ಸಾಲ ತೆಗೆದುಕೊಳ್ಳಲು ಅವಕಾಶವಿದೆ. ಅಷ್ಟು ಮಾತ್ರ ತೆಗೆದುಕೊಂಡರೆ ಸಾಕು. ಮೂಲ ಸೌಕರ್ಯ ಅಭಿವೃದ್ಧಿಗೆ ನಮ್ಮ ಸರ್ಕಾರ ಮೀಸಲಿಟ್ಟ ಹಣವನ್ನು ಬಳಕೆ ಮಾಡಬಹುದು. ಎಲ್ಲಾ ನೀರಾವರಿ ಯೋಜನೆ, ಶಿಕ್ಷಣ ಇಲಾಖೆ ಯೋಜನೆ, ಕೃಷಿ ಹಾಗೂ ಸೇವಾ ವಲಯಕ್ಕೆ ಆದ್ಯತೆ ನೀಡಬೇಕು. ಅದನ್ನು ಬಿಟ್ಟು ಜನರ ದುಡ್ಡನ್ನು ಕಸಿದುಕೊಂಡು ಇನ್ನೊಂದು ಕಡೆ ಕೊಟ್ಟ ಹಾಗೆ ಆಗುತ್ತದೆ ಎಂದು ಹೇಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.